ಪ್ರತಕರ್ತರಿಗೆ 'ಚುನಾವಣೆ' ಭೋಜನ!
ಚಿಕ್ಕಬಳ್ಳಾಪುರ: ಪಕ್ಷವೊಂದರ ಸೂಚನೆಯಂತೆ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ, ಪತ್ರಕರ್ತರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಿದ ಆರೋಪದ ಮೇರೆಗೆ ಬಾರ್ ಆ್ಯಂಡ್ ರೆಸ್ಟೋರೆಂಟ್‌ನ ಸೂಪರ್‌ವೈಸರ್‌ನನ್ನು ಚುನಾವಣಾಧಿಕಾರಿಗಳು ತಮ್ಮ ವಶಕ್ಕೆ ತೆಗೆದುಕೊಂಡು, ವಿಚಾರಣೆ ನಡೆಸಿದ್ದಾರೆ.
ಇಲ್ಲಿನ ನಂದಿನಿ ಬಾರ್ ಆ್ಯಂಡ್ ರೆಸ್ಟೋರೆಂಟ್‌ನ ಸೂಪರ್‌ವೈಸರ್ ಆದರ್ಶ(35) ಎಂಬಾತನೆ ವಿಚಾರಣೆಗೊಳಪಟ್ಟ ವ್ಯಕ್ತಿ. ವಿಶೇಷ ಭೋಜನ ವ್ಯವಸ್ಥೆಯ ವಿಷಯ ಗೊತ್ತಾಗುತ್ತಿದ್ದಂತೆ ಭಾನುವಾರ ರಾತ್ರಿ ಚುನಾವಣಾ ವಿಚಕ್ಷಣಾಧಿಕಾರಿಯೂ ಆಗಿರುವ ಉಪ ವಿಭಾಗಾಧಿಕಾರಿ ಶಾಂತಲಾ ಮತ್ತು ತಹಸೀಲ್ದಾರ್ ಜಗದೀಶ್ ನೇತೃತ್ವದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್ ಮೇಲೆ ದಾಳಿ ನಡೆಸಲಾಯಿತು. ಆಗ ಅಲ್ಲಿ ವಿಶೇಷ ಭೋಜನ ವ್ಯವಸ್ಥೆ ಮಾಡಿರುವುದು ಕಂಡು ಬಂತು. ಈ ಕುರಿತು ಅಧಿಕಾರಿಗಳು ವಿಡಿಯೋ ಚಿತ್ರಿಕರಣ ಮಾಡಿಕೊಂಡಿದ್ದಾರೆ. ದಾಳಿಯಾಗುತ್ತಿದ್ದಂತೆ ಅಲ್ಲಿದ್ದ 25ಕ್ಕೂ ಹೆಚ್ಚು ಪತ್ರಕರ್ತರು ಓಡಿಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಬಳಿಕ ಅಧಿಕಾರಿಗಳ ರೆಸ್ಟೋರೆಂಟ್ ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸಿ, ಆದರ್ಶ ಎಂಬಾತನನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಅಲ್ಲದೆ, ರೆಸ್ಟೋರೆಂಟ್ ಮಾಲಿಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

