ಚಿಂತಾಮಣಿ: ವಸತಿ ನಿಲಯಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಸತಿ ನಿಲಯಗಳಿಗೆ 2014-15ನೇ ಸಾಲಿಗೆ 5ನೇ ತರಗತಿಯಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಮೆಟ್ರಿಕ್ ನಂತರದ ವಸತಿ ನಿಲಯಗಳ ದಾಖಲಾತಿಗೆ 2014-15ನೇ ಸಾಲಿಗೆ ಪಿಯುಸಿ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿಬಿಎಂ. ಡಿಪ್ಲೋಮೋ, ಬಿ.ಎಸ್ಸಿ ನರ್ಸಿಂಗ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಪ್ರವರ್ಗ-2ಎ, 2ಬಿ, 3ಎ, 3ಬಿ, ಎಸ್.ಸಿ ಮತ್ತು ಎಸ್.ಟಿ ಜಾತಿಗಳಿಗೆ ಸೇರಿದವರಾಗಿರಬೇಕು ಮತ್ತು ವಾರ್ಷಿಕ ಆದಾಯ 44,500 ರು. ಮತ್ತು ಪ್ರವರ್ಗ 1 ಕ್ಕೆ ಸೇರಿದ ವಿದ್ಯಾರ್ಥಿಗಳು 1 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿರಬೇಕು.ವ್ಯಾಪ್ತಿಯ 5 ಕಿ.ಮೀ. ಗಿಂತ ಹೆಚ್ಚಿನ ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಲಾಗುತ್ತದೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಸ್ಥಾನಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಶೇ.25 ರಷ್ಟು ಮೀಸಲಿರಿಸಿದ್ದು ವಿದ್ಯಾರ್ಥಿಗಳು ಜೂ.15 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಗಳನ್ನು ಆಯಾ ನಿಲಯ ಪಾಲಕರು ಅಥವಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ವಿಸ್ತರಣಾಧಿಕಾರಿಗಳ ಕಚೇರಿ, ಪೋಸ್ಟ್ ಆಫೀಸ್ ರಸ್ತೆ, ಚಿಂತಾಮಣಿ ವಿಳಾಸದಲ್ಲಿ ಪಡೆದುಕೊಳ್ಳಬಹುದು.
ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಸತಿ ನಿಲಯಗಳ ದಾಖಲಾತಿಗಾಗಿ 2014-15ನೇ ಸಾಲಿಗೆ 5ನೇ ತರಗತಿಯಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮೇ 25 ರೊಳಗೆ ಅರ್ಜಿಯನ್ನು ಪಡೆದುಕೊಂಡು ಭರ್ತಿ ಮಾಡಿ ಜೂ.10 ರೊಳಗೆ ಸಲ್ಲಿಸಬೇಕು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

