ಕೋಲಾರ

ಬ್ರಹ್ಮರಥೋತ್ಸವ ಇಂದಿನಿಂದ

Published On :

ಕೋಲಾರ: ಬಂಗಾರಪೇಟೆ ಪಟ್ಟಣದ ಶ್ರೀ ಕೋದಂಡರಾಮಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವ ಹಾಗೂ ಜಾತ್ರೆ ಮೇ 8ರಿಂದ 20 ರವರೆಗೆ ನಡೆಯಲಿದೆ. ಸರ್ಕಾರದ ವತಿಯಿಂದ ಮೇ 14 ರಂದು ಬ್ರಹ್ಮರಥೋತ್ಸವ ನಡೆಯಲಿದೆ.
ಅಕ್ರಮ ಮದ್ಯ ವಶ
ಕೋಲಾರ: ಅಬಕಾರಿ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಮೇ 5ರಂದು ಮುಳಬಾಗಿಲು ವಲಯದ ಅಬಕಾರಿ ನಿರೀಕ್ಷಕರು ಸಿಬ್ಬಂದಿಯೊಡನೆ ಗಸ್ತು ತಿರುಗುತ್ತಿದ್ದಾಗ ಮುಳಬಾಗಿಲು ತಾಲೂಕಿನ ಬೈರಕೂರು ಹೋಬಳಿಗೆ ಸೇರಿದ ಹೆಬ್ಬಣಿ ಮತ್ತು ಹೆಚ್. ಕೋಡಿಹಳ್ಳಿ ಮಾರ್ಗದಲ್ಲಿ ಹೆಚ್.ಪಿ. ನಾಗರಾಜು ಎಂಬುವರಿಗೆ ಸೇರಿದ ಪಂಪ್ಹೌಸ್ ಮನೆಯಲ್ಲಿ 180ಮಿಲಿಯ 108 ಪೆಟ್ಟಿಗೆಗಳ ಕ್ರೌನ್ ವಿಸ್ಕಿ ಟೆಟ್ರಾಪ್ಯಾಕ್ಗಳ ಒಟ್ಟು 933.120 ಲೀಟರ್ ಮದ್ಯವನ್ನು ಅಕ್ರಮವಾಗಿ ದಾಸ್ತಾನು ಮಾಡಿರುವುದನ್ನು ಪತ್ತೆ ಮಾಡಿ ವಶಕ್ಕೆ ಪಡೆದಿದ್ದಾರೆ. ಪಂಪ್ಹೌಸ್ನ ಮಾಲೀಕರಾದ ಹೆಚ್.ಪಿ. ನಾಗರಾಜ್ ತಲೆಮರೆಸಿಕೊಂಡಿದ್ದು ಶೋಧನಾ ಕಾರ್ಯ ಮುಂದುವರೆದಿದೆ. ಜಪ್ತಿ ಮಾಡಿರುವ ಮದ್ಯದ ಮೌಲ್ಯ ಅಂದಾಜು  2.15 ಲಕ್ಷ ರು.ಗಳದ್ದಾಗಿದೆ ಎಂದು ಅಬಕಾರಿ ಉಪ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ಅವಘಡವ್ಯಕ್ತಿ ಸಾವು
ಟೇಕಲ್: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಸಮೀಪದ ಗುಂಡ್ಲಹಳ್ಳಿಯಲ್ಲಿ ನಡೆದಿದೆ. ರಾಜಪ್ಪ (34) ಮೃತಪಟ್ಟ ವ್ಯಕ್ತಿ. ಇವರ ಮನೆಯ ವಿದ್ಯುತ್ ಬಿಲ್ ಕಟ್ಟದ ಕಾರಣ 2 ತಿಂಗಳ ಹಿಂದೆ ಸಂಪರ್ಕ ಕಡಿತಗೊಳಿಸಲಾಗಿತ್ತು, ಆದರೆ ಅವರು ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದಾರೆ. ಮನೆ ಮುಂದೆ ಇದ್ದ ಬಿಎಸ್ಎನ್ಎಲ್ ಕಂಬಕ್ಕೆ ವಿದ್ಯುತ್ ತಂತಿ ತಗುಲಿದ್ದು ಇದನ್ನು ಗಮನಿಸದೆ ಕಂಬಕ್ಕೆ ದನ ಕಟ್ಟುವಾಗ ಘಟನೆ ನಡೆದಿದೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮೃತಪಟ್ಟಿದ್ದಾರೆ ಎಂದು ಬೆಸ್ಕಾ ಇಲಾಖೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದೆ. ಆದರೆ ರಾಜಪ್ಪನವರ ಕುಟುಂಬ ನೀಡಿರುವ ದೂರಿನಲ್ಲಿ ಬೆಸ್ಕಾಂ ಕಡಿತಗೊಳಿಸಿದ ತಂತಿಯಲ್ಲಿ ವಿದ್ಯುತ್ ಪ್ರವಹಿಸಿ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ. ಸ್ಥಳಕ್ಕೆ ಬೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು.
ವಿಶೇಷ ದತ್ತು ಸಂಸ್ಥೆ ಮಾನ್ಯತೆಗಾಗಿ ಅರ್ಜಿ
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ವಿಶೇಷ ದತ್ತು ಯೋಜನೆಯಲ್ಲಿ ವಿಶೇಷ ದತ್ತು ಸಂಸ್ಥೆಗಳಿಗೆ ಮಾನ್ಯತೆಗಾಗಿ ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.  ಜಿಲ್ಲೆಯಲ್ಲಿ ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿಯು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ 2011 ರಿಂದ ಕಾರ್ಯ ನಿರ್ವಹಿಸುತ್ತಿದ್ದು ಸ್ವಯಂಸೇವಾ ಸಂಸ್ಥೆಗಳಿಗೆ ವಿಶೇಷ ದತ್ತು ಸಂಸ್ಥೆಗಳಿಗೆ ಮಾನ್ಯತೆ ನೀಡಲಾಗುತ್ತಿದೆ. ಇದಕ್ಕಾಗಿ ನೋಂದಾಯಿತ ಸಂಸ್ಥೆಗಳು ಮೇ 26 ರೊಳಗೆ ಅರ್ಜಿಯನ್ನು ಸಲ್ಲಿಸಬೇಕೆಂದು ಸಮಗ್ರ ಮಕ್ಕಳ ರಕ್ಷಣಾ ಸೊಸೈಟಿಯ ಅಧ್ಯಕ್ಷ ಡಾ. ಆರ್. ವಿಶಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.