ಕಾಂಗ್ರೆಸ್ನಲ್ಲಿ ಭಿನ್ನಮತವಿಲ್ಲ: ವಿ. ಮುನಿಯಪ್ಪ
ಶಿಡ್ಲಘಟ್ಟ: ಕಾಂಗ್ರೆಸ್ನಲ್ಲಿ ಯಾವುದೇ ಭಿನ್ನಮತವಿಲ್ಲ ಪಕ್ಷದಲ್ಲಿರುವ ಸಣ್ಣಪುಟ್ಟ ಲೋಪಗಳನ್ನು ಸರಿಪಡಿಸಿಕೊಂಡು ಒಗ್ಗಟ್ಟಾಗಿ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದು ಮಾಜಿ ಸಚಿವ ವಿ. ಮುನಿಯಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸತಿವ ವಿ. ಮುನಿಯಪ್ಪ, ಬಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಂಡಿದ್ದು ಕೆ.ಎಚ್. ಮುನಿಯಪ್ಪನವರ ಅಧಿಕಾರಾವಧಿಯಲ್ಲಿ ಅಭಿವೃದ್ಧಿ ನಡೆದಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿವಿಧ ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಹೇಳಿದರು. ಶ್ರೀನಿವಾಸಪುರ ಶಾಸಕ ರಮೇಶ್ ಕುಮಾರ್ ಮಾತನಾಡಿ, ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಒದಗಿಸಬಲ್ಲ ಏಕೈಕ ಪಕ್ಷ ಕಾಂಗ್ರೆಸ್ ಆಗಿದ್ದು, ಪಕ್ಷದ ಒಡಕುಗಳಿಗೆ ಅವಕಾಶ ಕೊಡುವುದಿಲ್ಲ ಎಂದರು.
ಕಾಂಗ್ರೆಸ್ಗೆ ಛಲವಾದಿ ಮಹಾ ಸಭಾ ಬೆಂಬಲ
ಬಂಗಾರಪೇಟೆ: 17ರಂದು ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ಎಚ್. ಮುನಿಯಪ್ಪರನ್ನು ಬೆಂಬಲಿಸಲು ಛಲವಾದಿ ಮಹಾ ಸಭಾ ಒಮ್ಮತದಿಂದ ನಿರ್ಣಯ ಕೈಗೊಂಡಿದೆ. ಪಟ್ಟಣದ ಎಸ್.ಎನ್. ರೆಸಾರ್ಟ್ನಲ್ಲಿ ಭಾನುವಾರ ನಡೆದ ಛಲವಾದಿ ಮಹಾಸಭಾ ಕಾರ್ಯಕರ್ತರ ಸಭೆಯಲ್ಲಿ ಹಾಜರಿದ್ದ ಸಂಘದ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಬಾಲಾಜಿ ಚೆನ್ನಯ್ಯ ಮತ್ತಿತರ ಮುಖಂಡರು ಮಾತನಾಡಿ, ರಾಜ್ಯದಲ್ಲಿ ಬಲಗೈ ಸಮುದಾಯವನ್ನು ಎಲ್ಲಾ ರಾಜಕೀಯ ಪಕ್ಷಗಳು ಕಡೆಗಣಿಸಿದೆ, ಆದರೆ ನಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿದ್ಯ ನೀಡುವಲ್ಲಿ ಕಾಂಗ್ರೆಸ್ ಶ್ರಮಿಸುತ್ತಿರುವುದರಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಬೇಕೆಂದು ನಿರ್ಣಯ ಕೈಗೊಂಡು ನಂತರ ಅಭ್ಯರ್ಥಿ ಕೆ.ಎಚ್. ಮುನಿಯಪ್ಪರವರಿಗೆ ಸಂದೇಶ ನೀಡಿದರು.ಂತರ ಮಾತನಾಡಿದ ಕೆ.ಎಚ್. ಮುನಿಯಪ್ಪ, ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡು ಜಿಲ್ಲೆಯ ಆರ್ಥಿಕ ಸ್ಥಿತಿಗತಿಗಳನ್ನು ಬದಲಾಯಿಸಲಾಗಿದೆ ಎಂದರು. ಶಾಸಕ ಎಸ್.ಎನ್. ನಾರಾಯಣಸ್ವಾಮಿ ಮಾತನಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

