ಕೋಲಾರ

ಅಕ್ರಮಕ್ಕೆ ಕಡಿವಾಣ ಹಾಕಿ

Published On :

ಕೋಲಾರ: ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ನಕಲಿ ಅಂಕಪಟ್ಟಿಗಳಿಗೆ ಕಡಿವಾಣ ಹಾಕಲು ರೈತ ಸಂಘ ಜಿಲ್ಲಾಡಳಿತವನ್ನು ಅಗ್ರಹಸಿದೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ನಾರಾಯಣಗೌಡ ರೈತರ ಕೃಷಿ ಜಮೀನನ್ನು ಜಿಲ್ಲೆಯ ಅಭಿವೃದ್ಧಿಯ ಹಾಗೂ ನಿರುದ್ಯೋಗ ನಿವಾರಣೆಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತದ ಮಾತಿಗೆ ಬೆಲೆ ಕೊಟ್ಟು ಕೈಗಾರಿಕೆಗಳ ಸ್ಥಾಪನೆಗೆ ಕೃಷಿ ಜಮೀನು ನೀಡಿರುವ ರೈತರ ಕುಟುಂಬಕ್ಕೆ ಕೆಲಸ ನೀಡುವ ಭರವಸೆ ನೀಡಿದ್ದ ಸರ್ಕಾರ ಹಾಗೂ ಕೈಗಾರಿಕಾ ಮಂಡಳಿ ಮಾತು ತಪ್ಪಿದೆ ಎಂದು ಆರೋಪಿಸಿದ್ದಾರೆ.
ಐಟಿಐ, ಡಿಪ್ಲೊಮೋ ಹಾಗೂ ಬಿಇ ಪದವೀಧರರನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು ಇದು ಜಿಲ್ಲಾ ಕಾರ್ಮಿಕ ಇಲಾಖೆಗೆ ಹಾಗೂ ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದರೂ ಯಾವುದೇ ಕ್ರಮ ಕೈಗೊಳ್ಳದೆ ಮಾಲೀಕರ ಪರವಾಗಿ ಒಲವು ತೋರುತ್ತಿರುವುದು ಪದವೀಧರ ನಿರುದ್ಯೋಗಿಗಳಲ್ಲಿ ಆತಂಕ ಮೂಡಿಸಿದೆ ಎಂದಿದ್ದಾರೆ.
ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ಹೊಂಡಾ, ಎಕ್ಸಿಡೇ, ಐಸಿನ್, ಮಹೇಂದ್ರ, ಯೂನಿಕಾಸ್ಟ್, ಇಂಡೋ ಮುಂತಾದ ಕಂಪನಿಗಳಲ್ಲಿ ಸಂಪೂರ್ಣವಾಗಿ ಜಿಲ್ಲೆಯ ಪದವೀಧರರನ್ನು ನಿರ್ಲಕ್ಷಿಸಿದ್ದು ಕಷ್ಟಪಟ್ಟು ವಿದ್ಯಾಭ್ಯಾಸ ಮಾಡಿದಂತಹ ಉದ್ಯೋಗ ಆಕಾಂಕ್ಷಿಗಳು ಇಂದು ಕಂಪನಿಗಳಲ್ಲಿ ಉಪ ಗುತ್ತಿಗೆದಾರರ ಮುಖಾಂತರ ದುಡಿಯಬೇಕು ಇಲ್ಲವೇ ಐಟಿಐಗೆ 10 ಸಾವಿರ, ಡಿಪ್ಲೊಮೋಗೆ 25 ಸಾವಿರ ಬಿಇ ಪದವೀಧರ 50 ಸಾವಿರ ರು. ನೀಡಿದರೆ ಪ್ರತಿಷ್ಠಿತ ಕಂಪನಿಗಳಲ್ಲಿ ಕೆಲಸ ಇಲ್ಲವಾದರೆ ಉದ್ಯೋಗ ಖಾಲಿ ಇಲ್ಲ ಎನ್ನುತ್ತಿರುವುದು ಕೈಗಾರಿಕಾ ಪ್ರದೇಶದಲ್ಲಿನ ಭ್ರಷ್ಟಾಚಾರಕ್ಕೆ ಕೈಗನ್ನಡಿಯಾಗಿದೆ ಎಂದು ದೂರಿದ್ದಾರೆ.
ಕೈಗಾರಿಕಾ ಪ್ರದೇಶದಲ್ಲಿನ ಭ್ರಷ್ಟಾಚಾರ ತಡೆಗಟ್ಟಲು ಜಿಲ್ಲಾಧಿಕಾರಿಗಳು, ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಕೂಡಲೇ ಕೈಗಾರಿಕಾ ಪ್ರದೇಶದ ಎಲ್ಲಾ ಮಾಲೀಕರ ಸಭೆ ಕರೆದು ತಮ್ಮ ಕೈಗಾರಿಕೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಅರ್ಹ ಅಭ್ಯರ್ಥಿಗಳಿಗೆ ನೀಡಿ ದಲ್ಲಾಳಿಗಳ ಹಾವಳಿಯನ್ನು ತಪ್ಪಿಸಲು ತಾವು ಮುಂದಾಗಬೇಕೆಂದು ಹಾಗೂ ನಕಲಿ ಅಂಕಪಟ್ಟಿಗಳನ್ನು ನೀಡಿ ಉದ್ಯೋಗ ಗಿಟ್ಟಿಸಿಕೊಂಡಿರುವವರನ್ನು ಅನರ್ಹಗೊಳಿಸಿ ಪ್ರಾಮಾಣಿಕರಿಗೆ ಕೆಲಸ ಸಿಗುವಂತೆ ಮಾಡಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.