ಕೋಲಾರ

ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ

Published On :

ಚಿಂತಾಮಣಿ: ದೇಶದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರಮೋದಿಯನ್ನು ಬೆಂಬಲಿಸಿ ನನಗೆ ಬಹುಮತ ನೀಡಿ ಎಂದು ಕೋಲಾರ ಬಿಜೆಪಿ ಅಭ್ಯಥಿ ಎಂ. ನಾರಾಯಣಸ್ವಾಮಿ ಮನವಿ ಮಾಡಿದರು. ನಗರದ ಗುರುಭವನದ ಮುಂಭಾಗ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿ, ಚಿಂತಾಮಣಿ ಕ್ಷೇತ್ರದಲ್ಲಿ ವಲಸೆ ಬಂದ  ಉದ್ಯಮಿಗಳು ಗರಿಗರಿನೋಟುಗಳನ್ನು ತೋರಿಸಿ ರಾಜಕಾರಣ ಮಾಡುತ್ತಿದ್ದಾರೆಂದು ಆರೋಪಿಸಿದರು. ಇದಕ್ಕೂ ಮುನ್ನ ನಗರದ ಕೋಲಾರ ವೃತ್ತದಿಂದ ನೂರಾರು ಬಿಜೆಪಿ ಕಾರ್ಯಕರ್ತರು ಜೊತೆಗೂಡಿ ತರೆದ ವಾಹನದಲ್ಲಿ ಎಂ. ನಾರಾಯಣಸ್ವಾಮಿ ಮೆರವಣಿಗೆ ನಡೆಸಿದರು.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳೇ ಚೆನ್ನಾಗಿ ಪರೀಕ್ಷೆ ಬರೆಯಿರಿ

ಕೋಲಾರ: ಜಿಲ್ಲಾದ್ಯಂತ ಇಂದಿನಿಂದ 88 ಕೇಂದ್ರಗಳಲ್ಲಿ ಆರಂಭಗೊಳ್ಳುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಒಟ್ಟು 22552 ವಿದ್ಯಾರ್ಥಿಗಳು ಕುಳಿತಿದ್ದು, 1500ಕ್ಕೂ ಹೆಚ್ಚು ಪರೀಕ್ಷಾ ಸಿಬ್ಬಂದಿ ಕಾರ್ಯನಿರ್ವಹಿಸಲು ನೇಮಕಗೊಂಡಿದ್ದಾರೆ. ಈ ಬಾರಿ ಜಿಲ್ಲೆಯಲ್ಲಿ 51 ವಿಕಲಚೇತನರು ಪರೀಕ್ಷೆ ಬರೆಯುತ್ತಿರುವುದು ವಿಶೇಷ. ಜಿಲ್ಲೆಯಲ್ಲಿ 21041 ಈ ಬಾರಿ ಹೊಸದಾಗಿ ಪರೀಕ್ಷೆ ತೆಗೆದುಕೊಂಡಿದ್ದು, ಅವರಲ್ಲಿ 10643 ಬಾಲಕರು, 10398 ಬಾಲಕಿಯರು ಇದ್ದಾರೆ.
ಉಳಿದಂತೆ 644 ಪುನಃ ಪರೀಕ್ಷೆಗೆ ಕುಳಿತಿರುವ ಅಭ್ಯರ್ಥಿಗಳಿದ್ದಾರೆ. ಈ ಪೈಕಿ 471 ಬಾಲಕ,173 ಬಾಲಕಿಯರಿದ್ದಾರೆ. 654 ಖಾಸಗಿ ಅಭ್ಯರ್ಥಿಗಳು. ಅವರಲ್ಲಿ 531 ಬಾಲಕ, 123 ಬಾಲಕಿಯರಿದ್ದಾರೆ. ಈ ಪೈಕಿ 213 ವಿದ್ಯಾರ್ಥಿಗಳು ಪುನಃ ಪರೀಕ್ಷೆ ಬರೆಯುತ್ತಿದ್ದಾರೆ. ಯಾವುದೇ ಸಮಸ್ಯೆ ಎದುರಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ 144 ನೇ ಸೆಕ್ಷನ್ ಅನ್ವಯ ನಿಷೇಧಾಜ್ಞೆಯನ್ನು ಜಿಲ್ಲಾಧಿಕಾರಿಗಳು ಜಾರಿ ಮಾಡಿದ್ದಾರೆ.
ಸೂಕ್ತ ಕ್ರಮ: ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಈ 200 ಮೀ. ವ್ಯಾಪ್ತಿಯಲ್ಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಸೂಚಿಸಲಾಗಿದೆ. ಜಿಲ್ಲೆಯ 88 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಯಲು ಸೂಕ್ತ ವ್ಯವಸ್ಥೆ ಮಾಡುವಂತೆಯೂ ಹಾಗೂ ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಸೂಕ್ಷ್ಮವೆಂದು ಗುರುತಿಸಲಾದ 7 ಕೇಂದ್ರಗಳಲ್ಲಿ ಮತ್ತು ಖಾಸಗಿ ಅಭ್ಯರ್ಥಿಗಳಿರುವ ಕೇಂದ್ರಗಳಲ್ಲಿ ವಿಡಿಯೋ ಚಿತ್ರಿಕರಣ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ, ಎಲ್ಲಾ ವಿಷಯಗಳಲ್ಲೂ ಉತ್ತಮ ಅಂಕ ಪಡೆಯರಿ. ಗುಣಾತ್ಮಕ ಪರೀಕ್ಷೆಗಾಗಿ ಗಮನ ನೀಡಿ ಎಂದು ಡಿಡಿಪಿಐ ಪದ್ಮನಾಭ್, ಪರೀಕ್ಷಾ ನೋಡೆಲ್ ಅಧಿಕಾರಿ ನಾಗೇಂದ್ರ ಪ್ರಸಾದ್ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿಗಳು ಪರೀಕ್ಷಾರ್ಥಿಗಳಿಗೆ ಬೆಸ್ಟ್ ಆಫ್ ಲಕ್ ತಿಳಿಸಿದ್ದಾರೆ.


ಟೇಕಲ್ನಲ್ಲಿ...
ಟೇಕಲ್: ಮಾ.28ರಿಂದ ಎಸ್ಎಲ್ಎಲ್ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಟೇಕಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಒಟ್ಟು 292 ವಿದ್ಯಾರ್ಥಿಗಳ ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಟೇಕಲ್ ಮತ್ತು ದೊಡ್ಡ ನಾಯಕನಹಳ್ಳಿ ಶಾಲೆಯ ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಕಾಲೇಜು ಉಪಪ್ರಾಂಶುಪಾಲೆ ಹಾಗೂ ಪರೀಕ್ಷಾ ಅಧೀಕ್ಷಕಾರದ ಬಿ.ಎನ್.ಪುಷ್ಪಾ ಅವರು ತಿಳಿಸಿದ್ದಾರೆ. ಈ ಬಾರಿ ಕಾಲೇಜಿನ ಒಟ್ಟು 12 ರೂಮ್ಗಳನ್ನು ಸಿದ್ದಪಡಿಸಲಾಗಿದ್ದು, ಯಾವುದೇ ರೀತಿ ತೊಂದರೆಯಾಗದಂತೆ ಎಲ್ಲಾ ರೂಂಗಳಲ್ಲೂ ಡೆಸ್ಕ್ಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದರು.


ಗುಡಿಬಂಡೆಯಲ್ಲಿ...
ಗುಡಿಬಂಡೆ: ಇಂದಿನಿಂದ ಪ್ರಾರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸುಮಾರು 463 ಬಾಲಕರು ಹಾಗೂ 473 ಬಾಲಕೀಯರು ಸೇರಿದಂತೆ ಒಟ್ಟು 936 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಪಟ್ಟಣದ ಸರ್ಕಾರಿ ಬಾಲಕರ ಹಾಗೂ ಬಾಲಕೀಯರ ಪ್ರೌಢಶಾಲೆ, ಸೋಮೇನಹಳ್ಳಿ, ಹಂಪಸಂದ್ರ ಗ್ರಾಮಗಳಲ್ಲಿ ಒಟ್ಟು 4 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.