ಸಿಎಂ, ಅಧ್ಯಕ್ಷರ ಸಮ್ಮುಖದಲ್ಲೇ ಸಂಪಂಗಿ, ಸುಬ್ಬಾರೆಡ್ಡಿ ಗೊಂದಲ
ಬಾಗೇಪಲ್ಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸಮ್ಮುಖದಲ್ಲಿಯೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದ ಪಕ್ಷೇತರ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರ ಬೆಂಬಲಿಗರು ಮಾಜಿ ಶಾಸಕ ಎನ್.ಸಂಪಂಗಿಯವರಿಗೆ ಮಾತನಾಡಲು ಅವಕಾಶ ನೀಡದೇ ಅಡ್ಡಿ ಪಡಿಸಿದ್ದರಿಂದ ಕಾರ್ಯಕ್ರಮದಲ್ಲಿ ಕೆಲವು ಸಮಯ ಗೊಂದಲ ಏರ್ಪಟ್ಟಿತ್ತು. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಎನ್.ಸಂಪಂಗಿ ಮತ್ತು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಮೊದಲಿನಿಂದಲೂ ಪರಸ್ಪರ ಆರೋಪ ಪ್ರತ್ಯಾರೋಪಗಳಿಂದ ಟೀಕಿಸಿಕೊಂಡೇ ಬರುತ್ತಿದ್ದಾರೆ. ಹಿಂದಿನ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ತಮಗೆ ಟಿಕೆಟ್ ತಪ್ಪಿಸಿದರು. ಪಕ್ಷದಲ್ಲಿ ತಮ್ಮನ್ನು ಮೂಲೆ ಗುಂಪು ಮಾಡಿದರು ಎಂದು ಎಸ್.ಎನ್.ಸುಬ್ಬಾರೆಡ್ಡಿ ಬೆಂಬಲಿಗರು ಸಂಪಂಗಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದು ಚುನಾವಣೆಯ ಸಮಯದಲ್ಲಿ ಇಬ್ಬರೂ ಟೀಕೆ ಪ್ರತಿ ಟೀಕೆಗಳ ಮೂಲಕ ಗಮನ ಸೆಳೆದಿದ್ದರು. ಇದರ ಮಧ್ಯೆ ಪಕ್ಷೇತರರಾಗಿ ಸ್ಪರ್ಧಿಸಿ ಎಸ್.ಎನ್.ಸುಬ್ಬಾರೆಡ್ಡಿ ಗೆದ್ದು ಶಾಸಕರಾದರು. ಈ ನಡುವೆ ಸುಬ್ಬಾರೆಡ್ಡಿ ಕಾಂಗ್ರೆಸ್ ಸೇರ್ಪಡೆಗೆ ಹೈಕಮಾಂಡ್ ಒಲವು ವ್ಯಕ್ತಪಡಿಸುತ್ತಾದರೂ ಸಹ ಸಂಪಂಗಿ ವಿರೋಧಿಸಿಕೊಂಡು ಬಂದಿದ್ದರು.ಈ ಹಿಂದೆ ವೀರಪ್ಪ ಮೊಯ್ಲಿ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರ ಬೆಂಬಲಿಗರು ಪರಸ್ಪರ ಧಿಕ್ಕಾರಗಳನ್ನು ಕೂಗಿಕೊಂಡು ಮೊಯ್ಲಿಗೆ ಮುಜುಗರ ಉಂಟು ಮಾಡಿದ್ದರು.ಇದು ಬಾಗೇಪಲ್ಲಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲೂ ಪುನರಾವರ್ತನೆಯಾಯಿತು. ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಇದಕ್ಕೆ ಸಾಕ್ಷಿಯಾದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

