ಕೋಲಾರ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರತಿಭಟನೆ

Published On :

ಕ.ಪ್ರ.ವಾರ್ತೆ ಕೋಲಾರ ಮೇ 10
ತಾಲೂಕಿನ ಮಂಗಸಂದ್ರದಲ್ಲಿರುವ ಬೆಂಗಳೂರು ವಿವಿಯ ಸ್ನಾತಕೋತ್ತರ ಕೇಂದ್ರದಲ್ಲಿ ಸಂಶೋಧನಾ ವಿದ್ಯಾರ್ಥಿನಿಗೆ ಲೈಗಿಂಕ ಕಿರಕುಳ ನೀಡಿರುವ ಕನ್ನಡ ವಿಭಾಗದ ಪ್ರಾಧ್ಯಾಪಕ ಹಾಗೂ ಮಾರ್ಗದರ್ಶಕ ಡಾ.ಕಾ.ವೆಂ.ಶ್ರೀನಿವಾಸಮೂರ್ತಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳು ಶನಿವಾರ ಪಿಜಿ ಕೇಂದ್ರದಲ್ಲಿ ಪ್ರತಿಭಟನೆ ನಡೆಸಿದರು.
ಪಿಎಚ್‌ಡಿ ವಿದ್ಯಾರ್ಥಿನಿ ತನಗೆ ಮಾರ್ಗದರ್ಶಕ ಡಾ.ಕಾ.ವೆಂ.ಶ್ರೀನಿವಾಸಮೂರ್ತಿ ಕಳೆದ ನಾಲ್ಕು ದಿನಗಳ ಹಿಂದೆ ಮಾಲೂರಿಗೆ ಡ್ರಾಪ್ ನೀಡುವ ನೆಪದಲ್ಲಿ ತಮ್ಮ ಕಾರಿನಲ್ಲಿ ಕೂರಿಸಿಕೊಂಡು ವಕ್ಕಲೇರಿಯ ಬಳಿ ಇರುವ ನಿಗೂಢ ಸ್ಥಳಕ್ಕೆ ಕರೆದೊಯ್ದು ಲೈಂಗಿಕ ಕಿರಕುಳ ನೀಡಿದ್ದಾರೆಂದು ಬೆಂಗಳೂರು ವಿವಿಯ ಕುಲಪತಿ ಡಾ.ತಿಮ್ಮೇಗೌಡ ಅವರಿಗೆ ನೇರವಾಗಿ ದೂರು ನೀಡಿದ್ದರು. ಈ ಹಿನ್ನಲೆಯಲ್ಲಿ ಕೋಲಾರ ಪಿಜಿ ಸೆಂಟರ್‌ನ ವಿದ್ಯಾರ್ಥಿಗಳು ಶನಿವಾರ ತರಗತಿಗಳನ್ನು ಬಹಿಷ್ಕರಿಸಿ ಕಾ.ವೆಂ.ಶ್ರೀನಿವಾಸಮೂರ್ತಿಯವರನ್ನು ತಕ್ಷಣ ಮಾರ್ಗದರ್ಶಕ ಸ್ಥಾನದಿಂದ ವಜಾ ಮಾಡಿ ಬೇರೊಬ್ಬರನ್ನು ನೇಮಿಸಬೇಕೆಂದು ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ವಿದ್ಯಾರ್ಥಿ ಮುಖಂಡ ಹೂವಳ್ಳಿ ನಾಗರಾಜ್, ಕೋಲಾರ ಪಿಜಿ ಸೆಂಟರ್‌ನಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲ. ಹೆಣ್ಣು ಮಕ್ಕಳ ಹಕ್ಕು ಮತ್ತು ರಕ್ಷಣೆಯ ಬಗ್ಗೆ ವೇದಿಕೆಗಳಲ್ಲಿ ಭಾಷಣ ಮಾಡುವವರೇ ತಮ್ಮ ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ, ದೌರ್ಜನ್ಯವೆಸಗುತ್ತಿದ್ದಾರೆಂದು ಆರೋಪಿಸಿದರು. ಹಳ್ಳಿಗಾಡಿನ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕಾದವರೇ ಲೈಂಗಿಕ ಕಿರಕುಳ ನೀಡಿರುವುದು ದುರ್ದೈವ, ವಿದ್ಯಾರ್ಥಿನಿಗೆ ಆಗಿರುವ ಅನ್ಯಾಯವನ್ನು ಖಂಡಿಸಲೇಬೇಕು, ಬೆಂಗಳೂರು ವಿವಿಯ ಕುಲಪತಿಗಳು ತಪ್ಪು ಮಾಡಿರುವ ಡಾ.ಕಾ.ವೆಂ.ಶ್ರೀನಿವಾಸಮೂರ್ತಿಯವನ್ನು ಕೂಡಲೇ ಮಾರ್ಗದರ್ಶಕ ಹುದ್ದೆಯಿಂದ ವಜಾಗೊಳಿಸಿ ಬೇರೆಯವನ್ನು ನೇಮಿಸಬೇಕು. ಅನ್ಯಾಯಕ್ಕೆ ಒಳಗಾಗಿರುವ ವಿದ್ಯಾರ್ಥಿನಿಯ ಪರವಾಗಿ ಕುಲಪತಿಗಳು ನ್ಯಾಯಸಮ್ಮತ ನಿರ್ಧಾರ ಕೈಗೊಳ್ಳದಿದ್ದರೆ ಜಿಲ್ಲೆಯಾದ್ಯಂತ  ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪಿಜಿ ಕೇಂದ್ರ ನಿರ್ದೇಶಕ ಡಾ.ನಾಗಭೂಷಣ್ ಮಾತನಾಡಿ, ಘಟನೆಯ ಬಗ್ಗೆ ಸಮಗ್ರ ಪರಿಶೀಲನೆ ಹಾಗೂ ವಿಚಾರಣೆಗಾಗಿ ಕುಲಪತಿಗಳು ಈಗಾಗಲೇ ಶ್ರೀನಿವಾಸಮೂರ್ತಿಯವನ್ನು ಕರೆಸಿಕೊಂಡು ವಿಚಾರಣೆ ಮಾಡಿದ್ದಾರೆ. ವಿದ್ಯಾರ್ಥಿನಿಯ ದೂರಿನ ಮೇರೆಗೆ ಲೈಂಗಿಕ ದೌರ್ಜನ್ಯ ತಡೆ ಸಮಿತಿಗೆ ಪ್ರಕರಣವನ್ನು ವರ್ಗಾಯಿಸಲಾಗಿದೆ. ವಿದ್ಯಾರ್ಥಿಗಳು ಶಾಂತಿಯಿಂದ ವರ್ತಿಸಬೇಕೆಂದು ಮನವಿ ಮಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.