ಮರುಪರಿಶೀಲನಾ ಅರ್ಜಿ ಸಲ್ಲಿಸಿ
ಸರ್ಕಾರಕ್ಕೆ ಚುಟುಕು ಸಾಹಿತ್ಯ ಪರಿಷತ್, ಕರವೇ ಒತ್ತಾಯ
ಚಿಕ್ಕಬಳ್ಳಾಪುರ: ಕನ್ನಡ ಭಾಷಾ ಮಾಧ್ಯಮ ಕಡ್ಡಾಯದ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಮರು ಪರಿಶೀಲನೆಗೆ ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಜಿಲ್ಲಾ ಮತ್ತು ತಾಲೂಕು ಚುಟುಕು ಸಾಹಿತ್ಯ ಪರಿಷತ್ ಘಟಕ, ಕರವೇ ಒತ್ತಾಯಿಸಿದೆ.
ಉಪವಿಭಾಗಾಧಿಕಾರಿ ಕೆ.ಟಿ.ಶ ಾಂತಲಾ ಮೂಲಕ ಸರ್ಕಾರಕ್ಕೆ ಪ್ರತ್ಯೇಕವಾಗಿ ಮನವಿಪತ್ರ ಸಲ್ಲಿಸಿದ ಮುಖಂಡರು, ನ್ಯಾಯಾಲಯದ ತೀರ್ಪಿನಿಂದ ಕನ್ನಡ ಭಾಷೆಗೆ ದೊಡ್ಡ ಕೊಡಲಿ ಪೆಟ್ಟು ಬಿದ್ದಿದೆ. ಭಾರತೀಯ ಸಂವಿಧಾನದ ಅನ್ವಯವೇ ದೇಶದಲ್ಲಿ ಭಾಷಾವಾರು ಪ್ರಾಂತ್ಯಗಳ ರಚನೆಯಾಗಿದ್ದು, ಪ್ರತಿ ರಾಜ್ಯಕ್ಕೂ ತಮ್ಮದೇ ಆದ ಜವಾಬ್ದಾರಿಗಳನ್ನು ಸಂವಿಧಾನದಲ್ಲಿ ನೀಡಲಾಗಿದೆ. ತನ್ನ ನೆಲ, ಜಲ, ಭಾಷೆ, ಗಡಿಯನ್ನು, ಸಂಸ್ಕೃತಿಯನ್ನು ರಕ್ಷಣೆ ಮಾಡಿಕೊಳ್ಳುವುದು ಆಯಾ ರಾಜ್ಯಗಳ ಆದ್ಯಕರ್ತವ್ಯ. ಸರ್ವೋಚ್ಚ ಯಾಲಯದ ಈ ತೀರ್ಪಿನಿಂದಾಗಿ ರಾಜ್ಯ ಸರ್ಕಾರಗಳ ಆದ್ಯ ಕರ್ತವ್ಯಗಳಿಗೆ ಧಕ್ಕೆ ತರಬಹುದಾದ ಅಪಾಯ ಎದುರಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸಾಹಿತಿ ಗೋಪಾಲಗೌಡ ಕಲ್ವಮಂಜಲಿ, ಚುಟುಕು ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಚಲಪತಿಗೌಡ, ತಾಲೂಕು ಗೌರವಾಧ್ಯಕ್ಷ ಯಲುವಹಳ್ಳಿ ಸೊಣ್ಣೇಗೌಡ, ಉಪಾಧ್ಯಕ್ಷ ನಾಗಭೂಷಣ್ ರೆಡ್ಡಿ, ಪದಾಧಿಕಾರಿಗಳಾದ ಅಶ್ವತ್ಥನಾರಾಯಣ, ಆದಿನಾರಾಯಣ, ರಮಣ್, ಪ್ರಕಾಶ್, ಅಡ್ಡಗಲ್ ಅನಿಲ್, ಅಶ್ವತ್ಥ್ ಇತರರು ಉಪಸ್ಥಿತರಿದ್ದರು. ತಮ್ಮ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಚಲಪತಿಗೌಡ, ಆಯಾ ಭಾಷೆಯನ್ನೇ ಆಯಾ ರಾಜ್ಯಗಳು ತಮ್ಮ ಮಾತೃಭಾಷೆಯಾಗಿ ಮಾಡಿಕೊಂಡಿವೆ. ಆದರೆ ಈಗ ಕೋರ್ಟ್ ನೀಡಿರುವ ತೀರ್ಪಿನಿಂದ ಮಾತೃಭಾಷೆ ಕನ್ನಡಕ್ಕೆ ತೊಂದರೆ ಎದುರಾಗಲಿದ್ದು ಮುಂಬರುವ ದಿನಗಳಲ್ಲಿ ಕನ್ನಡ ನಾಶವಾಗುತ್ತದೆ. ಜತೆಗೆ ಹಿಂದೂ ಸಂಪ್ರಾಯದಾಯಗಳು ದೂರವಾಗಿ ಬ್ರಿಟಿಷ್ ಸಂಪ್ರದಾಯಗಳು ಬರುವ ಆತಂಕ ಎದುರಾಗುತ್ತದೆ ಎಂದರು.
ಕರವೇ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್, ವಿದ್ಯಾರ್ಥಿ ಘಟಕದ ಅಧ್ಯಕ್ಷ ತಿರುಮಣಿ ಪ್ರಸಾದ್ ಗೌಡ, ಉಪಾಧ್ಯಕ್ಷ ಸುಹೇಲ್ ಪಾಷಾ ಸೇರಿ ಅನೇಕರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

