ಅಪರಾಧ ಪ್ರಕರಣ ಭೇದಿಸಿದ ಪೊಲೀಸರಿಗೆ ಬಹುಮಾನ
ಕೆಜಿಎಫ್: ಪೊಲೀಸರು ಹಲವು ಅಪರಾಧ ಪ್ರಕರಣಗಳಲ್ಲಿ ಅಂತಾರಾಜ್ಯ ದರೋಡೆಕೋರರನ್ನು ಬಂಧಿಸಿ ಕಳವು ಮಾಲು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಲಾಲ್ ರುಖುಮಾ ಪಚಾವ್ ಅವರು 29 ಮಂದಿ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯವೈಖರಿಯನ್ನು ಶ್ಲಾಘಿಸಿ 1.99 ಲಕ್ಷ ನಗದು ಬಹುಮಾನ ವಿತರಿಸಿದ್ದಾರೆ.
ಬೆಂಗಳೂರಿನ ಕೇಂದ್ರ ವಲಯ ಐಜಿಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಕೆಜಿಎಫ್ ಪೊಲೀಸ್ ಜಿಲ್ಲೆಯ ಅಧಿಕಾರಿ ಸಿಬ್ಬಂದಿಗೆ ನಗದು ಬಹುಮಾನ ವಿತರಿಸಿ ಮಾತನಾಡಿ, ಇತ್ತೀಚೆಗೆ ಹಲವಾರು ಕಳವು,
ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ದರೋಡೆಕೋರರನ್ನು ಬಂಧಿಸುವಲ್ಲಿ ಕೆಜಿಎಫ್ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದರು.
ಕೆಜಿಎಫ್‌ನ ಹಿಂದಿನ ಎಸ್ಪಿ ಡಾ. ರೋಹಿಣಿಕಟೋಚ್ ಸೆಫಟ್ ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ಉತ್ತಮ ಕಾರ್ಯಾಚರಣೆ ನಡೆಸಿ ಹಲವಾರು ಅಪರಾಧ ಪ್ರಕರಣಗಳನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ವಲಯ ಐಜಿಪಿ ಸಯ್ಯದ್ ಉಲ್ಪತ್ ಹುಸೇನ್, ಜಿಲ್ಲಾ ರಕ್ಷಣಾಧಿಕಾರಿ ಅಜಯ್‌ಹಿಲೋರಿ, ಡಿವೈಎಸ್ಪಿ ಎ.ಕೆ. ವಿವೇಕಾನಂದ ಸೇರಿದಂತೆ ಪೊಲೀಸ್ ವೃತ್ತ ನಿರೀಕ್ಷಕರು, ಸಬ್ ಇನ್ಸ್‌ಪೆಕ್ಟರ್‌ಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

