ಕೋಲಾರ

ಮತದಾನದ ಅರಿವಿಗೆ ಸಹಕಾರ ಅಗತ್ಯ

Published On :

ಕೋಲಾರ: ಏ.17 ರಂದು ಬೆಳಿಗ್ಗೆ 7 ರಿಂದ ಸಂಜೆ 6ಗಂಟೆಯವರೆಗೆ ಮತದಾನಕ್ಕೆ ಅವಕಾಶವಿರುವುದರಿಂದ ಪ್ರತಿಯೊಬ್ಬರು ಮತದಾನದಲ್ಲಿ ಭಾಗವಹಿಸಲು ಸಂಬಂಧಪಟ್ಟವರು ಅರಿವು ಮೂಡಿಸಬೇಕೆಂದು ಜಿಪಂ ಸಿಇಒ ಹಾಗೂ ಸ್ವೀಪ್ ಸಮಿತಿ ಅಧ್ಯಕ್ಷ ವಿನೋತ್‌ಪ್ರಿಯ ತಿಳಿಸಿದರು.
ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಶಾಲಾ ಕಾಲೇಜುಗಳ ಮುಖ್ಯಸ್ಥರ ಸಭೆಯಲ್ಲಿ ಮಾತನಾಡಿ, ಶಾಲಾ ಕಾಲೇಜು ಮಕ್ಕಳಿಗೆ ಪರೀಕ್ಷೆಗಳು ಇರುವುದರಿಂದ ಅವರನ್ನು ಹೆಚ್ಚಿಗೆ ಒತ್ತಾಯ ಮಾಡುವುದಿಲ್ಲ. ಪರೀಕ್ಷೆಗಳು ಇನ್ನೂ ತಡವಾಗಿ ಪ್ರಾರಂಭವಾಗುವ ವಿದ್ಯಾರ್ಥಿಗಳು ಮಾನವ ಸರಪಳಿ, ಬೈಕ್ ರ್ಯಾಲಿ, ಕ್ಯಾಂಡಲ್‌ಲೈಟ್ ಪೆರೇಡ್‌ನಲ್ಲಿ ಭಾಗವಹಿಸುವಂತೆ ತಿಳಿಸಿದರು.
18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಮತದಾರರ ಅರಿವು ಕಾರ್ಯಕ್ರಮದಲ್ಲಿ ಭಾಗವಹಿಸಬಹುದು. ಕೆಲವೊಂದು ಹಿಂದುಳಿದ ಪ್ರದೇಶಗಳಲ್ಲಿ ಜನರಿಗೆ ಮತದಾನದ ಮಹತ್ವ ತಿಳಿದಿರುವುದಿಲ್ಲ, ಅವರು ಕೆಲಸ ಕಾರ್ಯಗಳಲ್ಲಿ ತಲ್ಲೀನರಾಗಿರುತ್ತಾರೆ.  ಅಂತಹ ಕುಗ್ರಾಮಗಳಿಗೆ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಮತಗಟ್ಟೆ ಅಧಿಕಾರಿಗಳ ಜೊತೆ ಮನೆ ಮನೆಗೆ ಭೇಟಿ ನೀಡಿ ಓಟರ್ ಚೀಟಿ ನೀಡಿ ಅವರಿಗೆ ಮತವನ್ನು ಕಡ್ಡಾಯವಾಗಿ ಚಲಾಯಿಸಬೇಕೆಂದು ತಿಳಿಸಬೇಕೆಂದರು.
ತಾಲೂಕು ಮಟ್ಟದಲ್ಲಿ ಮಾನವ ಸರಪಳಿ, ಬೈಕ್ ರ್ಯಾಲಿ ಮತ್ತು ಕ್ಯಾಂಡಲ್‌ಲೈಟ್ ಪೆರೇಡ್ ಮಾಡಬೇಕೆಂದರು. ಆಯಾ ತಾಲೂಕಿನ ಕಾರ್ಯನಿರ್ವಹಣಾಧಿಕಾರಿಗಳು ಸಮಿತಿ ಅಧ್ಯಕ್ಷರಾಗಿದ್ದು ಹಾಗೂ ಆಯಾ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಸೇರಿ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂದರು.
ಸಾರ್ವಜನಿಕರಲ್ಲಿ ಮತದಾನದ ಪಾವಿತ್ರ್ಯತೆ ತಿಳಿಸಲು ಕ್ರಿಯಾ ಯೋಜನೆಯನ್ನು ಹಾಕಿಕೊಳ್ಳಲಾಗಿದೆ.  ಅದರಂತೆ ಏಪ್ರಿಲ್ ಹತ್ತರಂದು ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಂದ ರ್ಯಾಲಿ, ಏ.11ರಂದು ಮ್ಯಾರಥಾನ್ ಓಟ, ಏ.12ರಂದು ಮೋಟಾರ್ ರ್ಯಾಲಿ, ಏ.13 ರಂದು ಮಾನವ ಸರಪಳಿ, ಏ.14 ರಂದು ಕ್ಯಾಂಡಲ್‌ಲೈಟ್ ಪೆರೇಡ್‌ಗಳನ್ನು ಎಲ್ಲಾ ತಾಲೂಕು ಮಟ್ಟಗಳಲ್ಲಿ ಏರ್ಪಡಿಸಲಾಗುವುದು ಎಂದು ಹೇಳಿದರು.
ಈ ಎಲ್ಲಾ ಕಾರ್ಯಕ್ರಮಗಳಿಂದ ಜಿಲ್ಲೆಯಲ್ಲಿ ಶೇಕಡ ನೂರರಷ್ಟು ಮತದಾನವಾಗಬೇಕೆಂದು ಹೇಳಿದರು. ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಬದನೂರು, ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಹಾಗೂ ಸ್ವೀಪ್ ಕಾರ್ಯದರ್ಶಿ ಸಿ.ಎಂ. ರಂಗಾರೆಡ್ಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.