ಕೋಲಾರ

ಇಂದು ನಾಮಪತ್ರಗಳನ್ನುಹಿಂಪಡೆಯಲು ಕಡೆ ದಿನ

Published On :

ಕೋಲಾರ: ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿಗಳಿಂದ ನಾಮಪತ್ರ ಹಿಂಪಡೆಸಲು ಕಾಂಗ್ರೆಸ್,ಬಿಜೆಪಿ ಹಾಗೂ ಜೆಡಿಎಸ್ ಮುಂಡರು ಕಸರತ್ತು ನಡೆಸಿದ್ದಾರೆ.
ನಾಮಪತ್ರ ಹಿಂಪಡೆಯಲು ಶನಿವಾರ ಕಡೆ ದಿನ. ಜೆಡಿಎಸ್ ಟಿಕೆಟ್ ಸಿಗದೆ ಪಕ್ಷೇತರಾಗಿ ಸ್ಪರ್ಧಿಸಿರುವ ಜಿಪಂ ಸದಸ್ಯ ಎಸ್.ಬಿ.ಮುನಿವೆಂಕಟಪ್ಪ ಅವರ ಮನಮೊಲಿಸಲು ಮಾಜಿ ಸಚಿವ ಕೆ.ಶ್ರೀನಿವಾಸಗೌಡ, ಮಾಲೂರು ಶಾಸಕ ಮಂಜುನಾಥಗೌಡ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ವೆಂಕಟ ಶಿವಾರೆಡ್ಡಿ ಪ್ರಯತ್ನಿಸಿದರಾದರೂ ಫಲ ಸಿಕ್ಕಿಲ್ಲ.
ಸಮಾಧಾನ ಪ್ರಕ್ರಿಯೆ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ವೇಳೆಗೆ ಎಸ್.ಬಿ.ಮುನಿವೆಂಕಟಪ್ಪ ಅವರು ಪಕ್ಷದ ವರಿಷ್ಠರು ಸೂಚನೆಗೆ ಮಣಿದು ನಾಮಪತ್ರ ಹಿಂದಕ್ಕೆ ಪಡೆಯಬಹುದೆಂದು ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ನಾಮಪತ್ರ ಹಿಂದಕ್ಕೆ ಪಡೆಯದಿದ್ದರೆ ಪಕ್ಷದಿಂದ ಅಮಾನತು ಮಾಡಿ ಕಣದಿಂದ ನಿವೃತ್ತಿಗೊಳ್ಳುವಂತೆ ಮಾಡುವುದಕ್ಕೂ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.
'ನಾಮಪತ್ರ ಹಿಂಪಡೆಯುವ ವಿಚಾರವಾಗಿ ಇನ್ನೂ ಯಾವುದೇ ನಿರ್ಧಾರಕ್ಕೆ ಬಂದಿಲ್ಲ. ಪಕ್ಷದ ವರಿಷ್ಠರು ಯಾರು ತನ್ನನ್ನು ಸಂಪರ್ಕಿಸಿಲ್ಲ. ಶನಿವಾರ ಬೆಳಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವೆ' ಎಂದು  ವರಿಷ್ಠರು ಯಾರು ತನ್ನನ್ನು ಸಂಪರ್ಕಿಸಿಲ್ಲ.ಶನಿವಾರ ಬೆಳಿಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವೆ ಎಂದು ಎಸ್.ಬಿ.ಮುನಿವೆಂಕಟಪ್ಪ ಕನ್ನಡಪ್ರಭಕ್ಕೆ ತಿಳಿಸಿದರು. ಜೆಡಿಎಸ್ ಅಭ್ಯರ್ಥಿ ಕೆ.ಕೇಶವ ಅವರಿಗೆ ಪಕ್ಷೇತರರಾಗಿ ಸ್ಪರ್ಧಿಸಿರುವ ಚಿಂತಾಮಣಿಯ ಕೆ.ಕೇಶವ ಎಂಬುವರು ಅಡ್ಡಗಾಲು ಆಗಬಹುದೆಂಬ ಕಾರಣದಿಂದಾಗಿ ಪಕ್ಷೇತರ ಅಭ್ಯರ್ಥಿಯನ್ನು ಹುಡುಕಿ ಕರೆತಂದು ನಾಮಪತ್ರ ಹಿಂದಕ್ಕೆ ಪಡೆಯಲು ಜೆಡಿಎಸ್ ಮುಖಂಡರು ಪ್ರಯತ್ನಿಸುತ್ತಿದ್ದಾರೆ.
ಕಾಂಗ್ರೆಸಿನಿಂದ ಕೆ.ಎಚ್.ಮುನಿಯಪ್ಪ, ಬಿಜೆಪಿಯ ಎಂ. ನಾರಾಯಣಸ್ವಾಮಿ, ಜೆಡಿಎಸ್ನ ಕೆ.ಕೇಶವ, ಆಮ್ ಆದ್ಮಿ ಪಕ್ಷದ ಕೋಟಗಾನಹಳ್ಳಿ ರಾಮಯ್ಯ, ಬಿಎಸ್ಪಿಯ ಅಂಬರೀಷ್ ಸೇರಿದಂತೆ 26 ಅಭ್ಯರ್ಥಿಗಳ ನಾಮಪತ್ರ ಸ್ವೀಕೃತವಾಗಿದೆ. ಬಿಜೆಪಿ ಅಭ್ಯರ್ಥಿ ಎಂ.ನಾರಾಯಣಸ್ವಾಮಿ ತನ್ನ ಹೆಸರಿನ ಇಬ್ಬರು ಪಕ್ಷೇತರರನ್ನು ಸಂಪರ್ಕಿಸಲು ಯಾವುದೇ ಪ್ರಯತ್ನ ನಡೆದಿಲ್ಲವೆನ್ನಲಾಗಿದೆ. ಚುನಾವಣಾ ಕಣದಿಂದ ಯಾರು ಹಿಂದೆ ಸರಿದಿದ್ದಾರೆಂಬುದು ಶನಿವಾರ ಮಧ್ಯಾಹ್ನ 3 ಗಂಟೆಯೊಳಗೆ ಖಚಿತವಾಗಲಿದೆ.
ಈ ನಡುವೆ ಪ್ರಮುಖ ಅಭ್ಯರ್ಥಿಗಳು ಸಿಡು ಬಿಸಿಲು ಲೆಕ್ಕಿಸದೆ ಪ್ರಚಾರ ಕಾರ್ಯ ತೀವ್ರಗೊಳಿಸಿದ್ದಾರೆ. ಏ. 1 ರಿಂದ ಚುನಾವಣಾ ಕಾವು ಹೆಚ್ಚಾಗುವ ಎಲ್ಲ ಲಕ್ಷಣಗಳು ಕಾಣಬರುತ್ತಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.