ಕುಡಿಯುವ ನೀರಿಗೆ ಆಗ್ರಹಿಸಿ ಪುರಸಭೆಗೆ ಮುತ್ತಿಗೆ
ಮಾಲೂರು: ನೀರಿನ ಸಮಸ್ಯೆ ತೀವ್ರವಾಗಿದ್ದರೂ ಟ್ಯಾಂಕರ್‌ನಲ್ಲಿ ನೀರು ಸರಬರಾಜು ಮಾಡದಿರುವ ಇಲ್ಲಿನ ಪುರಸಭೆಯ ಕಾರ್ಯ ವೈಖರಿಯನ್ನು ಖಂಡಿಸಿ ಪಟ್ಟಣದ 8 ವಾರ್ಡ್ ನಿವಾಸಿಗಳು ಪ್ರೊ. ಕೃಷ್ಣಪ್ಪ ಸ್ಥಾಪಿತ ದಸಂಸ ಕಾರ್ಯಕರ್ತರೊಡನೆ ಸೋಮವಾರ ಪುರಸಭೆಗೆ ಮುತ್ತಿಗೆ ಹಾಕಿ ಖಾಲಿ ಕೊಡ ಪ್ರದರ್ಶಿಸಿ, ಪ್ರತಿಭಟಿಸಿದರು.
ದಸಂಸ ತಾಲೂಕು ಸಂಚಾಲಕ ಎಸ್.ಎಂ.ವೆಂಕಟೇಶ್ ಮಾತನಾಡಿ, ಮೂರು ತಿಂಗಳಿಂದ ವಾರ್ಡ್‌ನಲ್ಲಿರುವ ಸ್ಲಂ ಪ್ರದೇಶಗಳಲ್ಲಿ ನೀರಿನ ತೊಂದರೆ ಇದ್ದರೂ ಪುರಸಭೆ ಈ ಪ್ರದೇಶದ ಬಗ್ಗೆ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಇಂತಹ ಪ್ರದೇಶಗಳಿಗೆ ಟ್ಯಾಂಕರ್‌ನಲ್ಲಿ ನೀರು ಸರಬರಾಜು ಮಾಡಬೇಕಾದ ಪುರಸಭೆಯು ವಾರಕ್ಕೆ ಒಂದು ಟ್ಯಾಂಕರ್ ಸಹ ನೀಡುತ್ತಿಲ್ಲ ಎಂದು ಆರೋಪಿಸಿದರು.
ಮನವಿ ಸ್ವೀಕರಿಸಿದ ಪುರಸಭೆ ಮುಖ್ಯಾಧಿಕಾರಿ ರೇಣುಕಾ ಅವರು, ಕೂಡಲೇ ದಿನಕ್ಕೆ 2 ಟ್ಯಾಂಕರ್‌ಗಳನ್ನು ಕಳುಹಿಸಲಾಗುವುದು ಎಂದ ಭರವಸೆ ನೀಡಿದರು. ವಾರ್ಡ್ ಮುಖಂಡ ಮಂಜುನಾಥ್ ನಾಯ್ಡು, ರಾಧಮ್ಮ, ಲಕ್ಷ್ಮಮ್ಮ, ರತ್ನಮ್ಮ, ವೆಂಕಟಲಕ್ಷಮ್ಮ, ಮುನಿಯಮ್ಮ, ಲಲಿತಮ್ಮ, ವರದಾಪುರ ವೆಂಕಟೇಶ್ ಇದ್ದರು.
ಜೂಜಾಡುತ್ತಿದ್ದ ನಾಲ್ವರ ಸೆರೆ
ಕೆಜಿಎಫ್: ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಜೂಜಾಟ ಆಡುತ್ತಿದ್ದ ನಾಲ್ವರನ್ನು ಬಂಧಿಸಿ ಅವರಿಂದ ನಗದನ್ನು ವಶಪಡಿಸಿಕೊಂಡಿರುವ ಘಟನೆ ಸೋಮವಾರ ಸಂಜೆ ಬೇತಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಿಮ್ಮಸಂದ್ರ ಗ್ರಾಮದಲ್ಲಿ ಅಕ್ರಮವಾಗಿ ಅಂದರ್‌ಬಾಹರ್ ಆಡುತ್ತಿರುವುದಾಗಿ ಬಂದ ಖಚಿತ ಮಾಹಿತಿ ಮೇರೆಗೆ ಬೇತಮಂಗಲ ಠಾಣಾ ಪಿಎಸ್‌ಐ ಗೋವಿಂದಯ್ಯ ಮತ್ತು ಸಿಬ್ಬಂದಿ ದಾಳಿ ನಡೆಸಿ ನಾಲ್ವರನ್ನು ಬಂಧಿಸಿ ಆಟಕ್ಕೆ ಪಣವಾಗಿಟ್ಟಿದ್ದ 47 ಸಾವಿರ ನಗದು, 52 ಇಸ್ಪೀಟ್ ಎಲೆಗಳು ಸೇರಿದಂತೆ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜೂಜಾಟವಾಡುತ್ತಿದ್ದ ಬೆಂಗಳೂರು ನಿವಾಸಿ ಶ್ರೀನಿವಾಸ್(33), ಬಂಗಾರಪೇಟೆ ನಿವಾಸಿ ಚಂದ್ರಾಚಾರಿ(53), ಕೋಲಾರ ನಿವಾಸಿ ಹರ್ಷ(34) ಮತ್ತು ನಾಗಶೆಟ್ಟಿಹಳ್ಳಿ ಗ್ರಾಮದ ಸಂಪಂಗಿ ರಾಮಯ್ಯ(43) ಅವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

