ಕೋಲಾರ

ವಿದ್ಯುತ್ ಕಣ್ಣಾಮುಚ್ಚಾಲೆ: ಸಂಕಷ್ಟದಲ್ಲಿ ರೈತ

Published On :

ಕೆಜಿಎಫ್: ಮಳೆ, ಬೆಳೆಯಿಲ್ಲದೆ ಬೇಸಿಗೆಯಲ್ಲಿ ಕುಡಿಯುವ ನೀರು ಸಿಗದೆ ನಾನಾ ತೊಂದರೆ ಅನುಭವಸುತ್ತಿರುವ ಕ್ಷೇತ್ರದ ಜನತೆಗೆ ಇದೀಗ ವಿದ್ಯುತ್ ತೊಂದರೆ ಎದುರಾಗಿದೆ.
ವಿದ್ಯುತ್ ಅಸಮರ್ಪಕ ಪೂರೈಕೆಯಿಂದಾಗಿ ಬೋರ್‌ವೆಲ್‌ಗಳಲ್ಲಿ ಬರುತ್ತಿದ್ದ ನೀರು ಮೇಲೆತ್ತಲೂ ಕಷ್ಟವಾಗಿದೆ. ನಗರದ ಜನತೆಯ ಪಾಡು ಇದಾದರೇ ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳ ಸ್ಥಿತಿ ಹೇಳತೀರದಾಗಿದೆ. ಅಂತರ್ಜಲಮಟ್ಟ ಕುಸಿದಿದ್ದು ನಿಗಧಿಪಡಿಸಿದ ವೇಳಾಪಟ್ಟಿಯಂತೆ 3 ಪೇಸ್  ವಿದ್ಯುತ್ ಪೂರೈಸದ ಬೆಸ್ಕಾಂ ಅಧಿಕಾರಿಗಳು ಮನಬಂದಂತೆ ವಿದ್ಯುತ್ ಕಡಿತಗೊಳಿಸುತ್ತಿದ್ದು ರೈತರೂ ಬೆಳೆದಿದ್ದ ಅಲ್ಪ ಸ್ವಲ್ಪ ಬೆಳೆಗಳು ನಾಶವಾಗುತ್ತಿವೆ. ಜಾನುವಾರುಗಳಿಗೆ ಕುಡಿಯಲು ನೀರು ಸಿಗದೆ ಪರದಾಡುವಂತಾಗಿದೆ.
ನೀರಿನ ಹಾಹಾಕಾರ ತೀರಿಸಲು ಇತೀಚೆಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಯ ಎಲ್ಲಾ ಶಾಸಕರ, ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಸಭೆ ಕರೆದು ಜನತೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸಲಾಗಿತ್ತು. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಂದ ಲೋಪದೋಷಗಳು ಕಂಡುಬಂದಲ್ಲಿ ಅಂತಹವರ ವಿರುದ್ಧ ಕ್ರಮ ಜರುಗಿಸುವ ಎಚ್ಚರಿಕೆ ನೀಡಲಾಗಿತ್ತು. ಈ ಎಚ್ಚರಿಕೆ ಬೆಸ್ಕಾಂ ಅಧಿಕಾರಿಗಳಿಗೂ ಅನ್ವಯಿಸುತ್ತದೆ ಎಂದು ಹೇಳಲಾಗಿತ್ತು.
ಆದರೆ ಬೆಸ್ಕಾಂ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಸೂಚನೆ ಕಿವಿಗೆ ಹಾಕಿಕೊಳ್ಳದೆ ತಮಗೆ ಇಷ್ಟಬಂದಂತೆ ವರ್ತಿಸುತ್ತಿದ್ದಾರೆ. ಇದನ್ನೇ ಮುಖ್ಯ ಕಾರಣವಾಗಿಟ್ಟುಕೊಂಡು ನೀರು ಸರಬರಾಜು ಮಂಡಳಿ, ಗ್ರಾಪಂ, ನಗರಸಭೆ ಅಧಿಕಾರಿಗಳು ನೀರು ಸರಿಯಾಗಿ ಪೂರೈಸದೆ ನಿರ್ಲಕ್ಷ್ಯತೆ ಮವಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಶಾಸಕರು ಬೆಸ್ಕಾಂ ಅಧಿಕಾರಿಗಳ ಸಭೆ ಕರೆದು ಸಮರ್ಪಕ ವಿದ್ಯುತ್ ಪೂರೈಕೆಗೆ ಮುಂದಾಗಬೇಕು ಎಂಬುದು ಸಾರ್ವಜನಿಕರ ಬೇಡಿಕೆಯಾಗಿದೆ.

ಆರ್. ರಜನೀಕಾಂತ್

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.