ಕ್ರೀಡಾಪಟುಗಳಿಗೆ ಮೀಸಲು ಅಗತ್ಯ: ಜಿಪಂ ಅಧ್ಯಕ್ಷ
ಕೋಲಾರ: ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳಿಗೆ ಉನ್ನತ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಮೀಸಲಾತಿ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ದೈಹಿಕ ಶಿಕ್ಷಕರ ಸಂಘದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಉಚಿತ ಬೇಸಿಗೆ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕ್ರೀಡಾಪಟುಗಳಿಗೆ ಸರ್ಕಾರಗಳು ಹೆಚ್ಚಿನ ಉತ್ತೇಜನಗಳನ್ನು ನೀಡಿದಲ್ಲಿ ನಮ್ಮ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಗಮನಾರ್ಹ ಸಾಧನೆ ಮಾಡುವಲ್ಲಿ ಅನುಮಾನವಿಲ್ಲವೆಂದರು.
ನಗರಸಭಾ ಆಯುಕ್ತ ಜಗದೀಶ್ ಮಾತನಾಡಿ, ಉತ್ತಮ ಆರೋಗ್ಯ ಪಡೆಯಲು ಕ್ರೀಡೆ ಮತ್ತು ವ್ಯಾಯಾಮ ಸಹಕಾರಿ ಎಂದು ಸಲಹೆ ನೀಡಿದರು. ಬೇಸಿಗೆ ಶಿಬಿರಗಳಲ್ಲಿ ಹೆಚ್ಚು ಪಾಲ್ಗೊಳ್ಳುವಂತೆ ಮಕ್ಕಳಿಗೆ ಕಿವಿಮಾತು ಹೇಳಿದ ಅವರು, ಕ್ರೀಡೆಗಳಿಂದ ನಿಮ್ಮ ಆತ್ಮಸ್ಥೈರ್ಯ ಹೆಚ್ಚುತ್ತದೆ ಎಂದು ತಿಳಿಸಿದರು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಬಸವರಾಜ ಚಿಲಕಾಂತಮಠ್ ಮಾತನಾಡಿದರು.
ಕನಕ ಬ್ಯಾಸ್ಕೆಟ್ ಬಾಲ್ ಕ್ಲಬ್ ಅಧ್ಯಕ್ಷ ಅಂಚೆ ಅಶ್ವತ್ಥ್ ಮಾತನಾಡಿ, ಬೆಂಗಳೂರು ಮತ್ತಿತರ ನಗರಗಳಲ್ಲಿ ಹಣ ನೀಡಿ ಶಿಬಿರದಲ್ಲಿ ಮಕ್ಕಳು ಪಾಲ್ಗೊಳ್ಳುತ್ತಾರೆ. ಆದರೆ ಕೋಲಾರದಲ್ಲಿ ಉಚಿತ ಶಿಬಿರದಲ್ಲಿ ಪಾಲ್ಗೊಳ್ಳಲು ಮುಂದೆ ಬರುತ್ತಿಲ್ಲ ಎಂದು ವಿಷಾದಿಸಿದರು.
ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟಶಿವಪ್ಪ, ಮಾಜಿ ನಗರಸಭಾ ಸದಸ್ಯ ತ್ಯಾಗರಾಜ್, ಶಿಬಿರಾರ್ಥಿಗಳಾದ ಸ್ಟೆಪಿ ಪ್ರಿಯಾ, ಕೋಲಾರದ ದಿಗಂತ್, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಆರ್.ನಾಗರಾಜ್ ಮಾತನಾಡಿದರು.
ಜಿಲ್ಲಾ ನೌಕರರ ಸಂಘದ ಕ್ರೀಡಾ ಕಾರ್ಯದರ್ಶಿ ಹಾಗೂ ಶಿಬಿರದ ಮಾರ್ಗದರ್ಶಕ ಮುರಳಿಮೋಹನ್, ದೈಹಿಕ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸಗೌಡ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಮಂಜುನಾಥ್, ನೌಕರರ ಸಂಘದ ಉಪಾಧ್ಯಕ್ಷ ಖಾದರ್ ಇಲಾಹಿ, ಇಸಿಒ ಲಕ್ಷ್ಮಣಪ್ಪ, ಕೆ.ಲೀಲಾ, ವಿಜಯ, ಕೆ.ಎನ್.ಶಶಿಕಲಾ, ಎಂ.ನಾಗೇಶ್, ಪ್ರಭಾಕರ್, ಸಂಪತ್, ವಿಠಲರಾವ್,ರವಿ, ಜೈಪ್ರಕಾಶ್, ಪತ್ರಕರ್ತ ನರಸಿಂಹಮೂರ್ತಿಮತ್ತಿತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

