ವಿದ್ಯುತ್ ಕಣ್ಣಾಮುಚ್ಚಾಲೆಗೆ ಆಕ್ರೋಶ
ಕೋಲಾರ: ಜಿಲ್ಲೆಯಾದ್ಯಂತ ವಿದ್ಯುತ್ ಕಣ್ಣಾಮುಚ್ಚಾಲೆ ಮತ್ತು ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಸಮರ್ಪಕ ವಿದ್ಯುತ್ ವಿತರಣೆಯಿಂದಾಗಿ ಜಿಲ್ಲೆಯ ರೈತರು ಬೆಳೆದ ಬೆಳೆಗಳು ನಾಶವಾಗತ್ತಿದ್ದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕಾರ್ಯಕರ್ತರು ಬೆಸ್ಕಾಂ ಅಧಿಕಾರಿಗಳ ಧೋರಣೆಯನ್ನು ಖಂಡಿಸಿದ್ದಾರೆ.
ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶಗೌಡ ಹೇಳಿಕೆ ನೀಡಿ, ಎಸ್ಎಸ್ಎಲ್ಸಿ ಹಾಗೂ ಇತರೆ ಪರೀಕ್ಷೆಗಳು ಪ್ರಾರಭವಾಗಿದ್ದು, ವಿದ್ಯುತ್ ಕಾಟದಿಂದ ವಿದ್ಯಾರ್ಥಿಗಳು ಪರೀಕ್ಷೆಗೆ ತಯಾರಾಗಲು ತೊಂದರೆ ಉಂಟಾಗಿದೆ, ರೈತರು ಬೆಳೆದ ಬೆಳೆಗಳಿಗೆ ವಿದ್ಯುತ್ ಅಭಾವದಿಂದ ನೀರು ಹಾಯಿಸಲಾಗದೆ ಬೆಳೆಗಳು ಒಣಗುವಂತಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಹಲವು ಬಾರಿ ಸಮರ್ಪಕ ವಿದ್ಯುತ್ ವಿತರಣೆಗೆ ಸಂಬಂಧಿಸಿ ಬೆಸ್ಕಾಂ ಕಚೇರಿ ಮುಂದೆ ಧರಣಿ ಹೋರಾಟಗಳ ಮೂಲಕ ಮನವಿ ಸಲ್ಲಿಸಿದ್ದರೂ ಹಳೆ ಚಾಳಿ ಮುಂದುವರೆಸಿ ರೈತರ ಜೀವನದ ಜೊತೆ ಚೆಲ್ಲಾಟವಾಡಲು ಮುಂದಾಗಿರುವ ಬೆಸ್ಕಾಂ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಎನ್ಎಸ್ಎಸ್ ಶಿಬಿರ ಸಮಾರೋಪ
ಟೇಕಲ್: ಶ್ರಮದಾನದಿಂದ ಮನುಷ್ಯನ ಶಾರೀರಿಕ, ಮಾನಸಿಕ ಜೀವನದ ಮೇಲೆ ಉತ್ತಮ ಪರಿಣಾಮ ಬೀರುತ್ತದೆ ಎಂದು ಪ್ರಾಂಶುಪಾಲ ಕೆ.ಕವಿತ ಹೇಳಿದರು.
ಕ್ಷೇತ್ರೇನಹಳ್ಳಿಯಲ್ಲಿ ಕೆಜೆಎಫ್ನ ಸಂಭ್ರಮ ಕಾಲೇಜಿನ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ ವಿಶೇಷ ಸೇವಾ ಶಿಬಿರದಲ್ಲಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, 'ನಮ್ಮ ಕಾಲೇಜು ವತಿಯಿಂದ 12 ದಿನಗಳ ಶಿಬಿರ ಏರ್ಪಡಿಸಲಾಗಿದ್ದು, ಆರೋಗ್ಯ, ಕುಡಿಯುವ ನೀರು, ರಕ್ತದಾನ, ಸಾಮಾಜಿಕ ಪಿಡುಗು ಮುಂತಾದವುಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು' ಎಂದರು. ಟೇಕಲ್ ತಾಪಂ ಸದಸ್ಯ ನಿರ್ಮಲ ಆಂಜಿನಪ್ಪ, ಗ್ರಾಮದ ಯುವ ಮುಖಂಡ ಕೆ.ಎಸ್.ವೆಂಕಟೇಶ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಮುಖಂಡ ಬಿ.ಜಿ.ಮುನಿಶ್ಯಾಮಗೌಡ, ಗ್ರಾಪಂನ ಮಾಜಿ ಸದಸ್ಯ ಕೆ.ಎನ್.ಲಕ್ಷ್ಮಣ್, ಕೆ.ಎಸ್. ವೆಂಕಟೇಶ್, ಸಂಭ್ರಮ ಕಾಲೇಜಿನ ಉಪನ್ಯಾಸಕ ನಾಗರಾಜರೆಡ್ಡಿ, ಸಭೆಯಲ್ಲಿ ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ರಾಮಪ್ಪ, ಉಪಾಧ್ಯಕ್ಷ ರಾಜಮ್ಮ ಗೋಪಾಲಪ್ಪ, ಮುಖಂಡರಾದ ಟೇಕಲ್ ಆಂಜಿನಪ್ಪ, ಶಿಬಿರಾಧಿಕಾರಿ ಎಚ್.ಎಂ. ಉಮಾರಾಣಿ, ಶಾಲೆಯ ಮುಖ್ಯಶಿಕ್ಷಕ ಡಿ. ನಾರಾಯಣಸ್ವಾಮಿ, ಸಹಶಿಕ್ಷಕ ಎಂ.ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

