ಕೋಲಾರ

ಸುಳ್ಳಿನಿಂದಲೇ ಮರುಳು ಮಾಡುವ ಮೊಯ್ಲಿ

Published On :

ಬಾಗೇಪಲ್ಲಿ: ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಕೇವಲ ಸುಳ್ಳು ಆಶ್ವಾಸನೆಗಳನ್ನು ನೀಡಿ  ಕ್ಷೇತ್ರದ ಜನತೆಯನ್ನು ಮರುಳು ಮಾಡುತ್ತಿದ್ದಾರೆ ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ರಾಬಿನ್ ಮ್ಯಾಥ್ಯೂಸ್ ಆರೋಪಿಸಿದರು.
ಪಟ್ಟಣದ ಮುಖ್ಯರಸ್ತೆಯಲ್ಲಿ ತಮ್ಮ ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿದ ನಂತರ ಮಾತನಾಡಿದ ಅವರು, ಕಳೆದ 5 ವರ್ಷಗಳ ಹಿಂದೆ ನಡೆದ ಚುನಾವಣೆಯಲ್ಲಿ  ಕ್ಷೇತ್ರದ ಜನತೆಗೆ ನೀಡಿದ್ದ ಭರವಸೆಗಳು ಭರವಸೆಗಳಾಗಿಯೇ ಉಳಿದಿವೆ. ಅವರ ಸ್ವಂತ ಕ್ಷೇತ್ರದ ಜನತೆ ತಿರಸ್ಕಾರ ಮಾಡಿರುವುದರಿಂದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ವಲಸೆ ಬಂದರು. ಈ ಕ್ಷೇತ್ರದ ಜನತೆ ಅವರಿಗೆ ಪುನರ್ಜನ್ಮ ನೀಡಿದ ಈ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆಯಾದರೂ ಏನು ಎಂದು ಪ್ರಶ್ನಿಸಿದರು.
ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ನಾಯಕರು ಅಧಿಕಾರದ ಗದ್ದುಗೆಯನ್ನು ಏರಲು ತಮ್ಮ ಸ್ವಾರ್ಥಕ್ಕಾಗಿ ಮತದಾರರಿಗೆ ಅನೇಕ ಆಸೆ, ಆಮಿಷಗಳನ್ನು ನೀಡುವ ಮೂಲಕ ಮತದಾರರನ್ನು ಸೆಳೆಯುವ ಯತ್ನ ಮಾಡುತ್ತಿದ್ದಾರೆ. ಮತದಾರರು ಆಸೆ, ಆಮಿಷಗಳಿಗೆ ಬಲಿಯಾಗದೇ ಕ್ಷೇತ್ರದ ಅಭಿವೃದ್ಧಿಯ ಕಡೆ ಕಾಳಜಿ ವಹಿಸುವಂತಹವರಿಗೆ  ತಮ್ಮ ಅಮೂಲ್ಯವಾದ ಮತಗಳನ್ನು ನೀಡುವಂತೆ ಮನವಿ ಮಾಡಿದ ಅವರು, ತಮ್ಮ ಮತವನ್ನು ನೀಡಿ ನನಗೆ ಗೆಲ್ಲಿಸಿದರೆ ಬರಡು ಜಿಲ್ಲೆಗಳಿಗೆ ಶಾಶ್ವತ ನೀರಾವರಿ, ಉದ್ಯೋಗ ಸೇರಿದಂತೆ  ಮೂಲಭೂತ ಸೌಕರ್ಯಗಳನ್ನು ಈ ಕ್ಷೇತ್ರಕ್ಕೆ ಒದಗಿಸುವ ಮೂಲಕ ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಶ್ರಮಿಸುತ್ತೇನೆ ಎಂದರು. ಇದಕ್ಕೂ ಮುನ್ನಾ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ರಾಬಿನ್ ಮ್ಯಾಥ್ಯೂಸ್ ತನ್ನ ಅಪಾರ ಬೆಂಬಲಿಗರೊಂದಿಗೆ ಮೆರವಣಿಗೆ ನಡೆಸಿದರು. ಮೆರವಣಿಗೆಯಲ್ಲಿ ಸಮಾಜವಾದಿ ಪಕ್ಷದ ಮಾಜಿ ಅಧ್ಯಕ್ಷೆ ಲಲಿತಾ ಹೆಗಡೆ, ಜಿಲ್ಲಾ ಮುಖಂಡ ಚಂದ್ರಶೇಖರ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.