ಕೋಲಾರ

ಕೆಜಿಎಫ್ನಲ್ಲಿ ಬಿಜೆಪಿ ಪ್ರಚಾರಕ್ಕೆ ಮಂಕು!

Published On :

ಕೆಜಿಎಫ್: ಎಲ್ಲೆಡೆ ಮೋದಿ ಹವಾ ತುಸು ಜೋರಿದ್ದರೆ, ಕೆಜಿಎಫ್ನಲ್ಲಿ ಮಾತ್ರ ಕಾಣುತ್ತಿಲ್ಲ. ಕಾಂಗ್ರೆಸ್ ಹಾಗೂ ಜೆಡಿಎಸ್ ಅಭ್ಯರ್ಥಿಗಳ ಬೆಂಬಲಿಗರ ಹಾಗೂ ಕಾರ್ಯಕರ್ತರ ಸಭೆಗಳನ್ನು ನಡೆಸುತ್ತಿದ್ದಾರೆ.
ಆದರೆ, ಬಿಜೆಪಿ ಅಭ್ಯರ್ಥಿ ಕೆಜಿಎಫ್ ಕ್ಷೇತ್ರದ ಕ್ಯಾಸಂಬಳ್ಳ ಗ್ರಾಮದ ಎಂ.ನಾರಾಯಣಸ್ವಾಮಿ ಜಿಲ್ಲೆಯ ಕೆಲವೆಡೆ ಪ್ರಚಾರ ಮಾಡಿದ್ದು ಬಿಟ್ಟರೆ, ತಮ್ಮ ಸ್ವಂತ ಕ್ಷೇತ್ರವಾದ ಕೆಜಿಎಫ್ನಲ್ಲಿ ಇದುವರೆಗೂ ಯಾವುದೇ ಪ್ರಚಾರವಾಗಲಿ ಅಥವಾ ಸಭೆಗಳನ್ನಾಗಲೀ ನಡೆಸಿಲ್ಲ.  ಜೆಡಿಎಸ್ ಅಭ್ಯರ್ಥಿ ಕೆ.ಕೇಶವ ಅವರ ನಾಮಪತ್ರವನ್ನು ತಿರಸ್ಕೃತಕ್ಕೆ ಎಲ್ಲಾ ರೀತಿಯ ಪ್ರಯತ್ನಗಳನ್ನು ನಡೆಸಲು ಮುಂದಾಗಿದ್ದರು. ಎಂ.ನಾರಾಯಣಸ್ವಾಮಿ. ಆದರೆ ಅದು ಕೈಗೂಡಲಿಲ್ಲ. ಜಿಲ್ಲೆಯಲ್ಲೇ ಕೆಜಿಎಫ್ ಕ್ಷೇತ್ರದಲ್ಲಿ ಬಿಜೆಪಿ ಶಾಸಕಿ ಇದ್ದಾರೆ. ಆದರೂ ಅವರು ಲೋಕಸಭಾ ಚುನಾವಣೆ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ಯಾಕೂ ತಮ್ಮ ಪ್ರಚಾರವನ್ನು ಚುರುಕುಗೊಳಿಸಿಲ್ಲ. ಇದರಿಂದಾಗಿ ಶಾಸಕಿ ವೈ. ರಾಮಕ್ಕ ಹಾಗೂ ಮಾಜಿ ಶಾಸಕ ವೈ.ಸಂಪಂಗಿ, ಗ್ರಾಮೀಣ ಘಟಕದ ಅಧ್ಯಕ್ಷ ಅಮರನಾರಾಯಣರೆಡ್ಡಿ ಸೇರಿ ಇತರ ನಾಯಕರ ಜತೆಗಿನ ಭಿನ್ನಾಭಿಪ್ರಾಯವೇ ಇದಕ್ಕೆ ಕಾರಣ ಎಂದು ವಿಶ್ಲೇಷಿಸಲಾಗುತ್ತಿದೆ. ಇತ್ತೀಚೆಗೆ ಕೆಜಿಎಫ್ನಲ್ಲಿ ನಡೆದ ಜಾತ್ರೆಯಲ್ಲಿ ಶಾಸಕ ನಾರಾಯಣಸ್ವಾಮಿ ಪಾಲ್ಗೊಂಡಿದ್ದರು. ಆದರೆ ಹಾಲಿ ಶಾಸಕಿ ವೈ.ರಾಮಕ್ಕ ಹಾಗೂ ಮಾಜಿ ಶಾಸಕ ವೈ.ಸಂಪಂಗಿ ಅವರ ನೇತೃತ್ವದಲ್ಲಿ ನಡೆದ ಚಿನ್ನದ ರಥ ಜಾತ್ರಾ ಮಹೋತ್ಸವದಲ್ಲಿ ಎಂ.ನಾರಾಯಣಸ್ವಾಮಿ ಪಾಲ್ಗೊಳ್ಳದೆ ಇರುವುದಕ್ಕೆ ಕೆಲ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇತ್ತ ಕಾಂಗ್ರೆಸ್ ಅಭ್ಯರ್ಥಿ ಮುನಿಯಪ್ಪ ಪರ ಅವರ ಪುತ್ರಿ ರೂಪಾಶಶಿಧರ್ ಕೆಜಿಎಫ್ ಕ್ಷೇತ್ರದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರೆ, ಜೆಡಿಎಸ್ ಅಭ್ಯರ್ಥಿ ಕೆ.ಕೇಶವ ಪರ ಮಾಲೂರು ಶಾಸಕ ಮಂಜುನಾಥಗೌಡ ವಹಿಸಿಕೊಂಡಿದ್ದಾರೆ.  ಎಂ.ನಾರಾಯಣಸ್ವಾಮಿ ಮೋದಿಯ ಅಲೆಯನ್ನು ಮುಂದಿಟ್ಟುಕೊಂಡು ಚುನಾವಣಾ ರಣತಂತ್ರ ರೂಪಿಸಿ, ಕಾಂಗ್ರೆಸ್, ಜೆಡಿಎಸ್ ಅಭ್ಯರ್ಥಿಗಳ ಮಿಂಚಿನ ಪ್ರಚಾರಕ್ಕೆ ತಕ್ಕ ಉತ್ತರ ನೀಡಲು ಮುಂದಾಗುವರೇ ಕಾದು ನೋಡಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.