ಕಾಂಗ್ರೆಸ್ ಅಬ್ಬರದ ಪ್ರಚಾರ
ಟೇಕಲ್: ರಾಹುಲ್ ಗಾಂಧಿಯವರನ್ನು ಪ್ರಧಾನಿ ಮಾಡಲು ಈ ಬಾರಿ ಜನತೆ ಕೆ.ಎಚ್. ಮುನಿಯಪ್ಪನವರ ಕೈ ಬಲಪಡಿಸಬೇಕೆಂದು ಕಾಂಗ್ರೆಸ್ ತಾಲೂಕು ಮುಖಂಡ ಚನ್ನಕೇಶವ ತಿಳಿಸಿದರು. ಬನಹಳ್ಳಿಯಲ್ಲಿ ಮಾಸ್ತಿ ಮತ್ತು ಕಸಬಾ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ಕರೆ ನೀಡಿದರು.
ಕಾಂಗ್ರೆಸ್ ಸೇರ್ಪಡೆ: ಇದೇ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಪೆಳವನಹಳ್ಳಿ ಜಯರಾಮ್ ನೇತೃತ್ವದಲ್ಲಿ ಬಿಜೆಪಿ ತೊರೆದು 150ಕ್ಕೂ ಹೆಚ್ಚು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾದರು. ಮುಖಂಡ ಚನ್ನಕೇಶವ ಇವರನ್ನು ಬರಮಾಡಿಕೊಂಡರು. ಟೇಕಲ್ನಲ್ಲಿ ಕಾಂಗ್ರೆಸ್ ಮುಖಂಡ ಪ್ರಕಾಶ್ ಶೆಟ್ಟಿ ನೇತೃತ್ವದಲ್ಲಿ ಗ್ರಾಪಂ ಸದಸ್ಯ ಶ್ರೀರಾಮ್, ಮುನಿಯಪ್ಪಗೌಡ, ಮುನಿಯಪ್ಪ ಮುಂತಾದವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.
ಕೆಪಿಸಿಸಿ ಕಾರ್ಯದರ್ಶಿ ಎಸ್.ಎನ್. ರಘುನಾಥ್, ಚನ್ನರಾಯಪ್ಪ, ಮುನಿರಾಜು, ಕೆಪಿಸಿಸಿ ಸದಸ್ಯ ಆರ್. ರಾಜಣ್ಣ, ಟಿ.ಎಂ. ಅಶೋಕ್ಕುಮಾರ್, ಟಿ.ಬಿ. ಕೃಷ್ಣಪ್ಪ, ಬಿ.ಕೆ. ನಾರಾಯಣಸ್ವಾಮಿ, ಯಲ್ಲಪ್ಪ, ಬನಹಳ್ಳಿ ನಾರಾಯಣಪ್ಪ ಇದ್ದರು. ಇದೇ ಸಂದರ್ಭದಲ್ಲಿ ಹುಳದೇನಹಳ್ಳಿ, ಟೇಕಲ್, ತೊರಲಕ್ಕಿ, ನೂಟವೆ ಗ್ರಾಮಗಳಲ್ಲೂ ಕಾರ್ಯಕರ್ತರ ಸಭೆಗಳನ್ನು ನಡೆಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

