ಏ.3ರಿಂದ ಶ್ರೀರಾಮನವಮಿ ಮಹೋತ್ಸವ
ಕೆಜಿಎಫ್: ರಾಬರ್ಟ್ಸನ್ಪೇಟೆಯ ಸ್ವರ್ಣಕುಪ್ಪಂನಲ್ಲಿ ಸುಪ್ರಸಿದ್ಧ ಶ್ರೀ ಮಹಾಲಕ್ಷ್ಮೀ ಸತ್ಯನಾರಾಯಣಸ್ವಾಮಿ ಸಮೇತ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದ 34ನೇ ವರ್ಷದ ಶ್ರೀರಾಮನವಮಿ ಮಹೋತ್ಸವಗಳು ಏ.3ರಿಂದ 8ರ ವರೆಗೆ ನಡೆಯಲಿದೆ. ಪ್ರತಿ ವರ್ಷದಂತೆ ಈ ಬಾರಿಯು ಏ.3ರಂದು ಗುರುವಾರ ಕಳಸ ಸ್ಥಾಪನೆ, ಧ್ವಜಾರೋಹಣ, ಶತ ರುದ್ರಾಭಿಷೇಕ, 4ರಂದು ಭಕ್ತ ಆಂಜನೇಯಸ್ವಾಮಿ ಉತ್ಸವ, 5ರಂದು ಪಂಚಮುಖಿ ಆಂಜನೇಯಸ್ವಾಮಿ ಉತ್ಸವ, ಕುರುಬರ ಸಂಘದಿಂದ ಕನಕದಾಸರ ಉತ್ಸವ, ವೀರಗಾಸೆ ಕುಣಿತ, ಅಗ್ನಿಕುಂಡ ಮಹೋತ್ಸವ 7ರಂದು ಅಭಯಹಸ್ತ ಆಂಜನೇಯಸ್ವಾಮಿ ಉತ್ಸವ, 8ರಂದು ಮಂಗಳವಾರ ಶ್ರೀರಾಮನವಮಿಯಂದು ಪುಷ್ಪಪಲ್ಲಕಿ ಉತ್ಸವ ನಡೆಯಲಿದೆ. ಈ ಮಹೋತ್ಸವಗಳ ಪ್ರಯುಕ್ತ ಪ್ರತಿನಿತ್ಯ ಸಂಜೆ ಉತ್ಸವಾದಿಗಳನ್ನು ಮೆರವಣಿಗೆಯಲ್ಲಿ ಕೊಂಡೊಯ್ಯಲಾಗುವುದು. ಹಲವು ಭಕ್ತರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭಗವಂತನ ಕೃಪೆಗೆ ಪಾತ್ರರಾಗಲು ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಎಸ್.ರಾಜೇಂದ್ರಪ್ರಸಾದ್ ದೀಕ್ಷಿತ್ ಕೋರಿದ್ದಾರೆ.
ಪೂರಕ ಪರೀಕ್ಷೆ
ಏ.26 ಕೊನೆ ದಿನ
ಕೋಲಾರ: ಪ್ರಥಮ ಪಿಯುಸಿಯಲ್ಲಿ ಫೇಲಾದ ವಿದ್ಯಾರ್ಥಿಗಳಿಗೆ ಮೇ.21 ರಿಂದ 31 ರವರೆಗೂ ಪೂರಕ ಪರೀಕ್ಷೆಗಳು ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಜಿ. ದೊರೆಸ್ವಾಮಿ ತಿಳಿಸಿದ್ದಾರೆ. ಮಾ.2014ರ ವಾರ್ಷಿಕ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಏ.24ರೊಳಗೆ ಪರೀಕ್ಷಾ ಶುಲ್ಕವನ್ನು ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ಸಂದಾಯ ಮಾಡುವಂತೆ ಅವರು ಸೂಚಿಸಿದ್ದಾರೆ. ಒಂದು ವಿಷಯದಲ್ಲಿ ಅನುತ್ತೀರ್ಣರಾಗಿದ್ದಲ್ಲಿ 45 ರು, ಎರಡು ವಿಷಯಗಳಿಗೆ 90 ರು. ಮೂರು, ಅದಕ್ಕಿಂತ ಹೆಚ್ಚಿನ ವಿಷಯಗಳಲ್ಲಿ ಅನುತ್ತೀರ್ಣರಾಗಿದ್ದಲ್ಲಿ 135ಶುಲ್ಕ ಪಾವತಿಸುವಂತೆ ಅವರು ಸೂಚನೆ ನೀಡಿದ್ದಾರೆ.
ಮಹಿಳೆ ಶಂಕಾಸ್ಪದ ಸಾವು
ಚಿಂತಾಮಣಿ: ಅನುಮಾನಾಸ್ಪದವಾಗಿ ಮಹಿಳೆಯೊಬ್ಬಳು ಸಾವನ್ನಪ್ಪಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಂದಾರ್ಲಹಳ್ಳಿ ಗ್ರಾಮದಲ್ಲಿ ಗುರುವಾರ ರಾತ್ರಿ ನಡೆದಿದೆ. ತಾಲೂಕಿನ ಬಂದಾರ್ಲಹಳ್ಳಿ ಗ್ರಾಮದ ನಿರ್ಜನ ಪ್ರದೇಶವೊಂದರಲ್ಲಿ ಅನುಮಾನಾಸ್ಪದವಾಗಿ ಮಹಿಳೆಯೊಬ್ಬಳು ಸುಮಾರು 30 ರಿಂದ 35 ವರ್ಷದ ಮಹಿಳೆ ಸಾವನ್ನಪ್ಪಿದ್ದಾಳೆ. ಸುದ್ದಿ ತಿಳಿದ ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಸಬ್ಇನ್ಸೆಪೆಕ್ಟರ್ ನಯಾಜ್ ಬೇಗ್ ಸ್ಥಳ ಪರಿಶೀಲಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿ ಕೇಸ್ ದಾಖಲಿಸಿಕೊಂಡು ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

