ಬಂಗಾರಪೇಟೆಯಲ್ಲಿ ಅಗಲಿದ ಗೆಳೆಯರಿಗೆ ಭಾವಪೂರ್ಣ ಶ್ರದ್ಧಾಂಜಲಿ
ಬಂಗಾರಪೇಟೆ: ಮನಷ್ಯ ಇರುವವರೆಗೂ ಅವರ ಬೆಲೆ ಗೊತ್ತಾಗುವುದಿಲ್ಲ. ಅವರು ಇಲ್ಲದೇ ಇರುವಾಗ ಅವರ ಮಹತ್ವ ಗೊತ್ತಾಗುತ್ತದೆ ಎಂದು ಕ್ಷೇತ್ರಶಿಕ್ಷಣಾಧಿಕಾರಿ ಕೆ.ಜಯರಾಜ್ ಹೇಳಿದರು. ಶುಕ್ರವಾರ ಪಟ್ಟಣದ ಬಿ.ಆರ್.ಸಿ.ಸಭಾಂಗಣದಲ್ಲಿ ಕನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಅಗಲಿದ ಸಿ.ಚಂದ್ರಶೇಖರಗೌಡ, ಜಿ.ವಿ.ಅಪ್ಪಾಜಿಗೌಡ, ಕೆ.ಸಿದ್ದಪ್ಪ, ಎಸ್.ಎನ್.ಮೋಹನ್ಕುಮಾರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲು ಆಯೋಜಿಸಲಾಗಿದ್ದ ಸಭೆಯಲ್ಲಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾ ಉಪ ವಿಭಾಗಾಧಿಕಾರಿ ಮಂಜುನಾಥ್, ತಹಸೀಲ್ದಾರ್ ಉಷಾ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಮಂಜುನಾಥ್, ಉಪನ್ಯಾಸಕರ ಸಂಘದ ಅಧ್ಯಕ್ಷ ನಟರಾಜ್, ಜಿಲ್ಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ವೆಂಕಟಶಿವಪ್ಪ, ಪ್ರೌಢ ಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಶಂಕರಪ್ಪ, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗಾನಂದ ಕೆಂಪರಾಜ್ ಮಾತನಾಡಿದರು. ಕನ್ನಡ ಸಂಘದ ಅಧ್ಯಕ್ಷ ಪಲ್ಲವಿ ಮಣಿ ಮಾತನಾಡಿ ನಾಲ್ಕು ಮಂದಿ ನಡುವಿನ ಒಡನಾಟ ಹಾಗೂ ಸವಿ ನೆನಪುಗಳನ್ನು ಮೇಲುಕು ಹಾಕಿ, ಅವರ ಸವಿನೆನಪಿಗಾಗಿ ಪ್ರತಿ ವರ್ಷವೂ ರಾಜ್ಯ ಮಟ್ಟದ ವಾಲಿಬಾಲ್ ಕ್ರೀಡಾಕೂಟ ಆಯೋಜಿಸಲಾಗುವುದು ಎಂದರು. ಕಾರ್ಯಕ್ರಮದಲ್ಲಿ ವೃತ್ತ ನೀರಿಕ್ಷಕ ವೆಂಕಟಾಚಲಪತಿ, ತಾಲೂಕು ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ವೆಂಕಟಮುನಿಯಪ್ಪ, ಪ್ರಾಧಾನ ಕಾರ್ಯದರ್ಶಿ ವಿ.ವಿ. ಪತಿ, ಖಜಾಂಚಿ ಎನ್. ವೆಂಟೇಶಪ್ಪ, ಉಪಾಧ್ಯಕ್ಷ ರವಿ, ಸಹ ಕಾರ್ಯದರ್ಶಿ ವೆಂಕಟೇಶಪ್ಪ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

