ಕೋಲಾರ

28ನೇ ಸ್ಥಾನಕ್ಕೆ ಚಿಕ್ಕಬಳ್ಳಾಪುರ ತೃಪ್ತಿ

Published On :

ಚಿಕ್ಕಬಳ್ಳಾಪುರ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಶೇ.77.09 ರಷ್ಟು ಫಲಿತಾಂಶ ಪಡೆಯುವ ಮೂಲಕ ಜಿಲ್ಲಾ ವಾರು 28 ನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
 ಕಳೆದ ವರ್ಷ ಶೇ.72.95 ರಷ್ಟು ಫಲಿತಾಂಶ ಗಳಿಸುವ ಮೂಲಕ 30 ನೇ ಸ್ಥಾನವನ್ನು ಪಡೆದುಕೊಂಡಿತ್ತು. ಆದರೆ, ಈ ಬಾರಿ ಎರಡು ಜಿಲ್ಲೆಗಳನ್ನು ಹಿಂದಕ್ಕೆ ಹಾಕಿ ಮುಂದಕ್ಕೆ ಹೋಗಿರುವುದಷ್ಟೇ ಸಾಧನೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 18294 ವಿದ್ಯಾರ್ಥಿಗಳು ಮತ್ತು 582 ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ತೆಗೆದುಕೊಂಡಿದ್ದರು.  
ರಾಜ್ಯ ರಾಜಧಾನಿ ಬೆಂಗಳೂರಿಗೆ ಸಮೀಪವಿರುವ ಚಿಕ್ಕಬಳ್ಳಾಪುರ ಜಿಲ್ಲೆಯು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಪಡೆಯಬೇಕು. ರಾಜ್ಯದಲ್ಲಿ ಜಿಲ್ಲಾ ವಾರು 15 ನೇ ಸ್ಥಾನವನ್ನು ಗಳಿಸಬೇಕೆಂಬ ಗುರಿಯನ್ನು ಇಲ್ಲಿನ ಶಿಕ್ಷಣ ಇಲಾಖೆಯಿಟ್ಟುಕೊಂಡಿತ್ತು. ಇದಕ್ಕಾಗಿ ಶಾಲೆಗಳಲ್ಲಿ ಎಸ್‌ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ಕೈಗೊಂಡು ಪರೀಕ್ಷೆಗೆ ಸಜ್ಜುಗೊಳಿಸಬೇಕು. ಅಂಕಗಳನ್ನು ಗಳಿಸುವಲ್ಲಿ ವಿದ್ಯಾರ್ಥಿಗಳು ಅನುಭವಿಸುತ್ತಿರುವ ಸಮಸ್ಯೆಗಳನ್ನು ತಿಳಿದುಕೊಂಡು ಬಗೆಹರಿಸಬೇಕು. ಇದಕ್ಕಾಗಿ ವಿಷಯವಾರು ಶಿಕ್ಷಕರು ವಿಶೇಷವಾಗಿ ಗಮನಕೊಡಬೇಕೆಂದೆಲ್ಲಾ ತಿಳಿಸಲಾಗಿತ್ತು. ಜೊತೆಗೆ ಸಿದ್ಧ ಪರೀಕ್ಷೆಗಳನ್ನು ಸಹ ಕೈಗೊಳ್ಳಲಾಗಿತ್ತು. ಇಷ್ಟಾದರೂ ನಿಗದಿತ ಗುರಿಯನ್ನು ಮುಟ್ಟಲು ಸಾಧ್ಯವಾಗಿಲ್ಲ. ಕನಿಷ್ಠ 20 ನೇ ಸ್ಥಾನದೊಳಗಿರುವಲ್ಲಿ ವಿಫಲವಾಗಿರುವುದರಿಂದ ಇನ್ನೂ ಫಲಿತಾಂಶವನ್ನು ಸುಧಾರಿಸುವ ಸಲುವಾಗಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂಬ ಮಾತುಗಳನ್ನು ಕೇಳಬೇಕಾಗಿ ಬಂದಿದೆ.

ಉತ್ತಮ ಫಲಿತಾಂಶ
ಚಿಕ್ಕಬಳ್ಳಾಪುರ: 2013-14ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಚಿಕ್ಕಬಳ್ಳಾಪುರದ ಬಿಜಿಎಸ್ ಆಂಗ್ಲ ಶಾಲೆ ಉತ್ತಮ ಫಲಿತಾಂಶವನ್ನು ಪಡೆದುಕೊಂಡಿದ್ದು ಒಟ್ಟು 137 ವಿದ್ಯಾರ್ಥಿಗಳಲ್ಲಿ 84 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ,53 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿಯಾಗಿದ್ದಾರೆ. ಈ ಮೂಲಕ ಶಾಲೆಗೆ ಶೇ.100ರಷ್ಟು ಫಲಿತಾಂಶ ಲಭಿಸಿದೆ ಎಂದು ಶಾಲಾ ಮುಖ್ಯೋಪಾಧ್ಯಾಯ ಮೋಹನ್ ಕುಮಾರ್ ತಿಳಿಸಿದ್ದಾರೆ.


ಎಸ್‌ಎಫ್‌ಎಸ್ ಶಾಲೆಗೆ ಶೇ. ನೂರು
ಮಾಲೂರು: ಇಲ್ಲಿನ ಎಸ್‌ಎಫ್‌ಎಸ್ ಶಾಲೆಯು 2014ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ನೂರರಷ್ಟು ಫಲಿತಾಂಶ ಪಡೆದಿದೆ.   ಅತ್ಯುನ್ನತ ಶ್ರೇಣಿಯಲ್ಲಿ 25 ವಿದ್ಯಾರ್ಥಿಗಳು, ಪ್ರಥಮ ದರ್ಜೆಯಲ್ಲಿ 56 ವಿದ್ಯಾರ್ಥಿಗಳು, ದ್ವಿತೀಯ ದರ್ಜೆಯಲ್ಲಿ 10 ವಿದ್ಯಾರ್ಥಿಗಳು ಹಾಗೂ ತೃತೀಯ ದರ್ಜೆಯಲ್ಲಿ ಒಬ್ಬ ವಿದ್ಯಾರ್ಥಿ ಉತ್ತೀರ್ಣರಾಗಿದ್ದು, ಶೇ.100 ರಷ್ಟು ಫಲಿತಾಂಶ ಪಡದಿದೆ ಎಂದು ತಿಳಿಸಿರುವ ಶಾಲೆಯ ಮುಖ್ಯಸ್ಥ ಫಾದರ್ ಸಾಜೋ ಜೋಷ್ ಅನುಷ ಎನ್592(ಶೇ.94.72)ಶುಭಾ ಎಂ.ವಿ.578(ಶೇ.92.48) ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ ಎಂದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.