ಮೋದಿ ಕಾಂಗ್ರೆಸ್ನಂತೆ ಕಾರ್ಯಕ್ರಮ ರೂಪಿಸಲ್ಲ'
ಶಿಡ್ಲಘಟ್ಟ: ನೂರಾರು ನರೇಂದ್ರ ಮೋದಿಗಳು ಹುಟ್ಟಿಕೊಂಡರೂ ಯುಪಿಎ ಸರ್ಕಾರ ಮಾಡಿದಂಥ ಜನಪರ ಕಾರ್ಯಗಳನ್ನು ರೂಪಿಸಲು ಸಾಧ್ಯವಿಲ್ಲ ಎಂದು ಮಾಜಿ ಶಾಸಕ, ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ಹೇಳಿದರು.
ಮಾ.26ರಂದು ನಡೆಸಲು ಉದ್ದೇಶಿಸಲಾಗಿರುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಆಹಾರ ಭದ್ರತಾ ಕಾಯ್ದೆ, ಆರ್ಟಿಐ ಸೇರಿದಂತೆ ಯುಪಿಎ ಜನರಿಗೆ ಉಪಯೋಗವಾಗುವಂಥ ಅನೇಕ ಕಾಯ್ದೆಗಳನ್ನು ಜಾರಿಗೆ ತಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತಂದ ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದಿಸಿರುವ ಸರ್ಕಾರ, ಅನ್ನಭಾಗ್ಯ, ಕ್ಷೀರ ಭಾಗ್ಯ, ಮನಸ್ವಿನಿ ಯೋಜನೆ, ಪ್ರವಾಸ ಭಾಗ್ಯ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಮುಂದಿಟ್ಟುಕೊಂಡು ಈ ಬಾರಿ ಕಾಂಗ್ರೆಸ್ ಕಾರ್ಯಕರ್ತರ ಮತಯಾಚನೆ ಮಾಡಬೇಕು' ಎಂದು ಅವರು ಹೇಳಿದರು.
ಜಿಪಂ ಮಾಜಿ ಅಧ್ಯಕ್ಷ ಸುಬ್ರಮಣಿ, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಧ್ಯಕ್ಷ ಮುನಿಕೃಷ್ಣಪ್ಪ, ಮುಖಂಡರಾದ ಎಸ್.ಎಂ. ನಾರಾಯಣಸ್ವಾಮಿ, ಗಂಗನಹಳ್ಳಿ ಬಿ.ಸಿ. ವೆಂಕಟೇಶ್, ಮುತ್ತೂರು ಚಂದ್ರೇಗೌಡ, ನಾಗಮಂಗಲ ತಮ್ಮಣ್ಣ, ತನ್ವೀರ್ ಅಹ್ಮದ್, ತಾಪಂ ಸದಸ್ಯರಾದ ಚನ್ನಕೃಷ್ಣ, ನಾರಾಯಣಸ್ವಾಮಿ, ಶಂಕರಪ್ಪ, ಮಧುಸೂದನ್, ಅಬ್ದುಲ್ ಗಫೂರ್, ಸುಮೀರ್, ಮುಂತಾದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

