ಮತ ಎಣಿಕೆ ಬಳಿಕ ಕೆಂಪೇಗೌಡರ ಜಯಂತಿಗೆ ನಿರ್ಧಾರ
ಕನ್ನಡಪ್ರಭ ವಾರ್ತೆ,ಕೋಲಾರ, ಮೇ 4
ಜಿಲ್ಲಾ ಒಕ್ಕಲಿಗರ ಸಂಘದಿಂದ ನಾಡ ಪ್ರಭು ಕೆಂಪೇಗೌಡರ 504ನೇ ಜಯಂತ್ಯುತ್ಸವನ್ನು ಆಚರಿಸಲು ನಿರ್ಧರಿಸಲಾಗಿದ್ದು ಲೋಕಸಭಾ ಚುನಾವಣೆಯ ಮತ ಎಣಿಕೆ ಮುಗಿದ ನಂತರ ದಿನಾಂಕವನ್ನು ನಿಗದಿ ಪಡಿಸಲಾಗುವುದೆಂದು ಜಿಲ್ಲಾ ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಕೆ.ವಿ. ಶಂಕರಪ್ಪ ತಿಳಿಸಿದರು.
ನಗರದ ಒಕ್ಕಲಿಗರ ಸಂಘದ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕೆಂಪೇಗೌಡರ ಜಯಂತಿ ದಿನದಂದು ಕೋಲಾರ ನಗರದಲ್ಲಿ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಸಲಾಗುವುದು, ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ತೀವ್ರವಾಗಿ ಬರಗಾಲ ಎದುರಾಗಿದ್ದು ನಾಡ ಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವ ಬದಲು ಸರಳವಾಗಿ ಆಚರಿಸಿದರೆ ಉತ್ತಮ ಎಂದು ಅಭಿಪ್ರಾಯಪಟ್ಟರು.
ಕೋಲಾರ ಜಿಲ್ಲೆಯಲ್ಲಿ ಆಚರಿಸುವ ಜಯಂತ್ಯುತ್ಸವಕ್ಕೆ ಒಕ್ಕಲಿಗ ಸಮುದಾಯದ ಶಾಸಕರು, ಸಚಿವರನ್ನು ಆಹ್ವಾನಿಸಿ ಸಮುದಾಯದ ಸಮಸ್ಯೆಗಳನ್ನು ತಿಳಿಸಿ ಸಹಾಯ ಕೇಳೋಣ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಸಂಘವನ್ನು ಅಭಿವೃದ್ಧಿ ಪಡಿಸಲಾಗಿದ್ದು ಅತಿ ಶೀಘ್ರದಲ್ಲೇ ವಾಣಿಜ್ಯ ಮಳಿಗೆಗೆ ಗುದ್ದಲಿ ಪೂಜೆ ನೇರವೆರಿಸಲಾಗುತ್ತದೆ, ಒಕ್ಕಲಿಗರ ವಿದ್ಯಾರ್ಥಿನಿಲಯದಲ್ಲಿ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದರು.
ಜಿಲ್ಲಾಧ್ಯಕ್ಷ ವಿ. ಕೃಷ್ಣಾರೆಡ್ಡಿ ಮಾತನಾಡಿ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣದಿಂದಾಗಿ ಕೆಂಪೇಗೌಡರ ಜಯಂತಿಯನ್ನು ಏ.18ರಂದು ಆಚರಿಸಲು ಸಾಧ್ಯವಾಗಲಿಲ್ಲ, ಜಯಂತ್ಯುತ್ಸವವನ್ನು ಆಚರಿಸಬೇಕಾದರೆ ಕೆಲವರಿಂದ ಮಾತ್ರ ಸಾಧ್ಯವಾಗುವುದಿಲ್ಲ, ಉಪ ಸಮಿತಿಗಳನ್ನು ರಚಿಸಿ ಜವಾಬ್ದಾರಿ ವಹಿಸಿದರೆ ಅನುಕೂಲವಾಗುತ್ತದೆ ಎಂದು ಸಲಹೆ ನೀಡಿದರು.
ನಗರಸಭೆ ಸದಸ್ಯ ಎಸ್.ಆರ್. ಮುರಳೀಗೌಡ, ರೈತ ಸಂಘದ ಕೆ. ಶ್ರೀನಿವಾಸಗೌಡ, ಯುವ ಮುಖಂಡ ವಿಕಾಸ್ ಬೈರೇಗೌಡ, ಡಾ. ಮೌನಿ, ರಾಮಕೃಷ್ಣಪ್ಪ, ದೊಡ್ಡಸಬ್ಬೇನಹಳ್ಳಿ ಕೃಷ್ಣಪ್ಪ, ವೀರವೆಂಕಟಪ್ಪ, ಪವನ್ ನಾರಾಯಣಸ್ವಾಮಿ, ರುದ್ರಸ್ವಾಮಿ, ರಾಜ್ಯ ಒಕ್ಕಲಿಗ ಸಂಘದ ನಿರ್ದೇಶಕ ವಕ್ಕಲೇರಿ ರಾಮು, ಮಾಗೇರಿ ನಾರಾಯಣಸ್ವಾಮಿ ಇದ್ದರು.
ನಾಡ ಪ್ರಭು ಕೆಂಪೇಗೌಡರ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸುವ ಬದಲು ಸರಳವಾಗಿ ಆಚರಿಸಿದರೆ ಉತ್ತಮ
- ಕೆ.ವಿ. ಶಂಕರಪ್ಪ
ವಕ್ಕಲಿಗರ ಸಂಘದ ಅಧ್ಯಕ್ಷ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

