ಪಿಯುಸಿಯಲ್ಲಿ ನಪಾಸಾದ ವಿದ್ಯಾರ್ಥಿನಿ ಆತ್ಮಹತ್ಯೆ
ಬಾಗೇಪಲ್ಲಿ: ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡ ಹಿನ್ನೆಲೆಯಲ್ಲಿ ಬೇಸರಗೊಂಡು ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಪಟ್ಟಣದ 3ನೇ ವಾರ್ಡಿನಲ್ಲಿ ನಡೆದಿದೆ. ಅಂಜಲೀ(17) ಎಂಬ ವಿದ್ಯಾರ್ಥಿನಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ.ಪಟ್ಟಣದ 3ನೇ ವಾರ್ಡಿನಲ್ಲಿ ವಾಸವಾಗಿರುವ ಶಾಂತಮ್ಮರವರ ಏಕೈಕ ಮಗಳಾಗಿರುವ ಅಂಜಲಿ ಪಿಯುಸಿ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಅನುತ್ತೀರ್ಣಗೊಂಡಿದ್ದು ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ ಸರ್ಕಾರಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಅಡುಗೆ ಸಹಾಯಕಿಯಾಗಿ ಕಾರ್ಯ ನಿರ್ವಹಿಸಿಕೊಂಡು ತನ್ನ ಮಗಳನ್ನು ಓದಿಸುತ್ತಿದ್ದಳು. ಈ ಘಟನಾ ಸ್ಥಳಕ್ಕೆ ಪೊಲೀಸ್ ಉಪನಿರೀಕ್ಷಕ ವಿ. ಮುನಿರೆಡ್ಡಿ ಭೇಟಿ ನೀಡಿ ಕೇಸು ದಾಖಲಿಸಿಕೊಂಡಿದ್ದಾರೆ.
ಅಪಘಾತ: ವ್ಯಕ್ತಿ ಸಾವು
ಮುಳಬಾಗಲು: ತಾಲೂಕಿಗೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ಗಂಗವರಂ ಮಂಡಲ ಪೆದ್ದ ಉಗಿನಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 4ರ ಚೆನ್ತೈ ಮತ್ತು ಬೆಂಗಳೂರು ರಸ್ತೆಯಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಕಾರ್-ಲಾರಿ ನಡುವಿನ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತರಾಗಿದ್ದಾರೆ. ಮೃತರನ್ನು ಮಾಲೂರು ತಾಲೂಕಿನ ಬೆರಗನಹಳ್ಳಿಯ ಅಶೋಕ್(32) ಎಂದು ಗುರುತಿಸಲಾಗಿದೆ. ಇವರು ಪತ್ನಿ ಮತ್ತು ಮಗಳೊಂದಿಗೆ ತಿರುಪತಿಗೆ ಹೋಗುತ್ತಿದ್ದರು. ಚಿತ್ತೂರು ಕಡೆಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿಗೆ ನಿಯಂತ್ರಣ ತಪ್ಪಿದ ಕಾರು ಡಿಕ್ಕಿ ಹೊಡೆದಿದೆ. ಕಾರು ಚಲಾಯಿಸುತ್ತಿದ್ದ ಅಶೋಕ್ ಸ್ಥಳದಲ್ಲೇ ಮೃತಪಟ್ಟರೆ, ಪತ್ನಿ ಮತ್ತು ಮಗಳು ಗಾಯಗೊಂಡಿದ್ದಾರೆ. ಗಂಗಾವರಂ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

