ಕೋಲಾರ

ಮತದಾನ ಮಾಡಲು ಡಿಸಿ ಮನವಿ

Published On :

ಕೋಲಾರ: ಮತದಾನಕ್ಕೆ ಅರ್ಹತೆ ಹೊಂದಿ ಮತಪಟ್ಟಿಯಲ್ಲಿ ಹೆಸರು ಸೇರಿಸಿರುವ ಯುವ ವಿದ್ಯಾರ್ಥಿನಿಯರು ತಪ್ಪದೇ ತಮ್ಮ ಹಕ್ಕು ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಿ.ಕೆ.ರವಿ ತಿಳಿಸಿದರು.
ನಗರದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ವೀಪ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೂರಾರು ವಿದ್ಯಾರ್ಥಿನಿಯರನ್ನು ಕುರಿತು ಮಾತನಾಡಿದ ಅವರು, 'ಮತದಾನದ ಹಕ್ಕು ಹೊಂದಿರುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮತ ಚಲಾವಣೆ ಮಾಡಿದಲ್ಲಿ ಪ್ರಜಾಪ್ರಭುತ್ವ ಗಟ್ಟಿಗೊಳಿಸುವುದಕ್ಕೆ ಅನುಕೂಲವಾಗುತ್ತದೆ' ಎಂದರು.
ಈ ಬಾರಿ ಕೋಲಾರ ಕ್ಷೇತ್ರದಲ್ಲಿ ಮತದಾನದ ಪ್ರಮಾಣ ಹೆಚ್ಚಳಕ್ಕಾಗಿ ಅನೇಕ ರೀತಿಯಲ್ಲಿ ಪ್ರಯತ್ನಗಳು ನಡೆಯುತ್ತಿವೆ. ಜಿಲ್ಲೆಯಲ್ಲಿ ಇರುವ ಸುಮಾರು 20 ಸಾವಿರ ವಿದ್ಯಾರ್ಥಿ ಮತದಾರರು ಹಕ್ಕು ಚಲಾವಣೆ ಮಾಡುವಂತೆ ಅರಿವು ಮೂಡಿಸುವ ಮೂಲಕ ಮತದಾನ ಪ್ರಮಾಣ ಹೆಚ್ಚಳಕ್ಕೆ ಸಹಕಾರ ನೀಡಬೇಕೆಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.