ಕೋಲಾರ

ಪಿಆರ್ಒಗಳಿಗೆ ಚುನಾವಣೆ ತರಬೇತಿ

Published On :

ಬಂಗಾರಪೇಟೆ: ಏ.17ರಂದು ನಡೆಯಲಿರುವ ಲೋಕಸಭೆ ಚುನಾವಣೆಯನ್ನು ಮುಕ್ತವಾಗಿ ನಡೆಸಲು ಶನಿವಾರ ಪಟ್ಟಣದ ಬಾಲಕೀಯರ ಪದವಿ ಪೂರ್ವ ಕಾಲೇಜಿನಲ್ಲಿ ಪಿಆರ್ಒ ಮತ್ತು ಎಆರ್ಒಗಳಿಗೆ ಒಂದು ದಿನದ ತರಬೇತಿ ನೀಡಲಾಯಿತು. ಒಟ್ಟು 525 ಪಿಆರ್ಒ ಮತ್ತು ಎಆರ್ಒಗಳಿಗೆ ಚುನಾವಣೆ ಯಾವ ರೀತಿಯಲ್ಲಿ ನಡೆಸಬೇಕು ಗೊಂದಲ ಬಂದಾಗ ಏನು ಮಾಡಬೇಕೆಂಬ ಬಗ್ಗೆ ತಿಳುವಳಿಕೆ ನೀಡಲಾಯಿತು. ತರಬೇತಿ ಪರಿಶೀಲಿಸಿ ಮಾತಾನಾಡಿದ ಕೋಲಾರ ಉಪ ವಿಭಾಗಾಧಿಕಾರಿ ಮಂಜುನಾಥ್, ಮತದಾನದಂದು ಮತಗಟ್ಟೆ ಸಮೀಪ ಅಹಿತಕರ ಘಟನೆಗಳು ನಡೆದರೆ ತಕ್ಷಣವೇ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು, ನಕಲಿ ಮತದಾರರ ಬಗ್ಗೆ ಎಚ್ಚರಿಕೆಯಿಂದ ಇರಬೇಕು, ಆಯೋಗದ ನೀತಿಗಳನ್ನು ಅಧಿಕಾರಿಗಳು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಎಚ್ಚರಿಕೆ ನೀಡಿದರು. ತಹಸೀಲ್ದಾರ್ ಉಷಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.