'ಭಾಷಾ ಮಾಧ್ಯಮದ ವಿಚಾರದಲ್ಲಿ ಮಧ್ಯಪ್ರವೇಶಿಸಲ್ಲ'
ಕೋಲಾರ: ಕನ್ನಡ ಭಾಷಾ ಮಾಧ್ಯಮದ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ರಾಜ್ಯ ಸರ್ಕಾರವೇ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಾನು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಕೋಲಾರ ಜಿಲ್ಲೆಯ ನರಸಾಪುರ ಹೋಬಳಿಗೆ ಸೇರಿದ ಬೆಳ್ಳೂರಿನಲ್ಲಿರುವ ಅಂತಾರಾಷ್ಟ್ರೀಯ ಖ್ಯಾತಿಯ ಯೋಗ ಗುರು, ಪದ್ಮಭೂಷಣ ಡಾ.ಬಿ.ಕೆ.ಎಸ್.ಅಯ್ಯಂಗಾರ್ ಅವರ ಮನೆಗೆ ಶನಿವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಕನ್ನಡ ಭಾಷಾ ಮಾಧ್ಯಮವನ್ನು ರಕ್ಷಣೆ ಮಾಡುವುದು ರಾಜ್ಯ ಸರ್ಕಾರಕ್ಕೆ ಬಿಟ್ಟ ವಿಚಾರ.
ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ನಾನೇನೂ ಪ್ರತಿಕ್ರಿಯಿಸಲಾರೆ. ರಾಜ್ಯ ಸರ್ಕಾರವೇ ಸಮಸ್ಯೆ ನಿವಾರಣೆ ಮಾಡಲು ಕ್ರಮಕ್ಕೆ ನಿರ್ಧರಿಸಬೇಕಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಕರ್ನಾಟಕದಲ್ಲಿ ಹೆಚ್ಚು ಸ್ಥಾನ ಗಳಿಸುವ ವಿಶ್ವಾಸವಿದೆ. ಮೇ 16ರ ಫಲಿತಾಂಶದ ನಂತರ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದರು.
ಯೋಗ ಕಲಿಯಲು ಆಸಕ್ತಿ: ಯೋಗ ಗುರು ಬಿ.ಕೆ.ಎಸ್ ಅಯ್ಯಂಗಾರ್ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಯೋಗಕ್ಕೆ ಮಾನ್ಯತೆ ತಂದುಕೊಟ್ಟಿದ್ದಾರೆ. ಬಹಳ ದಿನಗಳಿಂದ ಗುರುಗಳನ್ನು ನೋಡಿ ಯೋಗದ ಬಗ್ಗೆ ತಿಳಿಯಲು ಹಂಬಲವಿತ್ತು.
ಇಂದು ಗುರುಗಳ ದರ್ಶನ ಪಡೆಯಲು ಅವಕಾಶ ಸಿಕ್ಕಿತು. ನನ್ನ ದೈಹಿಕ ಸಮಸ್ಯೆಗಳಿಗೆ ಕೆಲವು ಪರಿಹಾರ ಸೂಚಿಸಿದ್ದಾರೆ ಎಂದರು. ಈ ಸಂದರ್ಭದಲ್ಲಿ ಹಿರಿಯ ಐಎಎಸ್ ಅಧಿಕಾರಿ ರಾಮಪ್ರಸಾದ್ ಹಾಗೂ ಯೋಗ ಮತ್ತು ಸಂಶೋಧನಾ ಸಂಸ್ಥೆಯ ಸಿಬ್ಬಂದಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

