ಸರ್ಕಾರದ ಸವಲತ್ತು ಜನರಿಗೆ ತಲುಪಲಿ
ಕೋಲಾರ: ಸರ್ಕಾರ ಜಾರಿಗೆ ತಂದಿರುವ ಯೋಜನೆಗಳನ್ನು ಹಾಗೂ ಸವಲತ್ತುಗಳನ್ನು ಬಡವರಿಗೆ ತಲುಪಿಸುವ ಜವಾಬ್ದಾರಿ ಸ್ವಯಂ ಸೇವಾ ಸಂಸ್ಥೆಗಳ ಮೇಲಿದೆ ಎಂದು ಪ್ರಧಾನ ಹಿರಿಯ ಸಿವಿಲ್ನ್ಯಾಯಾಧೀಶರಾದ ಮಲ್ಲಿಕಾರ್ಜುನ ಕಿಣಿಕೇರಿ ಅಭಿಪ್ರಾಯಪಟ್ಟರು.
ನಗರದ ಗೌರಿಪೇಟೆಯ ಅಕ್ಷಯ ನರ್ಸಿಂಗ್ ಹೋಂ ಮುಂಭಾಗ ಶುಕ್ರವಾರ ಜಾಗೃತಿ ಸೇವಾ ಸಂಸ್ಥೆಯ ಯೋಜನಾ ಕಚೇರಿ ಉದ್ಘಾಟಿಸಿ ಅವರು ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಬಗ್ಗೆ ಅನೇಕರಿಗೆ ಅರಿವೂ ಇಲ್ಲವಾಗಿರುವುದರಿಂದ ಬಡವರ ಸವಲತ್ತುಗಳು ಬೇರೆಯವರ ಪಾಲಾಗುತ್ತಿರುವುದರಿಂದ ಸ್ವಯಂ ಸೇವಾ ಸಂಸ್ಥೆಗಳು ಜನತೆಯಲ್ಲಿ ಅರಿವು ಮೂಡಿಸಬೇಕೆಂದರು.
ಪ್ರಧಾನ ಕಿರಿಯ ಸಿವಿಲ್ನ್ಯಾಯಾಧೀಶರಾದ ಕೆಂಗಬಾಲಯ್ಯ, ಸರ್ಕಾರದಿಂದ ಸಿಗುವ ಸವಲತ್ತುಗಳನ್ನು ಜನರಿಗೆ ತಲುಪಿಸುವ ಕಾರ್ಯದಲ್ಲಿ ವಕೀಲ ಧನರಾಜ್ ಸ್ಥಾಪಿಸಿರುವ ಜಾಗೃತಿ ಸೇವಾ ಸಂಸ್ಥೆ ಕಾರ್ಯನಿರ್ವಹಿಸಲಿ ಎಂದು ಹಾರೈಸಿದರು.
ಡಿವೈಎಸ್ಪಿ ಅಶೋಕ್ ಕುಮಾರ್, ಸಮಾಜದಲ್ಲಿ ಬಡವರು ಬಡವರಾಗಿಯೇ, ಶ್ರೀಮಂತರು ಶ್ರೀಮಂತರಾಗಿಯೇ ಮುಂದುವರೆಯುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ವಿಷಾದಿಸಿದರು. ಶಿಕ್ಷಣ, ಸಂಘಟನೆಯಿಂದ ಸರ್ಕ್ಕಾರದ ಸವಲತ್ತು ಪಡೆದು ಆರ್ಥಿಕ ಸಬಲತೆ ಸಾಧಿಸಬೇಕೆಂದು ಕೋರಿದ ಅವರು, ಸಮಾಜಕ್ಕೆ ಕೊಡುಗೆ ನೀಡುವ ಶಕ್ತಿ ಬೆಳೆಸಿಕೊಳ್ಳಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಕೀಲ ಕೆ.ಆರ್. ಧನರಾಜ್ ಸ್ವಾಗತಿಸಿ, ಸಂಸ್ಥೆ ಈಗಾಗಲೇ ಕಾರ್ಮಿಕರಿಗೆ ಗುರುತಿನ ಚೀಟಿ, ನೋಂದಣಿ, ಆರೋಗ್ಯ ವಿಮೆ, ರಾಷ್ಟ್ರೀಯ ಪಿಂಚಣಿ ಯೋಜನೆ ಅನುಷ್ಠಾನದಂತಹ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದೆ ಎಂದು ತಿಳಿಸಿದರು. ಸಂಸ್ಥೆ ಯೋಜನಾಧಿಕಾರಿ ವಿಜಯಕುಮಾರ್, ಕಾರ್ಯದರ್ಶಿ ವಿಠಲ್ ಕೃಷ್ಣಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

