ಭಗತ್ಸಿಂಗ್ ಹುತಾತ್ಮ ದಿನಾಚರಣೆ
ಚಿಕ್ಕಬಳ್ಳಾಪುರ: ನಗರದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಸೇನಾನಿಗಳಾದ ಭಗತ್ಸಿಂಗ್, ರಾಜಗುರು ಹಾಗೂ ಸುಖದೇವ್ ರವರ ಹುತಾತ್ಮ ದಿನಾಚರಣೆ ಕಾರ್ಯಕ್ರಮ ಅಣ್ಣಾ ಹಜಾರೆ ತಂಡದ ಜಿಲ್ಲಾ ಘಟಕದ ವತಿಯಿಂದ ನಡೆಯಿತು.
ನಗರದ ಬಿ.ಬಿ. ರಸ್ತೆಯ ಬಾಲಾಜಿ ಟಾಕೀಸ್ ಸಮೀಪ ದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವೇದಿಕೆಯ ಜಿಲ್ಲಾ ಸಂಚಾಲಕ ಚೊಕ್ಕಹಳ್ಳಿ ಮೋಹನ್ ಕುಮಾರ್, ದೇಶಕ್ಕಾಗಿ ಹೋರಾಡಿದ ಭಗತ್ಸಿಂಗ್, ರಾಜಗುರು ಹಾಗೂ ಸುಖದೇವ್ ಅವರನ್ನು ಭಾರತೀಯರು ಎಂದಿಗೂ ಮರೆಯಬಾರದು. ಶಿಕ್ಷೆಯಿಂದ ತಪ್ಪಿಸಿಕೊಳ್ಳುವ ಅವಕಾಶವಿದ್ದರೂ, ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದರೂ ಅದನ್ನು ಬಳಸಿಕೊಳ್ಳದ ಕೆಚ್ಚೆದೆಯಿಂದ ನೇಣಿನ ಕುಣಿಕೆಗೆ ಕೊರಳೊಡ್ಡಿ ವೀರ ಮರಣ ಅಪ್ಪಿದ ಭಗತ್ ಸಿಂಗ್, ರಾಜಗುರು ಹಾಗೂ ಸುಖದೇವ್ರವರಂತಹ ದೇಶಪ್ರೇಮಿಗಳ ಆದರ್ಶಗಳು ಇಂದಿನ ಯುವಜನಾಂಗದಲ್ಲಿ ದೇಶ ಪ್ರೇಮ ಕಣ್ಮರೆಯಾಗಿರುವುದು ದುಃಖದ ಸಂಗತಿಯಾಗಿದೆ ಎಂದು ವಿಷಾದಿಸಿದರು.
ಕಾರ್ಯಕ್ರಮದಲ್ಲಿ ಹುತಾತ್ಮರ ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿ ವಂದೇಮಾತರಂ ಗೀತೆಯನ್ನು ಹಾಡಲಾಯಿತು. ಕಣಜೇನಹಳ್ಳಿ ಬಳಿಯಿರುವ ಅನಾಥ ಆಶ್ರಮದಲ್ಲಿರುವ ಮಕ್ಕಳಿಗೆ ಊಟದ ವ್ಯವಸ್ಥೆ ಮಾಡಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

