ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡ ಚಿಣ್ಣರಿಗೆ ಜಿಲ್ಲಾ ದರ್ಶನ ಭಾಗ್ಯ
ಕೋಲಾರ: ಕ್ರೀಡೆಗಳಿಂದ ಮಕ್ಕಳ ದೈಹಿಕ ಮತ್ತು ಮಾನಸಿಕ ಸದೃಢತೆ ಹಾಗೂ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದು ಜಿಲ್ಲಾ ದೈಹಿಕ ಶಿಕ್ಷಣ ಅಧೀಕ್ಷಕ ಬಸವರಾಜ್ ಚಿಲಕಾಂತ ಮಠ್ ಅಭಿಪ್ರಾಯಪಟ್ಟರು.
ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಜಿಲ್ಲಾ ಮತ್ತು ತಾಲೂಕು ದೈಹಿಕ ಶಿಕ್ಷಕರ ಸಂಘದಿಂದ ಆಯೋಜಿಸಿರುವ ಉಚಿತ ಬೇಸಿಗೆ ಕ್ರೀಡಾ ಶಿಬಿರದಲ್ಲಿ ಪಾಲ್ಗೊಂಡಿರುವ ಚಿಣ್ಣರ ಜಿಲ್ಲಾ ದರ್ಶನ ಪ್ರವಾಸಕ್ಕೆ ಶುಭ ಕೋರಿ ಅವರು ಮಾತನಾಡುತ್ತಿದ್ದರು.
ಕ್ರೀಡೆಗಳು ಉತ್ತಮ ಆರೋಗ್ಯದ ಜತೆಗೆ ಮಾನಸಿಕವಾಗಿಯೂ ಮಕ್ಕಳನ್ನು ಸಬಲರನ್ನಾಗಿಸುತ್ತವೆ, ಶೈಕ್ಷಣಿಕ ಪ್ರಗತಿಗೂ ಆತ್ಮಸ್ಥೈರ್ಯ ತುಂಬುತ್ತವೆ ಎಂದು ತಿಳಿಸಿದರು.
ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಈ. ಶ್ರೀನಿವಾಸಗೌಡ, ಮಕ್ಕಳು ಇಂತಹ ಕ್ರೀಡಾ ಶಿಬಿರದಲ್ಲಿ ಖುಷಿಯಿಂದ ಪಾಲ್ಗೊಂಡಿದ್ದು, ಇವರ ಜಿಲ್ಲಾ ದರ್ಶನಕ್ಕೆ ಬಸ್ಸು ಒದಗಿಕೊಟ್ಟ ಸಹ್ಯಾದ್ರಿ ಕಾಲೇಜು ಅಧ್ಯಕ್ಷ ಉದಯಕುಮಾರ್ ಅವರಿಗೆ ಧನ್ಯವಾದ ಸಲ್ಲಿಸಿದರು.
ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಆರ್. ನಾಗರಾಜ್, ಶಿಬಿರದಲ್ಲಿ ನೂರಾರು ಮಕ್ಕಳು ಪಾಲ್ಗೊಳ್ಳುವ ಮೂಲಕ ಯಶಸ್ವಿಯಾಗಿದೆ, ಇಂದಿನ ಜಿಲ್ಲಾ ಪ್ರವಾಸದಲ್ಲಿಯೂ 80ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದಾರೆಂದರು.
ಜಿಲ್ಲಾ ಮುಖ್ಯ ಶಿಕ್ಷಕರ ಸಂಘದ ಕಾರ್ಯದರ್ಶಿ ಗೋಪಾಲರೆಡ್ಡಿ, ಜಿಲ್ಲಾ ಪ್ರವಾಸ ತೆರಳಿರುವ ಚಿಣ್ಣರಿಗೆ ಶುಭ ಕೋರಿ, ಶಿಸ್ತುಪಾಲನೆಗೆ ಸಲಹೆ ನೀಡಿದರು.
ಜಿಲ್ಲಾ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿ ಮುರಳಿಮೋಹನ್, ದೈಹಿಕ ಶಿಕ್ಷಕರ ಸಂಘ ಈ ಉಚಿತ ಶಿಬಿರ ನಡೆಸಲು ಮುಂದಾದಾಗ ಆತಂಕವಿತ್ತು, ಆದರೆ ಇದೀಗ ಶಿಬಿರ ಯಶಸ್ವಿಯಾಗಿ, ನೂರಾರು ಚಿಣ್ಣರನ್ನು ಸೆಳೆದಿರುವುದು ಖುಷಿ ತಂದಿದೆ ಎಂದ ಅವರು, ಜಿಲ್ಲೆಯ ಆವಣಿ, ಗುಟ್ಟಹಳ್ಳಿ, ಕಮ್ಮಸಂದ್ರ ಸೇರಿದಂತೆ ಹಲವಾರು ಕ್ಷೇತ್ರಗಳಿಗೆ ಮಕ್ಕಳನ್ನು ಪ್ರವಾಸಕ್ಕೆ ಕರೆದೊಯ್ಯಲಾಯಿತು.
ದೈಹಿಕ ಶಿಕ್ಷಕರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಆರ್. ನಾರಾಯಣಸ್ವಾಮಿ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮಂಜುನಾಥ್, ನೌಕರರ ಸಂಘದ ಉಪಾಧ್ಯಕ್ಷ ಖಾದರ್ ಇಲಾಹಿ, ದೈಹಿಕ ತರಬೇತುದಾರರಾದ ಪ್ಲೂಡರ್ ಬೈಲೋ, ಕೆ.ಲೀಲಾ, ಕೆ.ಎನ್.ಶಶಿಕಲಾ, ಎಂ.ನಾಗೇಶ್ ಯಜ್ಞವಲ್ಕ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

