ಕಾಂಗ್ರೆಸ್ ಸೇರಲು ಜೆಡಿಎಸ್ ಅತೃಪ್ತರ ನಿರ್ಧಾರ
ಬಂಗಾರಪೇಟೆ: ತಾಲೂಕು ಜೆಡಿಎಸ್ ಘಟಕದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ಅತೃಪ್ತ ಮುಖಂಡರು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದಾರೆ.
ಮೊದಲಿನಿಂದಲೂ ತಾಲೂಕಿನಲ್ಲಿ ಜೆಡಿಎಸ್ ಆರಕ್ಕೇರದ ಮೂರಕ್ಕಿಳಿಯದ ಸ್ಥಿಯಲ್ಲಿದ್ದು ಕಾಂಗ್ರೆಸ್ನಿಂದ ಜಿಪಂ ಮಾಜಿ ಸದಸ್ಯ ರಾಮಚಂದ್ರ ಮತ್ತು ಅವರ ಬೆಂಬಲಿಗರು ಕಳೆದ ವರ್ಷ ಜೆಡಿಎಸ್ ಸೇರ್ಪಡೆಗೊಂಡ ನಂತರ ಕಾರ್ಯಕರ್ತರಿಗೆ ಹೊಸ ಹುಮ್ಮಸು ಬಂದಿತ್ತು, ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿದ್ದ ರಾಮಚಂದ್ರ ಸೋಲಿನ ನಂತರ ಪಕ್ಷದ ಕಾರ್ಯಕರ್ತರನ್ನು ಹಾಗೂ ಮುಖಂಡರನ್ನು ಕೇಳುವವರೆ ಇಲ್ಲದಂತಾಗಿತ್ತು.
ತಾಲೂಕು ಘಟಕವನ್ನು ಪುನರಚಿಸಿ ಯುವಕರಿಗೆ ಜಬಾವ್ದಾರಿ ಕೊಡಬೇಕೆಂಬ ಕಾರ್ಯಕರ್ತರ ಮನವಿ ಮೂಲೆಗುಂಪಾಗಿದ್ದು, ಇದರಿಂದ ನೊಂದಿರುವ ನಿಷ್ಟಾವಂತ ಕಾರ್ಯಕರ್ತರು ಭಾನುವಾರ ಪಟ್ಟಣದ ಗೀತಾಮಂದಿರದಲ್ಲಿ ಸಭೆ ಸೇರಿ ಮುಂದಿನ ರಾಜಕೀಯ ಬೆಳವಣಿಗೆ ಚರ್ಚಿಸಿ ಯಾವ ಪಕ್ಷ ಸೇರಬೇಕು ಎಂಬುದರ ಬಗ್ಗೆ ಸಮಾಲೋಚಿಸಿದರು. ಸಭೆಯಲ್ಲಿ ಹಾಜರಿದ್ದ ಬಹುತೇಕ ಮಂದಿ ಕಾಂಗ್ರೆಸ್ ಸೇರಿದರೆ ಉತ್ತಮವಾಗಿರುತ್ತದೆ ಎಂದು ಅಭಿಪ್ರಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

