ದುರಸ್ತಿಗೆ ಬಂದಿರುವ ಠಾಣೆಗಳ ದೂರವಾಣಿಗಳು
ಚಿಂತಾಮಣಿ: ಪಟ್ಟಣದ ಅನೇಕ ಪೊಲೀಸ್ ಠಾಣೆಗಳಲ್ಲಿ ದೂರವಾಣಿ ಸಂಪರ್ಕ ಇದ್ದ ಇಲ್ಲದಂತಾಗಿದೆ. ತಾಲೂಕು ಕೇಂದ್ರವಾದ ಚಿಂತಾಮಣಿ ವ್ಯಾಪ್ತಿಗೆ ಒಳಪಡುವ ನಗರ ಪೊಲೀಸ್ ಠಾಣೆ ಮತ್ತು ಗ್ರಾಮಾಂತರ ಪೊಲೀಸ್ ಠಾಣೆ, ಕೆಂಚಾರ್ಲಹಳ್ಳಿ ಪೋಲೀಸ್ ಠಾಣೆ, ಬಟ್ಲಹಳ್ಳಿ ಪೋಲೀಸ್ ಠಾಣೆಗಳು ಪೋಲೀಸ್ ಠಾಣೆಗಳಲ್ಲಿ ದೂರವಾಣಿ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಈ ಠಾಣೆಗಳ ವ್ಯಾಪ್ತಿ ಪ್ರದೇಶವನ್ನು ಅತ್ಯಂತ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲಾಗಿದೆ. ಹೀಗಿರುವಾಗ ಠಾಣೆಗಳಲ್ಲಿನ ದೂರವಾಣಿಗಳು ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ ಹೇಗೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆರೋಪಿಸುತ್ತಿದ್ದಾರೆ. ನೊಂದವರು ಮತ್ತು ಅನ್ಯಾಯಕ್ಕೊಳಗಾದವರು ಠಾಣೆಗಳನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಭಾರಿ ತೊಂದರೆಯಾಗುತ್ತಿದೆ. ಕೂಡಲೇ ಜಿಲ್ಲಾ ಎಸ್ಪಿ ಅವರು ಈ ಬಗ್ಗೆ ಗಮನ ಹರಿಸದಿದ್ದರೆ ಪ್ರತಿಭಟನೆ ನಡೆಸಲಾಗುವುದು ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ನವ ಕರ್ನಾಟಕ ಪರಿಸರ ಸಂರಕ್ಷಣಾ ವೇದಿಕೆ ಅಸ್ತಿತ್ವಕ್ಕೆ
ಗುಡಿಬಂಡೆ: ನಶಿಸಿ ಹೋಗುತ್ತಿರುವ ಪ್ರಕೃತಿ ಸಂಪತ್ತು ಮತ್ತು ಮಾನವನ ದುರಾಸೆಗೆ ಲೂಟಿಯಾಗುತ್ತಿರುವ ಅಮೂಲ್ಯ ವನಸಿರಿಯನ್ನು ಸಂರಕ್ಷಿಸುವ ದ್ಯೇಯೋದ್ದೇಶವನ್ನು ಗುರಿಯಾಟ್ಟುಕೊಂಡು ತಾಲೂಕಿನಲ್ಲಿ ನವಕರ್ನಾಟಕ ವೇದಿಕೆ ಘಟಕ ಅಸ್ತಿತ್ವಕ್ಕೆ ಬಂದಿದೆ. ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದ ನಂತರ ಮಾತನಾಡಿದ ವೇದಿಕೆ ರಾಜ್ಯಾಧ್ಯಕ್ಷ ನೀರಜ್ ರೆಡ್ಡಿ, ಬೆಟ್ಟಗುಡ್ಡಗಳಿಂದ ಆವೃತ್ತವಾದ ಈ ಪ್ರದೇಶ ಅಪಾರವಾದ ಅರಣ್ಯವನ್ನು ಹೊಂದಿದ್ದು ವೃಕ್ಷ ಸಂಪತ್ತಿನಿಂದ ಕೂಡಿದೆ. ಸಾರ್ವಜನಿಕರಲ್ಲಿ ನೆಲ. ಜಲ ಹಾಗೂ ವೃಕ್ಷಗಳ ಮಹತ್ವದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಲು ವೇದಿಕೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುವ ಗುರಿ ಹೊಂದಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

