ಕೋಲಾರ

ಮಹಿಳೆಯರಿಗೆ ಶೇ.33 ಮೀಸಲಾತಿಗೆ ಒತ್ತಾಯ

Published On :

ಕೋಲಾರ: ಎಲ್ಲ ರಾಜಕೀಯ ಪಕ್ಷಗಳು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಲೋಕಸಭೆ ಮತ್ತು ರಾಜ್ಯ ವಿಧಾನ ಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ನೀಡುವ ಮಸೂದೆ ಜಾರಿಯ ಕುರಿತು ನಿಲುವುಗಳನ್ನು ಪ್ರಕಟಿಸದಿದ್ದರೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿಸುತ್ತೇವೆಂದು ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷ ಕೆ.ಎಸ್. ವಿಮಲ ಎಚ್ಚರಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಅವರು ಜನವಾದಿ ಮಹಿಳಾ ಸಂಘಟನೆಯಿಂದ ಸಿದ್ಧಪಡಿಸಿರುವ ಮಹಿಳೆಯರ ಹಿತಾಸಕ್ತಿ ಪ್ರೋತ್ಸಾಹಿಸುವ ಪ್ರಣಾಳಿಕೆ ಬಿಡುಗಡೆಗೊಳಿಸಿ ಮಾತನಾಡಿ, ಭ್ರಷ್ಟಾಚಾರ ರಹಿತ, ನೈಜ ಅಭಿವೃದ್ಧಿಗಾಗಿ ಮತ್ತು ಜಾತ್ಯತೀತ ಸರ್ಕಾರಕ್ಕಾಗಿ ಮಹಿಳಾ ಪ್ರಣಾಳಿಕೆ ಬಿಡುಗಡೆಗೊಳಿಸಿರುವುದಾಗಿ, ಸ್ಥಾನಿಕ ಚುನಾವಣೆಗಳಿಗೆ ಶೇ.33 ರಷ್ಟು ಮೀಸಲಾತಿ ನೀಡಿದ ಸರ್ಕಾರಗಳು ವಿಧಾನ ಸಭಾ ಮತ್ತು ಸಂಸತ್ ಚುನಾವಣೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ಅಂಗೀಕರಿಸಿದೆ ತಡೆಹಿಡಿದಿದೆ ಎಂದು ಆರೋಪಿಸಿದರು.
ರಾಜಕೀಯ ಪಕ್ಷಗಳಿಗೆ ಈಗಾಗಲೇ ಪ್ರಣಾಳಿಕೆ ನೀಡಿದ್ದೀವೆ, ಇವುಗಳನ್ನು ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಸೇರಿಸುವಂತೆ ಒತ್ತಾಯಿಸಲಾಗಿದೆ, ಈ ಬಗ್ಗೆ ರಾಜಕೀಯ ಪಕ್ಷಗಳು ನಿರ್ಲಕ್ಷ್ಯ ತೋರಿದರೆ ದೇಶದಲ್ಲಿ ಶೇ.49ರಷ್ಟಿರುವ ಮಹಿಳೆಯರು ಚುನಾವಣಾ ಸಂದರ್ಭದಲ್ಲಿ ತಕ್ಕ ಪಾಠ ಕಲಿಸಲಿದ್ದಾರೆಂದು ತಿಳಿಸಿದರು.
ರಾಜ್ಯಾಧ್ಯಕ್ಷೆ ವಿ. ಗೀತಾ ಮಾತನಾಡಿ, ಕೆಲಸದ ಸ್ಥಳದಲ್ಲಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಿಷೇಧ ಕಾಯಿದೆಯನ್ನು ಪರಿಪೂರ್ಣವಾಗಿ ಅನುಷ್ಠಾನಗೊಳಿಸಬೇಕು ಮತ್ತು ಮನೆ, ಹೊಲವನ್ನು ಕೆಲಸದ ಸ್ಥಳ ಎಂದು ಪರಿಗಣಿಸಲು ಕಾಯಿದೆಗೆ ತಿದ್ದುಪಡಿ ಮಾಡಬೇಕು ಎಂದು ಒತ್ತಾಯಿಸಿದರು.
ಕಾರ್ಮಿಕರಿಗೆ ಒಂದು ದಿನ ರಜೆ ನೀಡಿ ಮತ ಪಡೆಯುವಂತಹ ರಾಜಕೀಯ ಪಕ್ಷಗಳಿಗೆ ಮಹಿಳೆಯರ ಅಭಿವೃದ್ಧಿಗೆ ತಾವು ತೆಗೆದುಕೊಂಡಿರುವ ನಿಲುವುಗಳನ್ನು ಮೊದಲು ಪ್ರಕಟಿಸುವಂತೆ ಮಹಿಳೆಯರು ಪ್ರಚಾರಕ್ಕೆ ಬರುವ ಅಭ್ಯರ್ಥಿಗಳನ್ನು ಪ್ರಶ್ನಿಸಬೇಕೆಂದರು. ಜನವಾದಿ ಮಹಿಳಾ ಸಂಘಟನೆಯ ಮುಖಂಡರಾದ ಸುಶೀಲ, ಜಯಲಕ್ಷ್ಮಿ, ವಿ. ಜ್ಯೋತಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.