ಕೋಲಾರ

ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಬಡ್ಡಿರಹಿತ ಸಾಲ ನೀಡಲಿ: ಗೋವಿಂದಗೌಡ

Published On :

ಕೋಲಾರ: ಡಿಸಿಸಿ ಬ್ಯಾಂಕ್ ವ್ಯಾಪ್ತಿಯ ಕೃಷಿ ಪತ್ತಿನ ಸಹಕಾರ ಸಂಘಗಳು ಸುಸ್ತಿ ಬಾಕಿ ಮರು ಪಾವತಿಸಿ ರೈತರಿಗೆ ರು. 3 ಲಕ್ಷ ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ದೊರಕಿಸಬೇಕೆಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಎಂ. ಗೋವಿಂದಗೌಡ ಮನವಿ ಮಾಡಿದ್ದಾರೆ.
ಈ ಕುರಿತು ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಪತ್ರ ಬರೆದಿರುವ ಅವರು, ಕಳೆದ ಒಂದು ದಶಕದಿಂದ ರೈತರು ಸಾಲ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ, ಡಿಸಿಸಿ ಬ್ಯಾಂಕ್ ನೂತನ ಆಡಳಿತ ಮಂಡಳಿಯು ರೈತರಿಗೆ ಸಹಾಯ ಮಾಡಲು ಉದ್ದೇಶಿಸಿರುವುದರಿಂದ ಕೃಷಿ ಪತ್ತಿನ ಸಹಕಾರ ಸಂಘಗಳು ಸುಸ್ತಿ ಬಾಕಿ ಮರು ಪಾವತಿ ಮಾಡುವ ಮೂಲಕ ಬ್ಯಾಂಕಿನ ಆಶಯಗಳನ್ನು ಸಕಾರಗೊಳಿಸಬೇಕೆಂದು ತಿಳಿಸಿದ್ದಾರೆ. ಬ್ಯಾಂಕ್‌ನಿಂದ ರೈತರಿಗಾಗಿ ಇರುವ ಹೊಸ ಸಾಲ ಯೋಜನೆಗಳ ಲಾಭ ಪಡೆದುಕೊಳ್ಳಲು ಕೃಷಿ ಪತ್ತಿನ ಸಹಕಾರ ಸಂಘಗಳು ಹಳೆ ಸಾಲ ಮರುಪಾವತಿಸಿ, ಹೊಸದಾಗಿ ಬೇಕಾದ ಸಾಲ ಯೋಜನೆಯ ಪ್ರಸ್ತಾವನೆಯನ್ನು ನಿಗದಿತ ನಮೂನೆಯಲ್ಲಿ  ಒದಗಿಸುವಂತೆ ಕೋರಿದ್ದಾರೆ. ಸರ್ಕಾರ ರಿಯಾಯಿತಿ ಬಡ್ಡಿ ದರದ ಯೋಜನೆಯಡಿ ಶೇ.3ರ ಬಡ್ಡಿದರದಂತೆ 10 ಲಕ್ಷದವರೆಗೂ ಬೆಳೆ ಸಾಲ ಒದಗಿಸಲು ಡಿಸಿಸಿ ಬ್ಯಾಂಕ್ ಸಿದ್ಧವಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ. ಗ್ರಾಮೀಣ ಸ್ವಸಹಾಯ ಗುಂಪುಗಳಿಗೆ ಆರ್ಥಿಕ ಅಭಿವೃದ್ಧಿಗಾಗಿ ಈ ಅವುಗಳ ಕಾರ್ಯನಿರ್ವಹಣೆಗೆ ಅನುಗುಣವಾಗಿ ಶೇ.4 ರ ಬಡ್ಡಿ ದರದ ಸಾಲವನ್ನು ನೀಡಲಾಗುವುದು. ಜಿಲ್ಲಾ ಹಾಲು ಒಕ್ಕೂಟ ಹಾಗೂ ಡಿಸಿಸಿ ಬ್ಯಾಂಕ್ ಸಹಭಾಗಿತ್ವದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಹ ಫಲಾನುಭವಿಗಳಿಗೆ ಹೈನೋತ್ಪಾದನೆಗೆ ಸಾಲ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಡಿಸಿಸಿ ಬ್ಯಾಂಕ್ ಈ ಎಲ್ಲಾ ಸಾಲ ಸೌಲಭ್ಯಗಳನ್ನು ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕವೇ ನೀಡಬೇಕಾದ ಕಾರಣ, ಪತ್ತಿನ ಸಂಘಗಳು ಸುಸ್ತಿ ಸಾಲ ಮರು ಪಾವತಿಸುವ ಮೂಲಕ ಅಗತ್ಯ ಪ್ರಮಾಣದಲ್ಲಿ ಹೊಸ ಸಾಲ ಪಡೆದುಕೊಳ್ಳಬೇಕೆಂದು ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.