ಕೋಲಾರ

ಪ್ರಧಾನಿ ಅಭ್ಯರ್ಥಿ ಘೋಷಣೆ ಕಾನೂನು ಬಾಹಿರ

Published On :

ಬಂಗಾರಪೇಟೆ: ಚುನಾವಣೆ ಮುನ್ನವೇ ಪ್ರಧಾನ ಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿರುವುದು ಸಂವಿಧಾನ ಬಾಹಿರ ಎಂದು ಕೇಂದ್ರ ಸಚಿವ ಕೆ.ಎಚ್. ಮುನಿಯಪ್ಪ ಆರೋಪಿಸಿದರು.
ಪಟ್ಟಣದ ಬಯಲು ರಂಗಮಂದಿರದಲ್ಲಿ ಮಂಗಳವಾರ ಏರ್ಪಡಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಚುನಾವಣೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿ, ಚುನಾವಣೆ ನಂತರ ಸಂಸತ್ತಿನಲ್ಲಿ ಪ್ರಧಾನ ಮಂತ್ರಿಗಳ ಆಯ್ಕೆ ನಡೆಯಬೇಕಿದೆ. ಆದರೆ ಬಿಜೆಪಿ ಪಕ್ಷ ಸಂವಿದಾನದ ತತ್ವಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದರು.
ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್ ಮಾತನಾಡಿ, ಇಂಗ್ಲಷ್ ಹಾಗೂ ಹಿಂದಿ ಭಾಷೆ ಗೊತ್ತಿಲ್ಲದ ಬಿಜೆಪಿ ಅಭ್ಯರ್ಥಿ ಸಂಸತ್ತಿನಲ್ಲಿ ಏನು ಮಾತನಾಡಲು ಸಾಧ್ಯ ಎಂದು ವ್ಯಂಗವಾಡಿದರು. ಶಾಸಕ ಎಸ್.ಎನ್.ನಾರಾಯಣಸ್ವಾಮಿ, ಮಾಜಿ ಸಭಾಪತಿ  ವಿ.ಆರ್. ಸುದರ್ಶನ್ ಮಾತನಾಡಿ, ಎನ್‌ಡಿಎ ಸರ್ಕಾರ ದೇಶಕ್ಕೆ ಭದ್ರತೆ ಒದಗಿಸಿಲ್ಲ. ಉತ್ತಮ ಆಡಳಿತವೂ ನೀಡಿಲ್ಲ. ಪಕ್ಷದ ಹಿನ್ನಲೆ, ಅಭ್ಯರ್ಥಿ ವ್ಯಕ್ತಿತ್ವ ಅರಿತು ಮತ ನೀಡಬೇಕು ಎಂದರು.
ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹನುಮಂತಪ್ಪ , ಜಿಲ್ಲಾ ಘಟಕ ಅಧ್ಯಕ್ಷ ಅನಿಲ್‌ಕುಮಾರ್ ಮಾತನಾಡಿದರು. ಇದೇ ವೇಳೆ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ಕೆ.ಎಚ್. ಮುನಿಯಪ್ಪ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ರೇಷ್ಮೆ ಮಂಡಳಿ ಅಧ್ಯಕ್ಷ ಬಿಸ್ಸೇಗೌಡ, ವೆಂಕಟಮುನಿಯಪ್ಪ, ಟಿ. ಮುನಿರಾಜು, ಬಾಲಾಜಿ ಚೆನ್ನಯ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.