ಕೋಲಾರ

'ಕಡ್ಡಾಯವಾಗಿ ಮತದಾನ ಮಾಡಿ'

Published On :

ಚಿಂತಾಮಣಿ: ಸಮೃದ್ಧ ಭಾರತಕ್ಕಾಗಿ ಅನುಭವಿ ಸಮರ್ಥ ನಾಯಕನನ್ನು ಆರಿಸಲು ಚುನಾವಣೆಯಲ್ಲಿ ಕಡ್ಡಾಯವಾಗಿ ಮತದಾನ ಮಾಡಿ ಎಂದು ನಗರ ಠಾಣೆ ವೃತ್ತ ನಿರೀಕ್ಷಕ ನಂಜಪ್ಪ ಹೇಳಿದರು. ನಗರದ ಚೇಳೂರು ರಸ್ತೆಯ ಲಕ್ಷ್ಮಿ ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ದೇಶದಲ್ಲಿ ತಾಂಡವಾಡುತ್ತಿರುವ ಭ್ರಷ್ಟಾಚಾರ, ನಿರುದ್ಯೋಗ, ಬಡತನ ನಿರ್ಮೂಲನೆ ಮಾಡಲು ಪ್ರಜ್ಞಾವಂತ ಮತದಾರರು ಕಡ್ಡಾಯವಾಗಿ ಮತದಾನ ಮಾಡಿದರೆ ದೇಶ ಬಲಿಷ್ಠವಾಗಲು ಸಾಧ್ಯವೆಂದು ತಿಳಿಸಿದರು. ಅಬಕಾರಿ ಇಲಾಖೆ ಡಿವೈಎಸ್ಪಿ ರಮೇಶ್ ಕುಮಾರ್ ಮಾತನಾಡಿ, ಕುಟುಂಬದ ಎಲ್ಲ ಸದಸ್ಯರೂ ಮತ ಚಲಾಯಿಸಬೇಕೆಂದು ತಿಳಿಸಿದರು. ಪ್ರಾಂಶುಪಾಲ ಕೆ. ರಘುನಾಥ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ವಿಶ್ವನಾಥರೆಡ್ಡಿ, ಕೃಷ್ಣಮೂರ್ತಿ, ಎಬಿವಿಪಿ ಮುಖಂಡ ಮಂಜುನಾಥರೆಡ್ಡಿ, ಸುರೇಶ್ ಇದ್ದರು.
ಸಾಹಿತ್ಯಾಭಿಮಾನಸೈಕಲ್‌ನಲ್ಲಿ ಪ್ರವಾಸ

ಟೇಕಲ್: ಕರ್ನಾಟಕದ ಐತಿಹಾಸಿಕ ಸ್ಥಳಗಳು, ಸಾಹಿತಿಗಳನ್ನು ಗೌರವಿಸುವ ಉದ್ದೇಶದಿಂದ ಹಾವೇರಿ ಜಿಲ್ಲೆಯ ಸಾಹಿತ್ಯ ಅಭಿಮಾನಿಯೊಬ್ಬರು ರಾಜ್ಯಾದ್ಯಂತ ಸೈಕಲ್‌ನಲ್ಲಿ ಪ್ರವಾಸ ಕೈಗೊಂಡಿದ್ದು, ಭಾನುವಾರ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಹುಟ್ಟೂರಾದ ಮಾಸ್ತಿಗೆ ಆಗಮಿಸಿದರು. ಹಾವೇರಿ ಜಿಲ್ಲೆಯ ಗೋಪಾಲ್ ಬಿಂಜಡಗಿ ಎಂಬುವರು ಹಾವೇರಿ ಜಿಲ್ಲೆಯಿಂದ 63 ದಿನಗಳ ಹಿಂದೆ ಸೈಕಲ್‌ನಲ್ಲಿ ಪ್ರವಾಸ ಕೈಗೊಂಡು, ರಾಜ್ಯದ ಐತಿಹಾಸಿಕ ಸ್ಥಳಗಳನ್ನು ವೀಕ್ಷಿಸಿ ಆ ಸ್ಥಳಗಳ ಬಗ್ಗೆ ಮಾಹಿತಿ ಪಡೆದು, ದಿವಂಗತ ಸಾಹಿತ್ಯ ದಿಗ್ಗಜರ ಸ್ಮಾರಕ, ಜನ್ಮಸ್ಥಳಗಳನ್ನು ವೀಕ್ಷಿಸಿ ಗೌರವಿಸಿ ಅವರ ಸಾಹಿತ್ಯದ ಬಗ್ಗೆ ತಿಳಿಸಿಕೊಡುವ ಪ್ರಚಾರ ಕೈಗೊಂಡಿದ್ದಾರೆ. ಜೊತೆಗೆ ಹಾವೇರಿ ಜಿಲ್ಲೆಯಲ್ಲಿ ನಡೆಯಲಿರುವ 81 ನೇ ಸಾಹಿತ್ಯ ಸಮ್ಮೇಳನಕ್ಕೆ ಆಹ್ವಾನ ನೀಡುತ್ತಾ ಸಾಗಿದರು. ಗೋಪಾಲ್ ಬಿಂಜಡಗಿರವರು ಬೆಂಗಳೂರಿನ ಆದರ್ಶ ಇನ್ಸ್‌ಟ್ಯೂಟ್‌ನಲ್ಲಿ ಸಹಾಯಕ ನಿರ್ದೇಶಕರಾಗಿ ತರಬೇತುದಾರರಿಗೆ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ರಮೇಶ್ ನೇಮಕ
ಕೆಜಿಎಫ್: ಕಾಂಗ್ರೆಸ್ ಕಾರ್ಮಿಕ ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಕೆಜೆಪಿಎಫ್ ನಗರದ ಬಿ.ರಮೇಶ್ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕ ವಿಭಾಗದ ಎಸ್.ಎಸ್.ಪ್ರಕಾಶಂ ಈ ನೇಮಕ ಮಾಡಿ, ಆದೇಶ ಹೊರಡಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬೋಸರಾಜು ಅವರ ಶಿಫಾರಸಿನ ಮೇರೆಗೆ ನೇಮಿಸಲಾಗಿದೆ ಎಂದು ತಿಳಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.