ಆರ್ಥಿಕ ಸದೃಢತೆಯಿಂದ ಅಭಿವೃದ್ಧಿ ಸಾಧ್ಯ
ಪಾಂಡವಪುರ: ಪ್ರತಿಯೊಬ್ಬರು ಆರ್ಥಿಕವಾಗಿ ಸ್ವತಂತ್ರವಾದಾಗ ಮಾತ್ರ ಅಭಿವೃದ್ಧಿಯಾಗಲು ಸಾಧ್ಯ ಎಂದು ಮೈಸೂರಿನ ಅರ್ಥಶಾಸ್ತ್ರ ಉಪನ್ಯಾಸಕಿ ಡಾ.ರೇಷ್ಮಾ ಚಂಗಪ್ಪ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ವಿಭಾಗದಿಂದ ಆಯೋಜಿಸಿದ ನೈಸರ್ಗಿಕ ಸಂಪನ್ಮೂಲ-ಪರಿಸರ ಆರ್ಥಿಕಾಭಿವೃದ್ಧಿ ಕುರಿತು ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಮಾನವನ ಆರ್ಥಿಕ ಅಭಿವೃದ್ಧಿ ಕುರಿತು ಅಧ್ಯಯನ ಮಾಡುವುದೇ ಅರ್ಥಶಾಸ್ತ್ರ, ಪ್ರತಿ ನಿತ್ಯ ಮಾನವನ್ನು ಬಳಕೆ ಮಾಡುವಂತಹ ಆರ್ಥಿಕ ಸಂಪನ್ಮೂಲ, ನೈಸರ್ಗಿಕ ಸಂಪನ್ಮೂಲಗಳನ್ನು ಜಾಗೃತಿಯಿಂದ ಬಳಕೆ ಮಾಡಬೇಕಾಗಿದೆ. ಸಮಯ ವ್ಯಯ ಮಾಡದೆ ಅದರ ಮೌಲ್ಯ ಕಾಪಾಡುವ ನಿಟ್ಟಿನಲ್ಲಿ ಮುಂದಾದರೆ ನಾವು ಆರ್ಥಿಕವಾಗಿ ಸದೃಢರಾಗಲು ಸಾಧ್ಯವೆಂದು ತಿಳಿಸಿದರು. ವಿಶಾಕ ಅನುಭೋಗ, ಉತ್ಪಾದನೆ ವಿನಿಮಯದ ಮೂಲಕ ಆರ್ಥಿಕ ಚುಟವಟಿಕೆ ಮಾಡಲು ಸಾಧ್ಯ ಹಾಗೂ ಖನಿಜ ಸಂಪನ್ಮೂಲ, ಭೂ ಸಂಪನ್ಮೂಲಗಳಿಲ್ಲದೆ ಗೃಹಕೃತ್ಯದ ನಿರ್ವಹಣೆಯು ಸಾಧ್ಯವಿಲ್ಲದಾಗಿದೆ. ಹಾಗಾಗಿ ಎಲ್ಲಾ ಆರ್ಥಿಕ ಚಟುವಟಿಕೆಗಳು ನೈಸರ್ಗಿಕ ಸಂಪನ್ಮೂಲಗಳಲ್ಲಿ ಅಡಕವಾಗಿರುತ್ತದೆ ಎಂದು ಹೇಳಿದರು.
ದೇಶದಲ್ಲಿ ಜನಸಂಖ್ಯೆ ಹೆಚ್ಚಾದಂತೆ ನೈಸರ್ಗಿಕ ಸಂಪನ್ಮೂಲಗಳ ಬಳಕೆಯು ಸಹ ದ್ವಿಗುಣಗೊಳ್ಳುತ್ತಿದೆ. ಮನುಷ್ಯ ಕೂಡ ಅಗತ್ಯ ಸಂಪನ್ಮೂಲಗಳನ್ನು ಬಳಕೆ ಮಾಡಿಕೊಂಡು ಆರ್ಥಿಕ ಅಭಿವೃದ್ಧಿ ಕಾಣುತ್ತಿದ್ದಾನೆ. ಆದರೆ, ಇದರಿಂದ ದೇಶದಲ್ಲಿ ನೈಸರ್ಗಿಕ ಸಂಪನ್ಮೂಲದ ಬೊಕ್ಕಸಕ್ಕೆ ಭಾರಿ ಪ್ರಮಾಣದ ಹೊಡೆತ ಬೀಳುತಿದೆ. ಮುಂದಿನ ದಿನಗಳಲ್ಲಿ ಮನುಷ್ಯನಿಗೆ ನೈಸರ್ಗಿಕ ಸಂಪನ್ಮೂಲ ನವೀಕರಿಸದಿದ್ದಲ್ಲಿ ಭವಿಷ್ಯದಲ್ಲಿ ಮನುಷ್ಯ ಆರ್ಥಿಕ ಅಭಿವೃದ್ಧಿ ಕಾಣಲು ಸಾಧ್ಯವಿಲ್ಲವೆಂದು ವಿಷಾದಿಸಿದರು.
ಪ್ರೊ.ಬಿ.ಎನ್.ತಮ್ಮಣ್ಣೇಗೌಡ ಕಾರ್ಯಕ್ರಮ ಉದ್ಘಾಟಿಸಿದರು, ಪ್ರಾಂಶುಪಾಲ ಪ್ರೊ.ಸಿದ್ದರಾಮು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಇಂಗ್ಲಿಷ್ ಉಪನ್ಯಾಸಕಿ ಡಾ.ಎ.ವಿ.ಅನುರಾಧ, ಇತಿಹಾಸ ಉಪನ್ಯಾಸಕ ಕೆ.ಶ್ರೀನಿವಾಸ್, ರಾಜ್ಯ ಶಾಸ್ತ್ರ ಉಪನ್ಯಾಸಕ ರಜಿನಿಕಾಂತ್ ಸೇರಿದಂತೆ ಹಲವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

