ಚುನಾವಣೆ ನಂತರ ರಾಜ್ಯ ಸರ್ಕಾರ ಪತನ
ಬಂಗಾರಪೇಟೆ: ಲೋಕಸಭೆ ಚುನಾವಣೆ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರ ಪತನವಾಗಲಿದ್ದು, ಕಾರ್ಯಕರ್ತರು ವಿಧಾನಸಭೆ ಚುನಾವಣೆ ಎದುರಿಸಲು ಈಗನಿಂದಲೇ ಸಿದ್ಧರಾಗಬೇಕೆಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕಾರ್ಯಕರ್ತರಿಗೆ ಕರೆ ನೀಡಿದರು.
ಮಾಜಿ ಶಾಸಕ ಬಿ.ಪಿ. ವೆಂಕಟಮುನಿಯಪ್ಪರವರ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ವೆಂಕಟಮುನಿಯಪ್ಪರನ್ನು ಮರಳಿ ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಈಶ್ವರಪ್ಪ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಹತ್ತು ತಿಂಗಳಲಾದರೂ ಇದುವರೆಗೂ ಟೇಕ್ಆಪ್ ಆಗಿಲ್ಲ ಎಂಬುದು ಸ್ಪಷ್ಟವಾಗಿದೆ. ಹಿಂದುಳಿದ ನಾಯಕ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿದ್ದರೂ ಆ ವರ್ಗದ ಜನರಿಗೆ ಎಳ್ಳಷ್ಟು ಪ್ರಯೋಜನವಾಗಿಲ್ಲ, ದಲಿತರಿಗೆ ಸಾಮಾಜಿಕ ನ್ಯಾಯ ಸಿಗದೆ ಶೋಷಿತರಾಗಿದ್ದಾರೆಂದು ವಿರೋಧ ಪಕ್ಷಗಳು ಆರೋಪಿಸುತ್ತಿಲ್ಲ ಸ್ವತಹ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಪರಮೇಶ್ವರ್ ಅವರೇ ಸರ್ಕಾರ ಕಾರ್ಯವೈಖರಿಯನ್ನು ಟೀಕಿಸುತ್ತಿರುವುದನ್ನು ಗಮನಿಸಿದರೆ ಲೋಕಸಭೆ ಚುನಾವಣೆ ನಂತರ ಪತನವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿದ್ದು ಕಾರ್ಯಕರ್ತರು ಯಾವುದೇ ಸಮಯದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು ಮಾನಸಿಕವಾಗಿ ಸಿದ್ಧರಾಗಬೇಕೆಂದು ಹೇಳಿದರು.
ದೇಶದಲ್ಲಿ ಯುಪಿಎ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಜನರು ಬದಲಾವಣೆಗಾಗಿ ಕಾಯುತ್ತಿದ್ದು ನರೇಂದ್ರ ಮೋದಿ ಪ್ರಧಾನಿಯಾಗುವುದನ್ನು ನೋಡಲು ಕಾತುರದಿಂದ ಎದುರು ನೋಡುತ್ತಿದ್ದಾರೆ. ಮೋದಿ ಹವಾಗೆ ರಾಜ್ಯದಲ್ಲಿ 28 ಸ್ಥಾನಗಳ ಪೈಕಿ ಕನಿಷ್ಠ 20 ಸ್ಥಾನ ಬಿಜೆಪಿ ಗೆಲ್ಲಲಿದೆ. 6 ಬಾರಿ ಜಿಲ್ಲೆಯನ್ನು ಪ್ರತಿನಿಧಿಸಿರುವ ಕೆ.ಎಚ್. ಮುನಿಯಪ್ಪ ಜನರ ಸಮಸ್ಯೆಗಳತ್ತ ಗಮನ ನೀಡದೆ ಸಮಯ ವ್ಯರ್ಥ ಮಾಡಿದರು.
ಇಂತಹ ಕಾಳಜಿ ಇಲ್ಲದ ವ್ಯಕ್ತಿಯನ್ನು ಮನೆಗೆ ಕಳುಹಿಸಲು ಜಿಲ್ಲೆಯ ಜನರು ಪಣ ತೊಡಬೇಕು. ಕೇಂದ್ರದಲ್ಲಿ ಮಂತ್ರಿಯಾಗಿದ್ದರೂ ಮುನಿಯಪ್ಪ ರಾಜ್ಯಕ್ಕೆ ಸಿಗಬೇಕಾದ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ, ಮೋದಿ ಪ್ರಧಾನಿಯಾದರೆ ಜಿಲ್ಲೆಗೆ ಶಾಶ್ವತ ನೀರಾವರಿ ಸೌಲಭ್ಯ ಸಿಗುವುದರಲ್ಲಿ ಅನುಮಾನಬೇಡ. ಮಾಜಿ ಶಾಸಕ ವೆಂಕಟಮುನಿಯಪ್ಪ ಮತ್ತು ಅವರ ಬೆಂಬಲಿಗರು ಪಕ್ಷಕ್ಕೆ ಬಂದಿರುವುದರಿಂದ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ ಎಂದರು.
ಅಭ್ಯರ್ಥಿ ಎಂ. ನಾರಾಯಣಸ್ವಾಮಿ, ಮಾಜಿ ಶಾಸಕ ವೆಂಟಕಮುನಿಯಪ್ಪ, ಎಂಎಲ್ಸಿಗಳಾದ ವೈ.ಎ. ನಾರಾಯಣಸ್ವಾಮಿ, ಶಿವಯೋಗಿಸ್ವಾವು, ಪಕ್ಷದ ಜಿಲ್ಲಾಧ್ಯಕ್ಷ ಕೃಷ್ಣಾರೆಡ್ಡಿ, ತಾಲೂಕು ಅಧ್ಯಕ್ಷ ಮಾರ್ಕಂಡೇಗೌಡ, ಬಿ.ವಿ. ಮಹೇಶ್, ಪುರಸಭೆ ಸದಸ್ಯ ಬಿ.ಸಿ. ಶ್ರೀನಿವಾಸಮೂರ್ತಿ, ಅಶ್ವತ್ಥ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

