ಕೋಲಾರ

ಚಿಕ್ಕಬಳ್ಳಾಪುರ: 23 ಅಭ್ಯರ್ಥಿಗಳು

Published On :

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಚುನಾವಣೆಗೆ ಅಂತಿಮವಾಗಿ 23 ಅಭ್ಯರ್ಥಿಗಳಿಂದ ಒಟ್ಟು 36 ನಾಮಪತ್ರ ಸಲ್ಲಿಕೆಯಾಗಿವೆ. ಕಡೆಯ ದಿನವೊಂದರಲ್ಲಿ 13 ಮಂದಿ ಉಮೇದುವಾರಿಕೆ ಸಲ್ಲಿಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ಅಭ್ಯರ್ಥಿ ಬಿ.ಎನ್. ಬಚ್ಚೇಗೌಡ, ಪಿರಮಿಡ್ ಪಾರ್ಟಿ ಎಚ್.ಎನ್. ರಾಮಕೃಷ್ಣಾರೆಡ್ಡಿ, ಸಿಪಿಎಂ ಅಭ್ಯರ್ಥಿ ಜಿ.ವಿ. ಶ್ರೀರಾಮರೆಡ್ಡಿ, ಆರ್‌ಪಿಐ ವೆಂಕಟರಮಣಪ್ಪ, ಬಹುಜನ ಮುಕ್ತಿ ಪಾರ್ಟಿ ಯಾಕುಬ್ ಷರೀಪ್, ಪಕ್ಷೇತರ ಅಭ್ಯರ್ಥಿಗಳಾಗಿ ಟಿ.ವಿ. ಮಂಜುನಾಥ್ ಗೌಡ, ಕೆ.ಎಸ್. ಸ್ವಾಮಿ, ಡಿ.ಟಿ. ವೆಂಕಟೇಶ್, ಡಿ.ವಿ. ಓಬಳಪ್ಪ, ಜಯಪ್ರಕಾಶ್, ಡಿ.ಎನ್. ನರಸಿಂಹಮೂರ್ತಿ, ಶ್ರೀರಾಮರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ. ಮಾ.27 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ಮಾ.29 ರವರೆಗೂ ನಾಮಪತ್ರ ಹಿಂಪಡೆದುಕೊಳ್ಳಲು ಅವಕಾಶವಿದೆ. ಅಂತಿಮ ಅಭ್ಯರ್ಥಿಗಳ ಸ್ಪರ್ಧೆ ನಿಗದಿಯಾದ ನಂತರ ಏ.17 ರಂದು ಮತದಾನ ನಡೆಯಲಿದೆ. ಮೇ 16 ರಂದು ಅಭ್ಯರ್ಥಿಗಳ ಭವಿಷ್ಯ ತಿಳಿಯಲಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.