ವಿಜೃಂಭಣೆಯಿಂದ ವಾಸವಿ ಜಯಂತಿ ಆಚರಣೆ
ಕೋಲಾರ/ಮುಳಬಾಗಿಲು: ಮುಳಬಾಗಿಲು ಪಟ್ಟಣದ ಬಜಾರು ರಸ್ತೆಯಲ್ಲಿರುವ ಜಗನ್ಮಾತ ವಾಸವಿ ಕನ್ಯಕಾ ಪರಮೇಶ್ವರಿ ದೇವಸ್ಥಾನದಲ್ಲಿ 54ನೇ ವಾಸವಿ ಜಯಂತಿ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವೈಭವದಿಂದ ನಡೆಯಿತು.
ಬೆಳಗ್ಗೆ ಗಣಪತಿ ಪ್ರಾರ್ಥನೆ, ಗಂಗಪೂಜೆ, ಗೋಪೂಜೆ, ದ್ವಾರಾರ್ಚನೆ, ಆಲಯ ಪ್ರವೇಶ, ಪುಣ್ಯಾಹ ಎಲ್ಲಾ ದೇವರುಗಳಿಗೆ ಪಂಚಾಮೃತ ಅಭಿಷೇಕ, ಪುಷ್ಪಾಲಂಕಾರ, ಗಣಪತಿ ಹೋಮ, ನವಗ್ರಹ ಹೋಮ, ಮೃತ್ಯುಂಜಯ ಹೋಮ, ವಾಸವಿ ಹೋಮ, ಮಹಾಲಕ್ಷ್ಮೀ ಹೋಮ, ಪೂರ್ಮಾಹುತಿ, ಬಲಿಹರಣ, ವಾಸವಿ ಸಹಸ್ರನಾಮಾರ್ಚನೆ, ಮಹಾನೈವೇದ್ಯ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ನಡೆಯಿತು. ಮಧ್ಯಾಹ್ನ ವಾಸವಿ ಯುವ ಜನ ಸಂಘದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ವಾಸವಿ ಜಯಂತಿ ಪ್ರಯುಕ್ತ ಭಕ್ತಾದಿಗಳಿಗೆ ಪಾನಕ, ಹೆಸರುಬೇಳೆ, ಮಜ್ಜಿಗೆ, ವಿತರಣೆ ಮಾಡಲಾಯಿತು. ವಾಸವಿ ಮಹಿಳಾ ಮಂಗಳಿಯವರಿಂದ ಶ್ರೀವಾಸವಿ ಮಾತೆಯ ಭಜನಾ ಕಾರ್ಯಕ್ರಮ ನಡೆಯಿತು. ರಾತ್ರಿ ಪುಷ್ಪ ಪಲ್ಲಕ್ಕಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಈ ಕಾರ್ಯಕ್ರಮದಲ್ಲಿ ಯುವ ಜನಸಂಘದ ವಿಸ್ಮಯ್, ನಾಗೇಂದ್ರ, ಸಂದೀಪ, ಸುಹಾಸ್, ಹರೀಶ್, ನಾರಾಯಣಮೂರ್ತಿ, ಟಿ.ಆರ್. ನಾಗರಾಜ್, ಪ್ರಮೋದ್, ಮಣಿ ಇನ್ನೂ ಅನೇಕ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

