ಕೋಲಾರ

ಜ್ಯೋತಿರೆಡ್ಡಿ ಜೆಡಿಎಸ್ಗೆ ಗುಡ್ಬೈ

Published On :

ಗೌರಿಬಿದನೂರು: ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ, ಮಾಜಿ ಶಾಸಕಿ ಎನ್. ಜ್ಯೋತಿರೆಡ್ಡಿ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ಸಲ್ಲಿಸಿದ್ದು, ಭಾನುವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ರಾಜ್ಯಮಟ್ಟದ ಮುಖಂಡರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಳ್ಳುವುದು ಖಚಿತವಾಗಿದೆ.
ಭಾನುವಾರ ಮಧ್ಯಾಹ್ನ 2ಗಂಟೆಗೆ ಗೌರಿಬಿದನೂರಿನಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಬಚ್ಚೇಗೌಡರು ನಡೆಸಲಿರುವ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಎನ್.ಎಂ. ರವಿನಾರಾಯಣರೆಡ್ಡಿ ಹಾಗೂ ಜಿಪಂ ಸದಸ್ಯ ಸಿ.ಆರ್. ನರಸಿಂಹಮೂರ್ತಿ ತಿಳಿಸಿದ್ದಾರೆ.
ಇಂದು ಸಂಜೆ ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಂ. ರವಿನಾರಾಯಣರೆಡ್ಡಿ, ಜಿಪಂ ಸದಸ್ಯ ಸಿ.ಆರ್. ನರಸಿಂಹಮೂರ್ತಿ ಕೋಮುಲ್ ಮಾಜಿ ಅಧ್ಯಕ್ಷ ಎಸ್. ರಮೇಶ್, ತಾಲೂಕು ಅಧ್ಯಕ್ಷ ಗೋಪಿನಾಥ್, ಪ್ರಧಾನ ಕಾರ್ಯದರ್ಶಿ ನಾಗರಾಜರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಕೆ.ವಿ. ಕೃಷ್ಣಮೂರ್ತಿ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಜ್ಯೋತಿರೆಡ್ಡಿ ಅವರ ಮನೆಗೆ ತೆರಳಿ ಪಕ್ಷಕ್ಕೆ ಸೇರ್ಪಡೆಗೊಳ್ಳುವಂತೆ ಮಾತುಕತೆ ನಡೆಸಿದ್ದರಿಂದ ಭಾನುವಾರ ಸೇರ್ಪಡೆಗೊಳ್ಳುವುದು ಖಚಿತವಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ನಡೆದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜೈಪಾಲ್ರೆಡ್ಡಿ ಅವರ ಪಕ್ಷ ಸೇರ್ಪಡೆ ವಿಷಯದಲ್ಲಿ ಕಡೆಗಣಿಸಲಾಗಿದೆ ಎಂದು ಬೇಸರಗೊಂಡಿದ್ದರೆನ್ನಲಾಗಿದೆ. ಕುಮಾರಸ್ವಾಮಿ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿಯೂ ಅವರು ಹಾಜರಿರಲಿಲ್ಲ, ಈ ಸಂಬಂಧ ಕುಮಾರಸ್ವಾಮಿಯವರು ಶಾಸಕ ಜಮೀರ್ ಅಹಮದ್ ಅವರನ್ನು ಸಂಧಾನಕ್ಕೆ ಕಳುಹಿಸುವುದಾಗಿಯೂ ತಿಳಿಸಿದ್ದರು. 2013 ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಜೈಪಾಲರೆಡ್ಡಿ ಜೆಡಿಎಸ್ ಟಿಕೆಟ್ ಆಕಾಕ್ಷಿಯಾಗಿದ್ದರು. ಆದರೆ ಟಿಕೆಟ್ ಅಶ್ವತ್ಥನಾರಾಯಣರೆಡ್ಡಿ ಅವರಿಗೆ ದೊರೆತಾಗ ಪಕ್ಷೇತರರಾಗಿ ಸ್ಪರ್ಧಿಸಿ ಚುನಾವಣೆಯಲ್ಲಿ 2ನೇ ಸ್ಥಾನ ಪಡೆದಿದ್ದರು. 1994ರಲ್ಲಿ ಶಾಸಕಿಯಾಗಿದ್ದ ಜ್ಯೋತಿರೆಡ್ಡಿ ದೇವೇಗೌಡ ಹಾಗೂ ಜೆ.ಎಚ್. ಪಟೇಲ್ ಮುಖ್ಯಮಂತ್ರಿಗಳಾಗಿದ್ದಾಗ ನಿಕಟವರ್ತಿಗಳಾಗಿ ನಂತರ ದೇವೇಗೌಡ ಮತ್ತು ಅವರ ಕುಟುಂಬದೊಂದಿಗೆ ನಿಕಟ ಸಂಬಂಧ ಹೊಂದಿದ್ದರು.
ಮುಖ್ಯಮಂತ್ರಿಯಿಂದ ಆಹ್ವಾನ: ಜಿಡಿಎಸ್ ಪಕ್ಷದಲ್ಲಿ ಅಸಮಾಧಾನ ಗೊಂಡಿರುವ ಜ್ಯೋತಿರೆಡ್ಡಿ ಅವರನ್ನು ತಮ್ಮ ಪಕ್ಷಕ್ಕೆ ಬರುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೂರವಾಣಿ ಮೂಲಕ ಆಹ್ವಾನಿಸಿದ್ದಾರೆನ್ನಲಾಗಿದೆ. ಆದರೂ ಮೋದಿ ಪ್ರಧಾನಿ ಅಭ್ಯರ್ಥಿಯಾಗಿರುವ ಹಿನ್ನಲೆಯಲ್ಲಿ ಬಿಜೆಪಿಗೆ ಬೆಂಬಲಿಸಬೇಕು ಎಂಬ ಆಕಾಂಕ್ಷೆ ಜ್ಯೋತಿರೆಡ್ಡಿ ಅವರದ್ದು ಎನ್ನಲಾಗಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.