ನಾಗರಾಜು ಚಿತ್ತ ಎತ್ತ?
ಟೇಕಲ್: ಕಾಂಗ್ರೆಸ್ಸಿನ ಮಾಜಿ ಶಾಸಕ ಎ. ನಾಗರಾಜು ಅವರ ದಾರಿ ಯಾವುದು ಎಂಬುದು ಕುತೂಹಲ ಮೂಡಿಸಿದೆ.
ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಶಾಸಕರ ಸ್ಥಾನಕ್ಕೆ ಕಾಂಗ್ರೆಸ್ ನಿಂತಾಗ ಈಗಿನ ಲೋಕಸಭಾ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರು ತಮ್ಮ ಒಳ ರಾಜಕೀಯದಿಂದ ನಾಗರಾಜು ಅವರಿಗೆ ಟಿಕೆಟ್ ತಪ್ಪಿಸಿದರು. ಹಾಗೂ ಅದರಿಂದಾಗಿ ನಾಗರಾಜು ಜೆಡಿಎಸ್ಗೆ ತೆರಳಿ ನಂತರ ಅಲ್ಲಿ ಬೇಸತ್ತು ಕೊನೆಗೆ ಹಿಂದಿನ ವಿಧಾನಸಭಾ ಚುನಾವಣಾ ಸಮಯದಲ್ಲಿ ಮತ್ತೆ ತಾಯಿ ಪಕ್ಷಕ್ಕೆ ಮರಳಿದರು. ಈ ಸಂದರ್ಭದಲ್ಲಿಯೂ ಇವರಿಗೆ ಮುನಿಯಪ್ಪ ಅವರಿಂದಾಗಿ ಕಾಂಗ್ರೆಸ್ ಸೇರಲು ಹೆಣಗಾಡಬೇಕಾಯಿತು.
ಎ. ನಾಗರಾಜು ಅವರು 3 ಬಾರಿ ಶಾಸಕರಾಗಿ ಮಾಲೂರು ತಾಲೂಕಿನಲ್ಲಿ ಕಾಂಗ್ರೆಸ್ಅನ್ನು ಭದ್ರಕೋಟೆಯನ್ನಾಗಿ ಮಾಡಿದ್ದರು. ಅದರಲ್ಲೂ ರಾಜ್ಯ ಕಾಂಗ್ರೆಸ್ನ ಕಾರ್ಯದರ್ಶಿಯಾಗಿ 20 ವರ್ಷ ಅನುಭವವಿದ್ದು, ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಇವರ ಚಿತ್ತ ಯಾರ ಕಡೆ? ಏಕೆಂದರೆ ಚುನಾವಣಾ ಪ್ರಕ್ರಿಯೆ ಪ್ರಾರಂಭವಾದ ದಿನದಿಂದ ಇಂದಿನವರೆಗೂ ನಾಗರಾಜು ನಡೆ ಗೌಪ್ಯವಾಗಿದೆ. ಇದುವರೆಗೂ ಯಾವುದೇ ಚುನಾವಣೆ ಸಭೆಗಳಿಗೆ ಹಾಜರಾಗದಿರುವುದು ಕುತೂಹಲ ಮೂಡಿಸಿದೆ. ಇದೀಗ ತಾಲೂಕಿನಲ್ಲಿ ಕಾಂಗ್ರೆಸ್ ಮುಖಂಡರು, ಬ್ಲಾಕ್ ಕಾಂಗ್ರೆಸ್ನವರು ಪ್ರಚಾರದ ಭರಾಟೆಯಲ್ಲಿ ತೊಡಗಿದ್ದು ಆಮಂತ್ರಣ ಸಿಗದಿರುವುದು ನಾಗರಾಜ್ ಬೆಂಬಲಿಗರನ್ನು ಕೆರಳಿಸಿದೆ. ಒಟ್ಟಾರೆ ನಾಗರಾಜ್ ಬೆಂಬಲಿತ ಮತಗಳು ಯಾರ ಪಾಲಾಗಲಿವೆ ಎಂಬುದು ಪ್ರಶ್ನೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

