ಮತ ಎಣಿಕೆ ಕೇಂದ್ರಗಳಲ್ಲಿ ಮೊಬೈಲ್ ನಿಷೇಧ
ಕೋಲಾರ: ಲೋಕಸಭೆ ಚುನಾವಣೆಯ ಮತ ಎಣಿಕಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ಪರವಾಗಿ ಏಜೆಂಟರಾಗಿರುವವರು ಮೊಬೈಲ್ ಫೋನ್, ಬೆಂಕಿ ಪೊಟ್ಟಣಗಳನ್ನು ಉಪಯೋಗಿಸಬಾರದೆಂದು ಚುನಾವಣಾಧಿಕಾರಿಗಳು ಸೂಚಿಸಿದ್ದಾರೆ.
ಏ.17ರಂದು ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 16ರಂದು ಕೋಲಾರ ನಗರದ ಸರ್ಕಾರಿ ಬಾಲಕರ ಕಾಲೇಜಿನಲ್ಲಿ ಬೆಳಿಗ್ಗೆ 8 ರಿಂದ ಆರಂಭವಾಗಲಿದ್ದು ಅಭ್ಯರ್ಥಿಗಳ ಕಡೆಯವರು ಚುನಾವಣಾ ಆಯೋಗದ ಸೂಚನೆಗಳನ್ನು ಪಾಲಿಸಿ ಮುಕ್ತವಾಗಿ,ಶಾಂತಿಯುತವಾಗಿ ಮತ ಎಣಿಕೆ ಕಾರ್ಯ ನಡೆಯಲು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.
ಮತ ಎಣಿಕಾ ದಿನದಂದು ಅಭ್ಯರ್ಥಿಗಳು ನೇಮಿಸಲಾಗಿರುವ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಿಂದ ನೀಡಲಾಗಿರುವ ಗುರುತಿನ ಚೀಟಿಯೊಂದಿಗೆ ಎಣಿಕಾ ಏಜೆಂಟರು ಬೆಳಿಗ್ಗೆ 7.30ಕ್ಕೆ ಮತ ಎಣಿಕಾ ಕೇಂದ್ರಕ್ಕೆ ಹಾಜರಾಗಿ ತಮ್ಮನ್ನು ನೇಮಿಸಲಾಗಿರುವ ವಿಧಾನಸಭಾ ಕ್ಷೇತ್ರದ ಮೇಜಿನ ಮುಂದೆ ಗುರುತಿನ ಚೀಟಿಯೊಂದಿಗೆ ಹಾಜರಿರುವಂತೆ ತಿಳಿಸಿದ್ದಾರೆ.
ಬೆಳಿಗ್ಗೆ 7.30ಕ್ಕೆ ಅಭ್ಯರ್ಥಿಗಳು, ಚುನಾವಣಾ ಏಜೆಂಟರ ಸಮ್ಮುಖದಲ್ಲಿ ಭದ್ರತಾ ಕೊಠಡಿಗಳನ್ನು ತೆರೆಯಲಾಗುವುದು. ಸದರಿ ಸಂದರ್ಭದಲ್ಲಿ ಅಭ್ಯರ್ಥಿಗಳು, ಚುನಾವಣಾ ಏಜೆಂಟ್, ಎಣಿಕಾ ಏಜೆಂಟರುಗಳು ಭದ್ರತಾ ಕೊಠಡಿಯಲ್ಲಿ ಹಾಜರಿರಬೇಕು.
ಎಣಿಕಾ ದಿನದಂದು ಮೊಬೈಲ್ ತರುವುದು ಹಾಗೂ ಬಳಸುವುದು, ಬೆಂಕಿ ಪೊಟ್ಟಣ, ಧೂಮಪಾನ ಮತ್ತು ಮದ್ಯಪಾನ ಇತ್ಯಾದಿಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಿ.ಕೆ. ರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶುಕ್ರವಾರ ನಗರದ ಟಿ.ಚನ್ನಯ್ಯ ರಂಗ ಮಂದಿರದಲ್ಲಿ ಅವರು ಮತ ಎಣಿಕೆ ಕಾರ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿ, ಚುನಾವಣೆ ಯಾವುದೇ ಗೊಂದಲ ಇಲ್ಲದೆ ಉತ್ತಮ ರೀತಿಯಲ್ಲಿ ನಡೆದಿದೆ.
ಅದೇ ರೀತಿಯಲ್ಲಿ ಮತ ಎಣಿಕೆ ಕಾರ್ಯವು ನಡೆಯಬೇಕು, ಯಾವುದೇ ಗೊಂದಲ, ವಿವಾದಕ್ಕೆ ಆಸ್ಪದವಿಲ್ಲದೆ ಮತ ಎಣಿಕೆ ಕಾರ್ಯ ನಡೆಯಲು ಸಹಕಾರ ನೀಡಬೇಕೆಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

