ಕೋಲಾರ

ಉತ್ತಮ ಸಮಾಜಕ್ಕಾಗಿ ಮತದಾನದಲ್ಲಿ ಭಾಗವಹಿಸಿ

Published On :

ಕೋಲಾರ: ಪ್ರಜಾಪ್ರಭುತ್ವ ರಕ್ಷಣೆ ಹಾಗೂ ಉತ್ತಮ ಸಮಾಜ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳು ಮತದಾನ ಮಾಡಲು ಹಾಗೂ ಮತದಾನ ಮಾಡಿಸಲು ಪಣ ತೊಡಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಡಿ.ಕೆ. ರವಿ ತಿಳಿಸಿದರು. ನಗರದ ಹೊರವಲಯದ ಅರಹಳ್ಳಿಯ ಸರ್ಕಾರಿ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತದಾನದ ಮಹತ್ವದ ಬಗ್ಗೆ ವಿವರಿಸಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬಹಳ ಮುಖ್ಯವಾಗಿರುವುದರಿಂದ ಪ್ರಜಾಪ್ರಭುತ್ವದ ಎಲ್ಲ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಒಳ್ಳೆಯದು ಎಂದರು.  ಚುನಾವಣೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತದಾರರಲ್ಲಿ ಅರಿವು ಮೂಡಿಸಲು ಪಾಲ್ಗೊಳ್ಳುವಿಕೆ ಬಹಳ ಅತ್ಯಮೂಲ್ಯ.  ವಿವಿಧ ಹಂತಗಳಲ್ಲಿ ವಿದ್ಯಾರ್ಥಿಗಳನ್ನು ತೊಡಗಿಸಿಕೊಂಡು ಅಂದರೆ ಬೈಕ್ ರ್ಯಾಲಿ, ಮಾನವ ಸರಪಳಿ, ಜಾಥಾ ಹಾಗೂ ಇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಹಾಗೂ ಸಹಕಾರ ನೀಡಲು ತಿಳಿಸಿದರು. ಚುನಾವಣೆಯಲ್ಲಿ ಪಾಲ್ಗೊಳ್ಳಲು ಪ್ರತಿಜ್ಞಾವಿಧಿಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಬೋಧಿಸಿದರು. ಅಪರ ಜಿಲ್ಲಾಧಿಕಾರಿ ನವೀನ್ ಕುಮಾರ್ ರಾಜು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.