'ಕಾಂಗ್ರೆಸ್ ಅಭ್ಯರ್ಥಿ ನನ್ನ ಪ್ರತಿಸ್ಪರ್ಧಿ'
ಕೋಲಾರ: ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ನನಗೆ ಕಾಂಗ್ರೆಸ್ಸಿನ ಕೆ.ಎಚ್. ಮುನಿಯಪ್ಪ ಪ್ರತಿಸ್ಪರ್ಧಿಯೇ ಹೊರತು ಜೆಡಿಎಸ್ನ ಕೆ.ಕೇಶವ ಅಲ್ಲ ಎಂದು ಬಿಜೆಪಿಯ ಹುರಿಯಾಳು ಎಂ. ನಾರಾಯಣಸ್ವಾಮಿ ತಿಳಿಸಿದರು.
ಶುಕ್ರವಾರ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಇತ್ತೀಚೆಗಷ್ಟೇ ಜೆಡಿಎಸ್ ತನಗೆ ಪ್ರತಿಸ್ಪರ್ಧಿ ಎಂದು ಹೇಳಿದ್ದು ನಿಜ. ಆದರೆ, ಕಳೆದೆರಡು ದಿನಗಳ ರಾಜಕೀಯ ವಿದ್ಯಮಾನಗಳನ್ನು ಗಮನಿಸಿ ಹೇಳುವುದಾದರೆ ಕಾಂಗ್ರೆಸ್ನ ಕೆ.ಎಚ್. ಮುನಿಯಪ್ಪನವರೇ ತನಗೆ ಎದುರಾಳಿ ಎಂದು ಉಲ್ಟಾ ಹೊಡೆದರು.
ನರೇಂದ್ರ ಮೋದಿಯ ಅಲೆ ಜೋರಾಗಿದೆ. ಎಲ್ಲಾ ಪಕ್ಷಗಳಲ್ಲಿನ ಕಾರ್ಯಕರ್ತರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ, ಕೋಲಾರ ಕ್ಷೇತ್ರದಲ್ಲಿ ಈ ಬಾರಿ ಮತದಾರರು ಬದಲಾವಣೆ ಬಯಸುತ್ತಿರುವುದರಿಂದ ತಮ್ಮ ಪರವಾದ ವಾತಾವರಣ ಕಾಣಬರುತ್ತಿದೆ ಎಂದು ಅಭಿಪ್ರಾಯಸಿದರು.
ತನಗೆ ಟಿಕೆಟ್ ಸಿಕ್ಕಿರುವುದಕ್ಕೆ ಡಿ.ಎಸ್. ವೀರಯ್ಯ ಅಸಮಾಧಾನಗೊಂಡಿದ್ದಾರೆ, ನಾಮಪತ್ರ ಸಲ್ಲಿಕೆ ವೇಳೆ ಅವರು ಕಾಣಿಸಿಕೊಂಡಿಲ್ಲ, ಇದರಿಂದ ಪ್ರತಿಕೂಲವಾಗುವುದಿಲ್ಲವೇ ಎಂದು ಪತ್ರಕರ್ತರು ಕೇಳಿದಾಗ, ವೀರಯ್ಯ ಯಾವುದೇ ಕಾರಣಕ್ಕೂ ಪಕ್ಷಕ್ಕೆ ದ್ರೋಹ ಬಗೆಯಲ್ಲ, ಇಂದು ಪಕ್ಷದ ಮತ್ತೊಬ್ಬ ಹಿರಿಯರು ನಾಮಪತ್ರ ಸಲ್ಲಿಸುತ್ತಿರುವುದರಿಂದ ಅಲ್ಲಿಗೆ ಹೋಗಿದ್ದಾರೆ. ಚುನಾವಣಾ ಪ್ರಚಾರಕ್ಕೆ ಬಂದೇ ಬರುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

