ಕಾಂಗ್ರೆಸ್ ಅಭ್ಯರ್ಥಿಯಾಗಿ ಮೊಯ್ಲಿ ನಾಮಪತ್ರ ಸಲ್ಲಿಕೆ
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೇಂದ್ರ ಸಚಿವ ಎಂ. ವೀರಪ್ಪ ಮೊಯ್ಲಿ ನಾಮಪತ್ರ ಸಲ್ಲಿಸಿದರು.
ತಾಲೂಕಿನ ನಂದಿಯ ಶ್ರೀ ಭೋಗನಂದೀಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದ ಅವರು, ನಗರದ ಹೊರ ವಲಯದಲ್ಲಿರುವ ಜಿಲ್ಲಾಡಳಿತ ಭವನಕ್ಕೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಡಾ. ವಿಶಾಲ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.
ನಂತರ ರ್ಯಾಲಿಯಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿ, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ರಾಜಕೀಯವಾಗಿ ತಮಗೆ ಪುನರ್ ಜನ್ಮ ನೀಡಿದ ಕ್ಷೇತ್ರವಾಗಿದೆ. ಇಲ್ಲಿನ ಜನರು ಕಳೆದ ಲೋಕಸಭಾ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲುವನ್ನು ತಂದು ಕೊಟ್ಟರು. ಇದರಿಂದ ಕೇಂದ್ರದಲ್ಲಿ ಸಚಿವರಾಗಿ ಈ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಲು ಸಾಧ್ಯವಾಯಿತು. ಇಲ್ಲಿನ ಜನರ ಪ್ರೀತಿಯನ್ನು ಎಂದೂ ಮರೆಯುವುದಿಲ್ಲ ಎಂದರು.
ಈಗಾಗಲೇ ಎತ್ತಿನಹೊಳೆ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. ಇನ್ನು ಒಂದೆರಡು ವರ್ಷದೊಳಗೆ ಆ ಯೋಜನೆಯ ಮೂಲಕ ನೀರಾವರಿ ಸೌಲಭ್ಯ ಸಿಗುತ್ತದೆ. ರಸ್ತೆ, ಚರಂಡಿ ಅಭಿವೃದ್ಧಿ ಸೇರಿದಂತೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ತಮ್ಮ ಅನುದಾನದಲ್ಲಿ ಹೆಚ್ಚಿಗೆ ಹಣ ನೀಡಿದ್ದು ಮುಂದಿನ ದಿನಗಳಲ್ಲೂ ಅಭಿವೃದ್ಧಿಗೆ ಶ್ರಮಿಸಲು ತಮಗೆ ಬೆಂಬಲ ನೀಡಬೇಕೆಂದರು. ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸಬೇಕು. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಪಣತೊಡಬೇಕೆಂದರು. ಈ ಸಂದರ್ಭದಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಡಾ.ಕೆ. ಸುಧಾಕರ್, ಎಸ್.ಎನ್. ಸುಬ್ಬಾರೆಡ್ಡಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

