ಕೋಲಾರ

ನೀರಿನ ಸಮಸ್ಯೆಗೆ ತತ್ತರಿಸಿದ ಜನತೆ

Published On :

ಗುಡಿಬಂಡೆ: ಬೇಸಿಗೆ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ನೀರಿನ ಬಳಕೆ ಹಾಗೂ ಬೇಡಿಕೆ ಹೆಚ್ಚಾಗಿದೆ. ನೀರಿನ ಸಮಸ್ಯೆಯಿಂದ ತಾಲೂಕಿನ ಜನತೆ ತತ್ತರಿಸಿದ್ದಾರೆ.
ತಾಲೂಕು ಹಿಂದುಳಿದ ಹಾಗೂ ಸದಾ ಬರಗಾಲ ಪೀಡಿತ ಪ್ರದೇಶವೆಂಬ ಹಣೆಪಟ್ಟಿಗೆ ಹೆಸರುವಾಸಿಯಾಗಿದೆ. ತಾಲೂಕಿನಲ್ಲಿ ಸುಮಾರು 85 ಗ್ರಾಮಗಳಿದ್ದು, ಎಲ್ಲ ಗ್ರಾಮಗಳಲ್ಲೂ ನೀರಿನ ಸಮಸ್ಯೆ ತಾಂಡವವಾಡುತ್ತಿದೆ. ಕಳೆದ ಸಾಲಿನಲ್ಲಿ ಮಳೆಯ ಅಭಾವದಿಂದ ಅಂತರ್ಜಲ ಮಟ್ಟ ಕುಸಿದು ಕೊಳವೆಬಾವಿಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದ್ದು, ಕೆಲವು ಬತ್ತಿವೆ. ಅಷ್ಟೆ ಅಲ್ಲದೆ ಗ್ರಾಮೀಣ ಭಾಗಗಳಲ್ಲಿ ಕೆರೆ ಕುಂಟೆಗಳು ಬತ್ತಿ ಹೋಗಿರುವುದರಿಂದ ಜಾನುವಾರಿಗೆ ಕುಡಿಯುವ ನೀರು ಮತ್ತು ಮೇವಿಲ್ಲದೆ ಸಾಯುವ ಪರಿಸ್ಥಿತಿ ಬಂದೊದಗಿದೆ. ಗ್ರಾಮಗಳಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಹಲವು ಕಡೆ ಕೊಳವೆ ಬಾವಿಗಳನ್ನು ಕೊರೆಸಿದ್ದರೂ ಪ್ರಯೋಜನವಿಲ್ಲವಾಗಿದೆ.
ಸರ್ಕಾರದ ಲೆಕ್ಕಾಚಾರದ ಪ್ರಕಾರ ಒಬ್ಬ ಮನುಷ್ಯನಿಗೆ ದಿನಂಪ್ರತಿ 70 ಲೀ. ನೀರು ಬಳಕೆಗೆ ಬೇಕಾಗುತ್ತದೆ ಎನ್ನಲಾಗಿದೆ. ಆದರೆ ಗುಡಿಬಂಡೆ ಪಟ್ಟಣದ ಒಟ್ಟು 11 ವಾರ್ಡ್‌ಗಳಲ್ಲಿ ಇತ್ತೀಚಿನ ಅಂಕಿಅಂಶಗಳ ಪ್ರಕಾರ ಸುಮಾರು 10 ಸಾವಿರ ಜನಸಂಖ್ಯೆಯಿದ್ದು, ಲಭ್ಯವಿರುವ ಅಲ್ಪ ಸ್ವಲ್ಪ ನೀರನ್ನು ಎಲ್ಲ ವಾರ್ಡ್‌ಗಳಿಗೂ ಸಾಕಷ್ಟು ಪ್ರಮಾಣದಲ್ಲಿ ಸರಬರಾಜು ಮಾಡಲು ಸ್ಥಳೀಯ ಪಪಂ ಪರದಾಡುತ್ತಿದೆ.
ಬಾಗೇಪಲ್ಲಿ ಮತ್ತು ಗುಡಿಬಂಡೆ ಪಟ್ಟಣಗಳಿಗೆ ಸಮರ್ಪಕ ಕುಡಿಯುವ ನೀರು ಪೂರೈಕೆಗಾಗಿ ನಿರ್ಮಾಣಗೊಂಡಿದ್ದ ಚಿತ್ರಾವತಿ ಜಲಾಶಯ ಸಂಪೂರ್ಣ ಬತ್ತಿಹೋಗಿದ್ದು ಸಮಸ್ಯೆ ಬಿಗಡಾಯಿಸಲು ಮತ್ತೊಂದು ಕಾರಣವಾಗಿದೆ. ಪಟ್ಟಣದ ಹೊರವಲಯದ ಅಮಾನಿ ಭೈರಸಾಗರ ಕೆರೆಯಿಂದ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಆದರೆ ಇದೂ ತಾತ್ಕಾಲಿಕ ಪರಿಹಾರವೇ ಆಗಿದ್ದು ಶಾಶ್ವತ ಪರಿಹಾರಕ್ಕಾಗಿ ಯೋಜನೆ ರೂಪಿಸುವುದು ಸೂಕ್ತವಾಗಿದೆ. ಏಕೆಂದರೆ ಕಾಲ ಕಾಲಕ್ಕೆ ಮಳೆಯಾದರೆ ಮಾತ್ರ ಕೆರೆ ತುಂಬಿ ನೀರು ಸಂಗ್ರಹಗೊಳ್ಳಲು ಸಾಧ್ಯ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.