ಕೋಲಾರ

ಕನ್ನಡ ಕಡ್ಡಾಯಕ್ಕೆ ಬೈಕ್ ರ್ಯಾಲಿ

Published On :

ಚಿಂತಾಮಣಿ: ಕನ್ನಡ ಭಾಷೆಯನ್ನು ಕಡ್ಡಾಯವಾಗಿಸಲು ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ನಗರದ ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ನಡೆಸಿತು.
ನಗರದ ಪ್ರವಾಸಿ ಮಂದಿರದಿಂದ ಹೊರಟು ಪ್ರಮುಖ ಬೀದಿಗಳಲ್ಲಿ ಬೈಕ್ ರ್ಯಾಲಿ ಸಂಚರಿಸಿತು. ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ರಕ್ಷಣಾ ವೇದಿಕೆ ಅಧ್ಯಕ್ಷ ಆರ್.ಪಂಕಜ್ ಕರ್ನಾಟಕದಲ್ಲಿ ಎಲ್ಲಾ ಭಾಷೆಗಳ,ಧರ್ಮಗಳ ಜನತೆ ಜೀವಿಸುತ್ತಿದ್ದರೂ, ಬಹುತೇಕ ಕಡೆ ಕನ್ನಡ ಭಾಷೆಯನ್ನು ಕೇಳುವುದೇ ಅಪರೂಪವಾಗಿದೆಯೆಂದರು. ಈ ಹಿನ್ನೆಲೆಯಲ್ಲಿ ಸರ್ಕಾರ ಶಿಕ್ಷಣದಲ್ಲಿ ಮಾತೃಭಾಷೆಯಾಗಿ ಕನ್ನಡವನ್ನು ಕಡ್ಡಾಯಗೊಳಿಸಬೇಕು. ಇಲ್ಲದಿದ್ದರೆ ಕನ್ನಡ ಭಾಷೆ ದಿನದಿಂದ ದಿನಕ್ಕೆ ನಶಿಸಿ ಹೋಗುವುದರಲ್ಲಿ ಸಂಶಯವೇ ಇಲ್ಲ ಎಂದು ಅವರು ಅಭಿಪ್ರಾಯಪಟ್ಟರು.
ಕಾರ್ಯಾಧ್ಯಕ್ಷ ಕೃಷ್ಣೋಜಿರಾವ್ ಮಾತನಾಡಿದರು. ಇದೇ ವೇಳೆ, ತಹಸೀಲ್ದಾರ್ ಜಿ.ವಿ.ಹನುಮಂತರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಯಿತು. ಎನ್.ಶಿವಕುಮಾರ್, ಬಿ.ಸಿ.ಜನಾರ್ದನ್, ಅಕ್ರಂ ಪಾಷ, ಬಿ.ಎಸ್.ಕಾರ್ತಿಕ್, ಯೂನಿಸ್ ಖಾನ್,ಪಿ.ರಮೇಶ್, ಎಂ.ಮುರಳಿ, ಲಕ್ಷ್ಮಣ್ ಸೇರಿ ಅನೇಕರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.