ಗ್ರಾಪಂ ನೌಕರರ ಪ್ರತಿಭಟನೆ ಅಂತ್ಯ
ಕ.ಪ್ರ.ವಾರ್ತೆ ಕೋಲಾರ ಮೇ 9
ಹಲವು ಬೇಡಿಕೆಗಳ ಈಡೇರಿಕೆಗಾಗಿ ಜಿಲ್ಲಾ ಗ್ರಾಮ ಪಂಚಾಯಿತಿ ನೌಕರರು ಕಳೆದ ಐದು ದಿನಗಳಿಂದ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ನಡೆಸಿದ ಹೋರಾಟಕ್ಕೆ ಮಣಿದ ಜಿಲ್ಲಾ ಪಂಚಾಯತ್ ಆಡಳಿತ ಗ್ರಾಮ ಪಂಚಾಯಿತಿ ನೌಕರರಿಗೆ ಕನಿಷ್ಠ ವೇತನ ನೀಡಲು ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.
ಗ್ರಾಪಂ ನೌಕರರಿಗೆ ಕನಿಷ್ಠ ವೇತನ, ಬಿಲ್ ಕಲೆಕ್ಟರ್ಗಳ ಹುದ್ದೆಗೆ ಹಾಲಿ ಕೆಲಸ ಮಾಡುತ್ತಿರುವ ನೌಕರರಿಗೆ ಬಡ್ತಿ ನೀಡುವುದು, ಸೇವಾ ಪುಸಕ್ತದ ಸೌಲಭ್ಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಿಐಟಿಯು ಪ್ರಾಯೋಜಿಕ ಗ್ರಾಪಂ ನೌಕರರ ಸಂಘದಿಂದ ಕಳೆದು ಐದು ದಿನಗಳಿಂದ ಜಿಪಂ ಮುಂದೆ ಅನಿರ್ದಿಷ್ಟ ಧರಣಿ ನಡೆಸಲಾಗಿತ್ತು.
ಧರಣಿಯ ಗಂಭೀರತೆಯನ್ನು ಮನಗಂಡ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನೋತ್ಪ್ರಿಯಾ ಅವರು, ಸಮಸ್ಯೆ ಬಗೆಹರಿಸಲು ಉಪ ಕಾರ್ಯದರ್ಶಿ ಬದನೂರು ಹಾಗೂ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳನ್ನು ಶುಕ್ರವಾರ ಕರೆಸಿ ಹೋರಾಟ ಸಮಿತಿಯ ಮುಖಂಡರೊಂದಿಗೆ ಜಂಟಿ ಸಮಾಲೋಚನೆ ನಡೆಸಲು ಸೂಚಿಸಿದರು.
ಈ ಹಿನ್ನೆಲೆಯಲ್ಲಿ ಉಪ ಕಾರ್ಯದರ್ಶಿ ಬದನೂರು ಹಾಗೂ ಎಲ್ಲಾ ತಾಲೂಕು ಇ.ಒ.ಗಳ ಸಮ್ಮುಖದಲ್ಲಿ ಹೋರಾಟ ಸಮಿತಿ ಮುಖಂಡರೊಂದಿಗೆ ಸಿ.ಇ.ಒ ಸಭಾಂಗಣದಲ್ಲಿ ಸಭೆ ನಡೆಸಲಾಗಿ, ಸುಮಾರು ಒಂದೂವರೆ ಗಂಟೆ ನಡೆದ ಸಮಾಲೋಚನೆಯ ಪ್ರತಿಫಲವಾಗಿ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ ನೌಕರರಿಗೂ ಕನಿಷ್ಠ ವೇತನ ನೀಡುವುದು, ಖಾಲಿ ಇರುವ ಬಿಲ್ಕಲೆಕ್ಟರ್ ಹುದ್ದೆಗೆ ಗ್ರಾಮ ಪಂಚಾಯಿತಿಯ ಇತರೆ ನೌಕರರನ್ನು ನೇಮಕಾತಿ ಮಾಡಿಕೊಳ್ಳುವುದು, ಪ್ರಸ್ತುತ ಗ್ರಾ.ಪಂ.ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ನೌಕರರನ್ನು ಜಿ.ಪಂ. ಅನುಮೋದನೆಗೆ ಕಳುಹಿಸಿಕೊಡುವುದಕ್ಕೆ ಒಪ್ಪಿಗೆ ಸೂಚಿಸಲಾಯಿತು.
ಗ್ರಾ.ಪಂ ನೌಕರರ ವೇತನಕ್ಕಾಗಿ ಪ್ರತ್ಯೇಕ ಖಾತೆ ತೆರೆಯುವುದು, ನೌಕರರಿಗೆ ಇ.ಪಿ.ಎಫ್, ಬ್ಯಾಟರಿ, ಸಮವಸ್ತ್ರ, ಸೈಕಲ್ ಸೌಲಭ್ಯಗಳನ್ನು ನೀಡಲು ಜಿ.ಪಂ. ಹಾಗೂ ತಾ.ಪಂ ಆಡಳಿತ ಒಪ್ಪಿಗೆ ನೀಡಿದ್ದು, ಕೂಡಲೇ ಆಯಾ ತಾಲೂಕು ಮಟ್ಟದಲ್ಲಿ ಸಂಬಂಧಪಟ್ಟ ಇ.ಒ.ಗಳು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ಕರೆದು ಸದರಿ ತೀರ್ಮಾನವನ್ನು ಅನುಷ್ಠಾನಗೊಳಿಸುವುದಾಗಿ ಜಿ.ಪಂ. ಉಪ ಕಾರ್ಯದರ್ಶಿ ಬದನೂರು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲು ಮುಖಂಡರು ಸಮ್ಮತಿಸಿದರು.
ಚರ್ಚೆಯಲ್ಲಿ ಜಿಲ್ಲಾ ಸಿ.ಪಿ.ಐ(ಎಂ) ಕಾರ್ಮಿಕ ಮುಖಂಡ ಗಾಂಧಿನಗರ ನಾರಾಯಣಸ್ವಾಮಿ, ಗ್ರಾ.ಪಂ. ನೌಕರರ ಸಂಘದ ಜಿಲ್ಲಾಧ್ಯಕ್ಷ ಅಮರನಾರಾಯಣ, ಶ್ರೀನಿವಾಸ್, ಕೇಶವರಾವ್, ಅಶ್ವತ್ಥಪ್ಪ, ವೆಂಕಟರಾಮೇಗೌಡ, ರಾಜೇಂದ್ರ, ಸತ್ಯನಾರಾಯಣ, ಯಲ್ಲಪ್ಪ, ಶ್ರೀರಾಮ, ಶಂಕರಪ್ಪ ಹಾಗೂ ಈಶ್ವರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

